ಬಾಲ್ಯ ವಿವಾಹ ತಡೆಗೆ ಗ್ರಾಮಮಟ್ಟದಲ್ಲಿ ರಕ್ಷಣಾ ಸಮಿತಿ ರಚನೆ: ನಾಗಣ್ಣ ಗೌಡ
Team Udayavani, Jan 17, 2023, 4:56 PM IST
ಕಾರವಾರ: ಬಾಲ್ಯವಿವಾಹ ತಡೆಗೆ ಗ್ರಾಮ ಹಾಗೂ ಗ್ರಾಮ ಪಂಚಾಯತಿ ಹಾಗೂ ನಗರದ ವಾರ್ಡ್ ಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಲಾಗುವುದು. ಈ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿ, ಬಾಲ್ಯ ವಿವಾಹ ಎಂದರೆ ಜೈಲ್ ವಿವಾಹ ಎಂಬ ಎಚ್ಚರಿಗೆ ಮೂಡಿಸಲಾಗುವುದು ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಾಣ್ಣ ಗೌಡ ಹೇಳಿದರು.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಬೆಂಗಳೂರು ಶಾಲೆಯೊಂದರಲ್ಲಿ ಮಕ್ಕಳ ಬ್ಯಾಗ್ ನಲ್ಲಿ ಸಿಕ್ಕ ಆತಂಕಾರಿ ವಸ್ತುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು ಈ ಸಂಬಂಧ ಮೆಡಿಕಲ್ ಶಾಪ್ ಗಳಲ್ಲಿ ಅಪ್ರಾಪ್ತ ಮಕ್ಕಳಿಗೆ ಗರ್ಭನಿರೋಧಕಗಳನ್ನು ಮಾರದಂತೆ ಆರೋಗ್ಯ ಇಲಾಖೆಯ ಮೂಲಕ ಸೂಚನೆ ಕೊಡಿಸಲಾಗಿದೆ. ವೈನ್ ಶಾಪ್ ಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಅಬಕಾರಿ ಅಧಿಕಾರಿಗಳಿಗೆ ಸೂಕ್ತ ಎಚ್ಚರಿಕೆ ಕೊಡಿಸಲಾಗಿದೆ. ಅಪ್ರಾಪ್ತ ವಯಸ್ಕ ಮಕ್ಕಳಿಗೆ ಮದ್ಯ ಮಾರಾಟ ಮಾಡಿದರೆ ಅಂತ ಶಾಪ್ ಗಳ ಲೈಸೆನ್ಸ ರದ್ದು ಮಾಡಲಾಗುವುದು ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ 26 ಬಾಲ್ಯ ವಿವಾಹ ತಡೆದಿದ್ದೇವೆ. ಕಾರವಾರದಲ್ಲಿ ಒಂದು ಪ್ರಕರಣ ದಾಖಲಾಗಿದೆ. 45 ಜನ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣ ಕಾರವಾರ ಜಿಲ್ಲೆಯಲ್ಲಿ ದಾಖಲಾಗಿವೆ. 26 ಜಿಲ್ಲೆ ಪ್ರಯಾಣ ಮಾಡಿದ್ದೇನೆ. ರಾಜ್ಯದಲ್ಲಿ 2600 ಅತ್ಯಾಚಾರ ಪ್ರಕರಣ ದಾಖಲಾಗಿವೆ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಇಂತಹ ಘಟನೆಗಳಿವೆ. ಕೆಲವು ಕಡೆ ಶಿಕ್ಷಕರು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ ಘಟನೆಗಳು ನಡೆದಿವೆ. ಇದು ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ. ಹಾಗಾಗಿ ಶಿಕ್ಷಕರಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ಇಲಾಖೆಯ ಮುಖ್ಯಸ್ಥರ ಮೂಲಕ ನೀಡಲಾಗುತ್ತಿದೆ ಎಂದರು.
ಮಕ್ಕಳ ಭಿಕ್ಷಾಟನೆ ತಡೆಯಲು ಕ್ರಮಗಳಾಗುತ್ತಿವೆ. ಉತ್ತರ ಕನ್ನಡದಲ್ಲಿ ಸಹ ಭಿಕ್ಷಾಟನೆ ಮಾಡುತ್ತಿದ್ದ ಮಕ್ಕಳನ್ನು ಬಾಲಮಂದಿರದಲ್ಲಿ ರಕ್ಷಿಸಲಾಗಿದೆ ಎಂದರು.
ಶಿರಸಿ ಸುತ್ತಮುತ್ತ ಇರುವ ದುರಮುರಗಿ ಜನಾಂಗದ ಮಕ್ಕಳ ಸಮೇತ ದೇವರ ಹೆಸರಲ್ಲಿ ಸಂಪ್ರದಾಯಕ್ಕಾಗಿ ಊರೂರು ಅಲೆದು ಭಿಕ್ಷಾಟನೆಗೆ ಮಾಡುವ ಪದ್ದತಿ ತೊಡೆದು ಹಾಕಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಎರಡು ದಶಕಗಳಿಂದ ಯಾಕೆ ಸಾಧ್ಯವಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಇಂದೇ ಮಾಹಿತಿ ಪಡೆಯುವೆ. ಇದಕ್ಕಾಗಿ ಜಾಗೃತಿ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದರು.
ಅಧಿಕಾರ ವಹಿಸಿಕೊಂಡು 75 ದಿನಗಳಾಗಿವೆ. ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರ ಅವಧಿ ಮೂರು ವರ್ಷ. ಆಯೋಗಕ್ಕೆ ಹಣಕಾಸಿನ ಕೊರತೆ ಇಲ್ಲ. ಮಕ್ಕಳ ರಕ್ಷಣೆ, ಅಲೆಮಾರಿ ಮಕ್ಕಳಿಗೆ ಶಿಕ್ಷಣ ಹಾಗೂ ಬಡಕುಟುಂಬ ಹಾಗೂ ಬುಡಕಟ್ಟು ಕುಟುಂಬದ ಮಕ್ಕಳ ರಕ್ಷಣೆಗೆ ಹಾಗೂ ಬಾಲ್ಯ ವಿವಾಹ ತಡೆಗೆ ಪ್ರಾಮಾಣಿಕ ಕೆಲಸ ಮಾಡುವೆ ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಮತ್ತು ಮಕ್ಕಳ ರಕ್ಷಣಾ ಘಟಕದ ಐಗಳ, ಡಿವೈಎಸ್ಪಿ ವೆಲಂಟೈನ್ ಡಿಸೊಜಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.