Free Bus Pass ಮಾದರಿ ಅನುಸರಿಸಲಿ: ಪ್ರಧಾನಿ ಮೋದಿಗೆ ಸಚಿವ ವೈದ್ಯ ಸಲಹೆ
Team Udayavani, Jun 11, 2023, 3:43 PM IST
ಕಾರವಾರ: ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಅನುಕೂಲವಾಗುವ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಚುನಾವಣೆಗೆ ಮುನ್ನ ಮಾತುಕೊಟ್ಟಂತೆ ಜಾರಿಗೆ ತಂದಿದ್ದೇವೆ .ಈ ಮಾದರಿಯನ್ನು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನುಷ್ಟಾನ ಮಾಡುವಂತೆ ಮೋದಿ ಅವರಿಗೆ ಹೇಳಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಮಾಧ್ಯಮಗಳಿಗೆ ಸೂಚಿಸಿದರು.
ಕಾರವಾರದಲ್ಲಿ ಉಚಿತ ಬಸ್ ಪ್ರಯಾಣದ ಯೋಜನೆ ಶಕ್ತಿಗೆ ರವಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕದ್ರಾ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಹನುಮವ್ವ ಹಾಗೂ ಸದಸ್ಯೆ ಅಶ್ವಿನಿ ಪೆಡ್ನೆಕರ್ ಗೆ ಮೊದಲ ಉಚಿತ ಬಸ್ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಲಾಯಿತು. ಮಹಿಳೆಯರು ಮತ್ತು ವಿದ್ಯಾರ್ಥಿಗಳ ಜೊತೆ ಸೌಜನ್ಯದಿಂದ ವರ್ತಿಸಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ. ಉಚಿತ ಬಸ್ ಪ್ರಯಾಣ ವ್ಯವಸ್ಥೆ ಯಿಂದ ಕೆಎಸ್ ಆರ್ ಟಿಸಿ ಮತ್ತಷ್ಟು ಸದೃಢವಾಗಲಿದೆ. ಈ ಸಂಸ್ಥೆಯನ್ನು ಬಲಗೊಳಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಸರ್ಕಾರ ಮಾಡಲಿದೆ.
120 ಚಾಲಕರ ನೇಮಕಾತಿ
ಬಡವರಿಗೆ ಮಾತು ಕೊಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಉಳಿದ ನಾಲ್ಕು ಗ್ಯಾರಂಟಿಗಳನ್ನು ಅನುಷ್ಟಾನ ಮಾಡುತ್ತೇವೆ. ಕಾದು ನೋಡಿ ಎಂದರು. ಸರ್ಕಾರದ ಬಳಿ ಒಳ್ಳೆಯ ಆಲೋಚನೆ ಇದೆ. ಸರ್ಕಾರ ಜನರಿಗೆ ಸಹಾಯ ಮಾಡಬೇಕು. ಹಿಂದೆ ಏನಾಗಿತ್ತು ನಾನು ಕೆದಕುವುದಿಲ್ಲ. ಬಸ್ ಗಳ ಕೊರತೆ, ಸಿಬ್ಬಂದಿ ಕೊರತೆ, ಗ್ರಾಮಗಳಿಗೆ ಬಸ್ ಸಂಚಾರ ಇಲ್ಲದಿರುವುದಕ್ಕೆ ಬಿಜೆಪಿ ಸರ್ಕಾರ ಕಾರಣ. ಇದಕ್ಕಿಂತ ಹೆಚ್ಚಿಗೆ ಹೇಳಲಾರೆ .ನಿಮಗೆ ಎಲ್ಲಾ ಗೊತ್ತಿದೆ .ಈಗ ನಾವು ಹೊಸ ಬಸ್ ಖರೀದಿಸುತ್ತೇವೆ. ತಕ್ಷಣ ಸಿಬ್ಬಂದಿ ಕೊರತೆ ನೀಗಲು ಹೊರ ಗುತ್ತಿಗೆ ಆಧಾರದಲ್ಲಿ 120 ಜನ ಚಾಲಕರನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ತೇವೆ ಎಂದರು. ಈಗಾಗಲೇ ಈ ಸಂಬಂಧ ಪ್ರಕ್ರಿಯೆ ಆರಂಭವಾಗಿವೆ. ಕೆಲ ಮಜಿರೆಗಳಿಗೆ ಬಸ್ ಹೊಗಲು ರಸ್ತೆ, ಸೇತುವೆ ನಿರ್ಮಾಣದ ಅವಶ್ಯಕತೆ ಇದೆ. ಯಾವ ರೂಟ್ ಗಳಲ್ಲಿ ಬಸ್ ಸಂಚಾರ ಇತ್ತೋ ಅದನ್ನು ಮೊದಲು ಉಳಿಸಿಕೊಳ್ಳಬೇಕಿದೆ. ಹಂತ ಹಂತವಾಗಿ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಸೈಲ್ ಮಾತನಾಡಿ ಸಿದ್ದರಾಮಯ್ಯ 15 ನೇ ಬಜೆಟ್ ಮಂಡಿಸುತ್ತಿದ್ದಾರೆ. ಅವರ ದೂರ ದೃಷ್ಟಿ ಆಡಳಿತದಿಂದ ಅನೇಕ ಕೆಲಸ ಆಗಲಿವೆ. ಕಾರವಾರ ಕಾರಗೃಹ ಸ್ಥಳಾಂತರಿಸಿ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಸೈನಿಕ ಬೋರ್ಡ್ ಕಚೇರಿ ಜಾಗ, ಸ್ವಲ್ಪ ಮಟ್ಟಿಗೆ ಪಾಲಿಟೆಕ್ನಿಕ್ ಕಾಲೇಜು ಜಾಗ ಬಳಸಿ ಕೊಂಡು ಟ್ರಾಮಾ ಕೇರ್ ಸೆಂಟರ್ ಹೆಚ್ಚುವರಿ150 ಹಾಸಿಗೆ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಯತ್ನಿಸಲಾಗುವುದು ಎಂದರು. ಕೆರವಡಿ, ಗಂಗಾವಳಿ ಸೇತುವೆ ಕೆಲಸವನ್ನು ಸದ್ಯದಲ್ಲಿ ಪೂರ್ಣ ಮಾಡಲಿದ್ದೇವೆ ಎಂದರು.
ಕೆಎಸ್ ಆರ್ ಟಿಸಿ ಕಾರವಾರ ಶಿರಸಿ ಘಟಕದ ಜಿಲ್ಲಾಧಿಕಾರಿ ಶ್ರೀನಿವಾಸ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ವಿಷ್ಣುವರ್ಧನ,ಕಾರವಾರ ಡಿಪೋ ಮ್ಯಾನೇಜರ್ , ಚಾಲಕರು, ನಿರ್ವಾಹಕರು ,ಸಾರ್ವಜನಿಕರು,ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.