ಮತದಾರರ ಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ

Team Udayavani, Apr 14, 2019, 5:17 PM IST

nc-2
ಕಾರವಾರ: ಮತದಾರರ ಜಾಗೃತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರವಾರ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಹಮ್ಮಿಕೊಂಡ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಉದ್ಘಾಟಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಮತದಾರರಿಗೆ ವಿವಿಧ ಮಾಹಿತಿಯುಳ್ಳ ವಸ್ತು ಪ್ರದರ್ಶನ ಇದಾಗಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ, ಯುವ ಜನತೆಗೆ, ಸಾರ್ವಜನಿಕರಿಗೆ ನೋಡಲು ಲಭ್ಯವಿರುತ್ತದೆ. ಇದರ ಉದ್ದೇಶ ಮತದಾನದ ಮಹತ್ವವನ್ನು ಪ್ರಜೆಗಳಿಗೆ ತಲುಪಿಸುವುದಾಗಿದೆ ಎಂದು ಅವರು ಹೇಳಿದರು.
ಚುನಾವಣಾ ಆ್ಯಪ್‌, ಸಿ ವಿಜಿಲ್‌ ಸೇರಿದಂತೆ ವಿವಿಧ ಫೋಟೋ ಪ್ರದರ್ಶನ ಇದಾಗಿದೆ ಎಂದು ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರಿಗೆ ಪೂರಕ ಮಾಹಿತಿ ನೀಡುವ ವಿವಿಧ ವಿಭಿನ್ನ ಕಾರ್ಯಕ್ರಮವನ್ನು ಈಗಾಗಲೇ ವಿವಿಧೆಡೆ
ಹಮ್ಮಿಕೊಳ್ಳಲಾಗಿದೆ. ಇದರಿಂದ ಮತದಾರರು ಕಳೆದ ವರ್ಷಕ್ಕಿಂತಲೂ ಹೆಚ್ಚು ಜಾಗೃತರಾಗಿದ್ದಾರೆ. ನಾವು ಭೇಟಿ ನೀಡಿದೆಲ್ಲಡೆ ಮತದಾರರೇ ಇವಿಎಂ, ವಿವಿಪ್ಯಾಟ್‌ ಬಗ್ಗೆ ವಿವರಿಸುತ್ತಾರೆ. ಅನಕ್ಷರಸ್ಥರ ಬಳಿಯೂ, ಕುತೂಹಲಕ್ಕೆ ಚುನಾವಣೆ ಬಗ್ಗೆ ಕೇಳಿದಾಗ ಮತದಾರರು ಮಾಹಿತಿ ಹಂಚಿಕೊಳ್ಳುತ್ತಾರೆ. ಇದರಿಂದ ಜಿಲ್ಲಾಡಳಿತದಿಂದ ಕೃಗೊಂಡ ಜಾಗೃತಿ ಪ್ರಯತ್ನ ಸಾರ್ಥಕವಾಗಿದೆ ಎಂದರು.
ಇದರ ಸದ್ಬಳಕೆ ಮಾಡಿಕೊಂಡು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಹೇಳಿದರು. ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಎಂ.ರೋಷನ್‌, ಐಎಎಸ್‌ ಪ್ರಭಾರಿ ದಿಲೀಷ್‌ ಸಸಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.