ಶಾಶ್ವತ ರಸ್ತೆ ನಿರ್ಮಿಸಿ ಕೊಡಲು ರೈತರ ಆಗ್ರಹ
Team Udayavani, Jun 18, 2019, 8:34 AM IST
ಹಳಿಯಾಳ: ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಹಳಿಯಾಳ: ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ನೂರಾರು ರೈತರು ಸೋಮವಾರ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ಮೂರು ಟ್ರ್ಯಾಕ್ಟರ್, ಟ್ರ್ಯಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ರೈತರು, ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ದಾರಿ ಸಮಸ್ಯೆಯ ಬಗ್ಗೆ ಈ ಹಿಂದೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದಾಗ ತಾತ್ಕಾಲಿಕವಾಗಿ ದಾರಿ ಮಾಡಿಕೊಡುವ ವ್ಯವಸ್ಥೆ ಮಾಡಿದ್ದರು. ಆದರೆ ದಾರಿ ಮಧ್ಯೆ ಜಮೀನು ಇರುವ ರೈತರು ಸದ್ಯ ತಕರಾರು ಮಾಡಿ ದಾರಿ ಬಂದ್ ಮಾಡಿದ್ದರಿಂದ ಅನಾನುಕೂಲವಾಗಿದೆ ಎಂದು ರೈತರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ಕೊನೆಗೂ ರೈತರ ಮನವೊಲಿಸುವಲ್ಲಿ ಯಶಸ್ವಿಯಾದ ಗುಳಗುಳಿ ಅವರು, ಶಾಶ್ವತ ಪರಿಹಾರ ಕಲ್ಪಿಸಿ ಕೊಡುವ ಭರವಸೆ ನೀಡಿದ್ದರು. ನಂತರ ರೈತರು ಪ್ರತಿಭಟನೆ ಸ್ಥಗೀತಗೊಳಿಸಿದರು. ಆದರೆ ಜೂ.18 ರಂದೇ ಸಮಸ್ಯೆಗೆ ಪರಿಹಾರ ಒದಗಿಸಬೇಕು ಇಲ್ಲವಾದಲ್ಲಿ ಜೂ.19 ರಂದು ತಮ್ಮ ದನಕರುಗಳೊಂದಿಗೆ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ರೈತರು ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರೈತರಾದ ಯಲ್ಲಪ್ಪಾ ಮಾಂಗಲಿ, ಅರುಣ ಮಿರಾಶಿ, ನಾರಾಯಣ ಕೆಸರೆಕರ, ನಾಮದೇವ ಮಿಶಾಳೆ, ರಾಮದೇವ ಕಡೊಲ್ಕರ, ಬಾಳುಂದ್ರಿ, ರಾಮಾ ಪವಾರ, ಅಶೋಕ ಜೈನ, ಮಂಗಳು ಜಾಧವ, ನಂದಾ ಗೌಡಾ, ಅರ್ಜುನ, ಪರಶುರಾಮ, ಯಲ್ಲಪ್ಪಾ ಗೌಡಾ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.