ಅತಿಕ್ರಮಣದಾರರ ಹಕ್ಕಿಗಾಗಿ ಹೋರಾಟ
•ಆಡಳಿತಾತ್ಮಕ-ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಅರಣ್ಯವಾಸಿಗಳಿಗೆ ತೊಡಕು
Team Udayavani, Aug 2, 2019, 10:44 AM IST
ಮುಂಡಗೋಡ: ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ ಸಭೆಯಲ್ಲಿ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಮಾತನಾಡಿದರು.
ಮುಂಡಗೋಡ: ರಾಜಕೀಯ ಅಧಿಕಾರಕ್ಕಾಗಿ ಹೋರಾಟ ಮಾಡುವುದಿಲ್ಲ. ವಾಸ್ತವ್ಯ ಮತ್ತು ಸಾಗುವಳಿಗಾಗಿ ಅರಣ್ಯ ಭೂಮಿ ಅವಲಂಬಿತವಾಗಿರುವ ಅರಣ್ಯ ಅತಿಕ್ರಮಣದಾರರ ಹಕ್ಕಿಗಾಗಿ ಮುಂದಿನ ದಿನಗಳಲ್ಲಿ ಹೋರಾಟ ಮಾತ್ರ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಹೇಳಿದರು.
ಅವರು ಪಟ್ಟಣದ ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ ಕಾರ್ಯಾಲಯದ ಮಾಹಿತಿ ಕೇಂದ್ರದಲ್ಲಿ ಅರಣ್ಯ ಅತಿಕ್ರಮಣದಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು. ರಾಜಕೀಯ ಸಂಘಟನೆ, ರಾಜಕೀಯ ಚಟುವಟಿಕೆ ಹೊರತಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದಾರರ ಪರ ಸಂಘಟನೆ ಮತ್ತು ಉಚ್ಛ ಮತ್ತು ಸರ್ವೋಚ್ಚ ನ್ಯಾಯಾಲಯಗಳಲ್ಲಿ ಅತಿಕ್ರಮಣದಾರರ ಪರ ಕಾನೂನಾತ್ಮಕ ಹೋರಾಟ ಮಾಡಲು ಒತ್ತು ಮತ್ತು ಸಮಯವನ್ನು ಮೀಸಲಿಡಲಾಗುವುದು ಎಂದು ಹೇಳಿದರು.
ಆಡಳಿತಾತ್ಮಕ ಹಾಗೂ ಜನಪ್ರತಿನಿಗಳ ಇಚ್ಛಾಶಕ್ತಿ ಕೊರತೆಯಿಂದ ಅರಣ್ಯವಾಸಿಗಳು ಭೂಮಿ ಹಕ್ಕು ಕನಸಾಗಿರುವುದು ವಿಷಾದಕರ ಎಂದು ಹೇಳಿದರು.
ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿಗಳ ಪರ ಇದ್ದಾಗಲೂ, ಕಾನೂನಿಗೆ ವ್ಯತಿರಿಕ್ತವಾಗಿ ಅನುಷ್ಠಾನದ ವೈಫಲ್ಯದಿಂದ ವಿಫಲವಾಗುತ್ತಿದ್ದು ಅರಣ್ಯ ಹಕ್ಕು ಅನುಷ್ಠಾನದಲ್ಲಿನ ಅಂಶದ ಕುರಿತು ಜನಪ್ರತಿನಿಧಿಗಳಿಗೆ ಕಾನೂನಾತ್ಮಕ ಅಂಶಗಳ ತಿಳಿವಳಿಕೆ ಮತ್ತು ಜ್ಞಾನದ ಕೊರತೆ ಮೂಲ ಕಾರಣವಾಗಿದೆ ಎಂದು ಪ್ರತಿಪಾದಿಸಿದರು.
ಕಾನೂನು ಜಾರಿಗೆ ಬಂದು 10 ವರ್ಷಗಳಾದರೂ ಮಂಜೂರಿ ಪ್ರಕ್ರಿಯೆ ಪ್ರಾಥಮಿಕ ಹಂತದಲ್ಲಿರುವುದು ಇದಕ್ಕೆ ನಿದರ್ಶನವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ 1/3 ರಷ್ಟು ಅರಣ್ಯ ಅತಿಕ್ರಮಣದಾರರಿಗೆ ಹಕ್ಕಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಉದ್ದೇಶದಿಂದ ಹೋರಾಟಗಾರರ ವೇದಿಕೆಯು ಸ್ವಂತ ಖರ್ಚಿನಲ್ಲಿ ಉಚ್ಛ ಮತ್ತು ಸರ್ವೋಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದು ನ್ಯಾಯಾಲಯದಿಂದ ಅತಿಕ್ರಮಣದಾರರಿಗೆ ಹಕ್ಕು ದೊರಕಿಸಿಕೊಡುವಲ್ಲಿ ಪೂರಕವಾದ ಆದೇಶ ಮುಂದಿನ ದಿನಗಳಲ್ಲಿ ಬರಬಹುದೆಂಬ ಆಶಾ ಭಾವನೆ ವ್ಯಕ್ತಪಡಿಸಿದರು.
ಶಾಸಕ ಶಿವರಾಮ ಹೆಬ್ಟಾರ ನಡೆ ತಪ್ಪು: ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಹೆಬ್ಟಾರ ಸಂಪೂರ್ಣ ಸ್ವತಂತ್ರರು. ಆದರೆ ಪಕ್ಷ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅಧಿಕಾರ ನೀಡಿದ ಪಕ್ಷವನ್ನು ತ್ಯಜಿಸಿ ಕಾರ್ಯಕರ್ತರ ಕನಸಿನ ಅಭಿವೃದ್ಧಿಯ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ ರಾಜೀನಾಮೆ ನೀಡಿರುವ ನಡೆ ತಪ್ಪು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಶಿವಾನಂದ ಸ್ವಾಗತಿಸಿದರು. ರಾಮ ಗೌಳಿ ವಂದಿಸಿದರು. ಫಕೀರಪ್ಪ ಚಲವಾದಿ, ಚಿದಾನಂದ, ಸೋಮಪ್ಪ, ಶಂಕರ ವಡ್ಡರ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.