ಅಪನಂಬಿಕೆ-ಅತಿ ಕಾಳಜಿಯಿಂದ ಸ್ಕಿಜೋಫ್ರೇನಿಯಾ
ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ
Team Udayavani, May 27, 2022, 4:56 PM IST
ಕಾರವಾರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಯನ್ನು ನಿರ್ಲಕ್ಷ್ಯ ಮಾಡದೆ ಅಗತ್ಯ ಚಿಕಿತ್ಸೆ ಔಷಧೋಪಚಾರ ಕೊಡಿಸುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಬಾಳುವಂತೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ್ ಹೇಳಿದರು.
ಜಿಲ್ಲಾ ಆಡಳಿತ, ಜಿಪಂ, ಡಿಎಚ್‌ಒ ಇಲಾಖೆ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಾನಸಿಕ ಆರೋಗ್ಯ ವಿಭಾಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಡಿಎಚ್‌ಒ ಕಚೇರಿ ಸಭಾಭವನದಲ್ಲಿ ನಡೆದ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಕಿಜೋಫ್ರೇನಿಯಾ ರೋಗವು ಮಾನಸಿಕ ಖನ್ನತೆಯಿಂದ ಬಳಲುವ ಕಾಯಿಲೆಯಾಗಿದ್ದು, ವಿಶ್ವದಾದ್ಯಂತ ಕಂಡುಬರುವ ರೋಗವಾಗಿದೆ. ಎಲ್ಲರೂ ಒಂದಿಲ್ಲೊಂದು ರೀತಿ ಈ ರೋಗಕ್ಕೆ ತುತ್ತಾಗುತ್ತಲೇ ಇರುತ್ತಾರೆ.
ಅನುಮಾನ, ಅಪನಂಬಿಕೆ, ಅತಿಯಾದ ಕಾಳಜಿ ಈ ರೋಗಕ್ಕೆ ರಹದಾರಿಯಾಗಿದ್ದು, ಮಾನಸಿಕವಾಗಿ ಗಟ್ಟಿತನ ಬೆಳೆಸಿಕೊಳ್ಳುವ ಮೂಲಕ ರೋಗ ಸುಳಿಯದಂತೆ ನೋಡಿಕೊಳ್ಳಬಹುದಾಗಿದೆ ಎಂದರು.
ಮಾನಸಿಕ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ, ಔಷಧೋಪಚಾರ ಲಭ್ಯವಿದ್ದು ಅದರ ಪ್ರಯೋಜನ ಪಡೆದು ಮುಖ್ಯವಾಹಿನಿಗೆ ಬರುವ ಕಾರ್ಯವಾಗಬೇಕು. ವೈದ್ಯಕೀಯ ನೆರವು ಪಡೆಯುವುದು ಹಾಗೂ ಕೊಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಮಾನಸಿಕ ರೋಗದಿಂದ ಬಳಲುತ್ತಿರುವವರು ಕಂಡುಬಂದಲ್ಲಿ ಅಂತಹವರಿಗೆ ಚಿಕಿತ್ಸೆ ಕೊಡಿಸಲು ಸಂಬಂಧಿಸಿದವರು ಇಲ್ಲವೇ ಸುತ್ತಮುತ್ತಲಿನವರು ಅಗತ್ಯ ಕಾಳಜಿ ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ| ಶಂಕರ್‌ರಾವ್ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ವೈದ್ಯಕೀಯ ಅಧಿಕಾರಿ ಶಿವಾನಂದ ಮಾತನಾಡಿ, ಈ ರೋಗವು ವ್ಯಕ್ತಿಯು ತನ್ನಿಂದ ತಾನೇ ತಂದುಕೊಳ್ಳುವಂತಹದ್ದು. ಎಷ್ಟೇ ಕಷ್ಟದ ಪರಿಸ್ಥಿತಿ ಎದುರಾದರೂ ಕುಗ್ಗದೇ ಗಟ್ಟಿಯಾಗಿ ನಿಲ್ಲಬೇಕು. ಬೇರೆಯವರ ನಕಾರಾತ್ಮಕ ಮಾತುಗಳಿಗೆ ನಿರ್ಲಕ್ಷ್ಯ ವಹಿಸಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಮನಸಿನ ಕೊಳೆಯನ್ನು ತೊಡೆದು ಹಾಕಬೇಕು. ಸ್ವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.
ಮಾನಸಿಕ ಖನ್ನತೆಯಿಂದ ಬಳಲುತ್ತಿರುವವರಿಗೆ ಅಗತ್ಯ ಚಿಕಿತ್ಸೆ ಹಾಗೂ ಔಷಧೋಪಚಾರ ನೀಡಲು ಆರೋಗ್ಯ ಇಲಾಖೆ ಸಿದ್ಧವಾಗಿದೆ. ಅಂತಹ ವ್ಯಕ್ತಿಗಳು ಕಂಡುಬಂದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಚಿಕಿತ್ಸೆ ಕೊಡಿಸಲು ಮುಂದಾಗಬೇಕೆಂದರು.
ಡಿಎಚ್‌ಒ ಶರದ್ ಅಧ್ಯಕ್ಷತೆ ವಹಿಸಿ, ಸರಕಾರದ ವತಿಯಿಂದ ದೊರೆಯುವ ಆರೋಗ್ಯ ಸವಲತ್ತುಗಳನ್ನು ಅಗತ್ಯವಿರುವವರು ಪಡೆಯಬೇಕು ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅನ್ನಪೂರ್ಣ ವಸ್ತ್ರದ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ರಮೇಶ್‌ರಾವ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ| ಜಗದೀಶ ನಾಯ್ಕ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಅರ್ಚನಾ ನಾಯ್ಕ, ಜಿಲ್ಲಾ ಆಸ್ಪತ್ರೆ ಮನೋರೋಗ ತಜ್ಞ ಡಾ| ಅಕ್ಷಯ್ ಘಾಟಕ, ಟಿಎಚ್‌ಒ ಡಾ| ಸೂರಜ್ ನಾಯಕ್ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.