‘ಲಸಿಕೆ ಪಡೆಯುವ ಮೊದಲು ರಕ್ತದಾನ ಮಾಡಿ ಪ್ಲೀಸ್’: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನ


Team Udayavani, Apr 24, 2021, 8:30 AM IST

ಲಸಿಕೆ ಪಡೆಯುವ ಮೊದಲು ರಕ್ತದಾನ: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನಕ್ಕೆ ಮೆಚ್ಚುಗೆ

ಶಿರಸಿ: ಕೇಂದ್ರ ಸರಕಾರ ಕೋವಿಡ್ 19ರ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಲು ಮುಕ್ತ ಅವಕಾಶ ಪ್ರಕಟಿಸಿದೆ. ಸರಕಾರಗಳಿಂದ ಕೋವಿಡ್ ನಿಯಂತ್ರಣಕ್ಕೆ ಇದು ಅತ್ಯಂತ  ಮಹತ್ವದ ನಡಯಾಗಿದೆ.

ಈ ನಡೆಯ ಬೆನ್ನಲ್ಲೇ ಶಿರಸಿಯ ವೈದ್ಯೆಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೊದಲು ಅರ್ಹ ದಾನಿಗಳು ‘ರಕ್ತದಾನ ಮಾಡಿ ಪ್ಲೀಸ್’ ಎಂಬ ವಿನೂತನ ಜಾಗೃತಿ ಅಭಿಯಾನವನ್ನೂ ಆರಂಭಿಸಿದ್ದಾರೆ.

ಏನಿದು ಅಡಚಣೆ?

ಕೋವಿಡ್ ನಿರೋಧಕ ಲಸಿಕೆ ಅಭಿಯಾನವು ಮೇ 1ರಿಂದ 18ರಿಂದ 45 ವರ್ಷದವರಿಗಾಗಿ ಆರಂಭವಾಗುತ್ತದೆ. ರಾಷ್ಟ್ರಿಯ ರಕ್ತ ಸಂಚರಣ ಪರಿಷತ್ (ಎಬಿಟಿಸಿ) ಪ್ರಕಾರ ಯಾವುದೇ ಲಸಿಕೆ ಪಡೆದ ನಾಲ್ಕು ವಾರಗಳ ತನಕ ರಕ್ತದಾನ ಮಾಡಲು ಅವಕಾಶ ಇಲ್ಲ. ಕೋವಿಡ್ ಲಸಿಕೆ ಎರಡು ಹಂತದಲ್ಲಿ ಪಡೆಯಬೇಕು. ಈ ಹಂತದಲ್ಲಿ ದೇಶದಲ್ಲಿ ರಕ್ತದ ಕೊರತೆ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಕೊರೊನಾ ಭಯದದಲ್ಲಿ ಮೊದಲೇ ರಕ್ತದಾನಿಗಳ ಕೊರತೆ ಇದೆ. ಕಳೆದೊಂದು ವರ್ಷದಿಂದ ರಕ್ತದಾನ ಶಿಬಿರಗಳೂ ಹೆಚ್ಚು ನಡೆದಿಲ್ಲ.

ಪರಿಹಾರ ಏನು?

ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಐಎಂಎ ಲೈಫ್‌ಲೈನ್  ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ. ಸುಮನ್ ದಿನೇಶ ಹೆಗಡೆ, ಲಸಿಕೆಗೂ ಮೊದಲು ರಕ್ತದಾನ ಮಾಡಿ ಎಂಬ ಮನವಿ ಮಾಡಿಕೊಳ್ಳುತ್ತಿದ್ದಾರೆ. ರಕ್ತ ನಿಧಿಗಳಲ್ಲಿ ರಕ್ತ ಸಂಗ್ರಹಣಾ ಕೊರತೆ ನೀಗಿಸಲು ಇದೊಂದೇ ದಾರಿಯಾಗಿದೆ.

ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ, ಮನವಿಗಳ ಮೂಲಕ 18ರಿಂದ 45 ವರ್ಷದೊಳಗಿನ ಜನರಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದಾರೆ. ಇದೇ ವಯಸ್ಸಿನ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುತ್ತಾರೆ. ಒಮ್ಮೆ ರಕ್ತದಾನ ಮಾಡಿದರೆ ಒಬ್ಬ ಪುರುಷ ದಾನಿಗೆ 3, ಮಹಿಳಾ ದಾನಿಗೆ 4 ತಿಂಗಳ ಕಾಲ ಬಿಡುವು ಬೇಕಿದೆ ಎಂಬುದೂ ಉಲ್ಲೇಖನೀಯ.

ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ ಆರಂಭ: ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಅವಕಾಶ

ಡಾ.ಸುಮನ್ ಹೆಗಡೆ, ಪ್ರಥಮ ಹಂತದ ಲಸಿಕೆ ಪಡೆಯುವ ಮೊದಲೇ ರಕ್ತದಾನ ಮಾಡಿ ಲಸಿಕೆ ಪಡೆಯಬಹುದು. ಅಥವಾ ಈಗ ಕೊಟ್ಟಿಲ್ಲ ಎಂದರೆ ಎರಡನೇ ಲಸಿಕೆ ಪಡೆಯುವ ಮುನ್ನವೂ ರಕ್ತದಾನ ಮಾಡಬಹುದು ಎಂದು ಸಲಹೆ ಮಾಡುತ್ತಾರೆ.

ಲಸಿಕೆ ಪಡೆಯುವ ಮೊದಲೇ ರಕ್ತದಾನ ಮಾಡಿದರೆ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಲು ಸಾಧ್ಯವಿದೆ. ಈ ಸಂದೇಶವನ್ನು ವಾಟ್ಸಪ್‌ಗಳಲ್ಲಿ ಹಾಕಿದಾಗ ದಾನಿಗಳೂ ಉತ್ಸುಕರಾಗಿ ಸ್ಪಂದಿಸುತ್ತಿದ್ದು, ತಾವೂ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡುವದಾಗಿ ತಿಳಿಸಿದ್ದಾರೆ ಎನ್ನುತ್ತಾರೆ ಡಾ. ಸುಮನ್ ಹೆಗಡೆ.

ಅಪಘಾತದಲ್ಲಿ ಗಾಯಗೊಂಡು ರಕ್ತ ಕಳೆದುಕೊಂಡವರು, ಗರ್ಭಿಣಿ ಸ್ತ್ರೀಯರಿಗೆ, ಫೆಲಸೀಮಿಯಾ ರೋಗಿಗಳು, ರಕ್ತಹೀನತೆ ಉಳ್ಳವರು, ಕ್ಯಾನ್ಸರ್ ರೋಗಿಗಳ ಜೀವ ಉಳಿಸಲು ಬೇಕು ರಕ್ತ. ಈ ಕಾರಣದಿಂದ ಸಂಭಾವ್ಯ ರಕ್ತದ ಕೊರತೆ ಆಗದಂತೆ ಕೈ ಜೋಡಿಸಬೇಕಿದೆ.

ಕೈ ಜೋಡಿಸಿ

ಸಮುದಾಯ ಮನಸ್ಸು ಮಾಡಿದರೆ ಜೀವ ಉಳಿಸಬಹುದು. ಲಸಿಕೆಗೂ ಮೊದಲು ರಕ್ತದಾನ ಮಾಡಿ ಜೀವ ಉಳಿಸಲು ಕೈ ಜೋಡಿಸುತ್ತೇವೆ.

– ಡಾ. ಸುಮನ್ ಹೆಗಡೆ, ಪೆಥಾಲಜಿಸ್ಟ್

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.