ಕುಮಟಾದಲ್ಲಿ ಪ್ರಪ್ರಥಮ ಬಾರಿಗೆ ಚಲನಚಿತ್ರೋತ್ಸವ

Team Udayavani, Nov 21, 2018, 3:51 PM IST

21-november-17.gif

ಕಾರವಾರ: ತಾಂಡವ ಕಲಾನಿಕೇತನ ಬೆಂಗಳೂರು ಮತ್ತು ವೈಭವ ಸಮಿತಿ ಹಮ್ಮಿಕೊಂಡ ಕುಮಟಾ ವೈಭವದ ನಿಮಿತ್ತ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಉತ್ತರ ಕನ್ನಡ ಜಿಲ್ಲಾ ಕಸಾಪ ಸಹಯೋಗದಲ್ಲಿ ನ.23 ರಿಂದ 25ರವರೆಗೆ ಪಟ್ಟಣದ ಕಿತ್ತೂರು ಚೆನ್ನಮ್ಮ ಪಾರ್ಕ್‌ ಪಕ್ಕದ ಪುರಭವನದಲ್ಲಿ‚ತಾಲೂಕಿನಲ್ಲೇ ಮೊಟ್ಟಮೊದಲು ಚಲನಚಿತ್ರೋತ್ಸವ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ತಿಳಿಸಿದ್ದಾರೆ.

ನ.23 ರಂದು ಮುಂಜಾನೆ 10ಕ್ಕೆ ಚಲನಚಿತ್ರೋತ್ಸವವನ್ನು ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸಮಿತಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕುಮಟಾ ವೈಭವ ಸಮಿತಿ ಗೌರವಾಧ್ಯಕ್ಷ ನಾಗರಾಜ ನಾಯಕ ತೊರ್ಕೆ, ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕ ಉಪಸ್ಥಿತರಿರುವರು. ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ ನಾಯ್ಕ ಪ್ರಾಸ್ತಾವಿಕ ಮಾತನಾಡಲಿದ್ದು, ಪತ್ರಕರ್ತ ಎಂ.ಜಿ.ನಾಯಕ ಆಶಯನುಡಿಗಳನ್ನಾಡಲಿದ್ದಾರೆ. ಕುಮಟಾ ತಾಲೂಕು ಕ.ಸಾಪ ಅಧ್ಯಕ್ಷ ಡಾ| ಶ್ರೀಧರ ಉಪ್ಪಿನಗಣಪತಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಗಂಗಾಧರ ಕೊಳಗಿ, ಕೋಶಾಧ್ಯಕ್ಷ ಉಮೇಶ ಮುಂಡಳ್ಳಿ, ಸಹ ಕಾರ್ಯದರ್ಶಿ ಪ್ರೊ| ನಾಗರಾಜ ಹೆಗಡೆ ನಿರ್ವಹಿಸಲಿದ್ದಾರೆ.

ಚಲನಚಿತ್ರೋತ್ಸವದಲ್ಲಿ ನ.23 ರಂದು ಮುಂಜಾನೆ 10:30ಕ್ಕೆ ಚಂಪಾ ಶೆಟ್ಟಿ ನಿರ್ದೇಶನದ ಅಮ್ಮಚ್ಚಿಯೆಂಬ ನೆನಪು, ಮಧ್ಯಾಹ್ನ 3ಕ್ಕೆ ಸತ್ಯಪ್ರಸಾದ್‌ ನಿರ್ದೇಶನದ ರಾಮಾ ರಾಮಾ ರೇ, ನ.24 ರಂದು ಮುಂಜಾನೆ 10ಕ್ಕೆ ವಿಶಾಲ್‌ರಾಜ್‌ ನಿರ್ದೇಶನದ ಜುಲೈ 22 1947, ಮಧ್ಯಾಹ್ನ 3ಕ್ಕೆ ವಿಶಾಲ್‌ರಾಜ್‌ ನಿರ್ದೇಶನದ ಸಾವಿತ್ರಿಬಾಯಿ ಫುಲೆ, ನ.25ರಂದು ಮುಂಜಾನೆ 10ಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಶಾಂತಿ, ಮಧ್ಯಾಹ್ನ 3ಕ್ಕೆ ನಾಗರಾಜ್‌ ಅದ್ವಾನಿ ನಿರ್ದೇಶನದ ಅಗಸಿ ಪಾರ್ಲರ್‌ ಹೀಗೆ ಒಟ್ಟು 6 ಸಿನಿಮಾ ಪ್ರದರ್ಶನಗೊಳ್ಳಲಿದೆ.

ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಆಯಾ ಸಿನಿಮಾದ ನಿರ್ದೇಶಕರು, ಕಲಾವಿದರು ಉಪಸ್ಥಿತರಿರಲಿದ್ದಾರೆ. ಪ್ರೇಕ್ಷಕರು ಪ್ರತಿ ಸಿನಿಮಾ ಪ್ರದರ್ಶನದ ನಂತರ ಅವರೊಂದಿಗೆ ಸಂವಾದಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಅರವಿಂದ ಕರ್ಕಿಕೋಡಿ ವಿವರಿಸಿದ್ದಾರೆ. ನ.25 ರಂದು ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ವಿಮರ್ಶಕ ಡಾ| ಎಂ.ಜಿ.ಹೆಗಡೆ ಸಮಾರೋಪ ನುಡಿಯನ್ನಾಡಲಿದ್ದು ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಚಲನಚತ್ರೋತ್ಸವದ ಸಿನಿಮಾ ಅವಲೋಕನ ಮಾಡಲಿದ್ದಾರೆ. ಕುಮಟಾ ವೈಭವ ಸಮಿತಿ ಸರ್ವಾಧ್ಯಕ್ಷ ಎಂ.ಜಿ. ಭಟ್ಟ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕೃಷ್ಣಾನಂದ ಭಟ್ಟ, ತಾಲೂಕು ಕಸಾಪ ಕಾರ್ಯದರ್ಶಿ ಚಿದಾನಂದ ಭಂಡಾರಿ, ಎಂ.ಎಂ.ನಾಯ್ಕ ನಿರ್ವಹಿಸಲಾದ್ದಾರೆ. ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳುವ ಆಸಕ್ತರು ಪಾಸ್‌ಗಾಗಿ ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ. ಸಂ: 9448438472 ಸಂಪರ್ಕಿಸಬಹುದಾಗಿದೆ ಎಂದು ಅರವಿಂದ ಕರ್ಕಿಕೋಡಿ ಹೇಳಿದ್ದಾರೆ.

ಟಾಪ್ ನ್ಯೂಸ್

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.