ಪುಷ್ಪಗಳ ಲೋಕಕ್ಕೆಉಚಿತ ಪ್ರವೇಶ

Team Udayavani, Feb 1, 2020, 3:11 PM IST

UK-TDY-1

ಶಿರಸಿ: ನೂರಾರು ಬಗೆಯ ಪುಷ್ಪಗಳು, ಫಲಗಳ ಅನಾವರಣ, ಮನ ತಣಿಸುವ ಚಿತ್ತಾಕರ್ಷಕ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಇಲ್ಲಿಯ ತೋಟಗಾರಿಕಾ ಇಲಾಖೆ ಆವಾರದಲ್ಲಿ ಭರದ ಸಿದ್ಧತೆಗಳು ನಡೆದಿದೆ.

ಫೆ.1 ರಿಂದ 4ರವರೆಗೆ ನಡೆಯಲಿರುವ ಪ್ರದರ್ಶನದಲ್ಲಿ 32 ಜಾತಿಯ 3ಲಕ್ಷಕ್ಕೂ ಹೆಚ್ಚು ಹೂಗಳ ಜೋಡಣೆ ಕಾರ್ಯ ಅಂತಿಮವಾಗಿ ಸಿದ್ಧವಾಗಿದೆ. ಫಲಪುಷ್ಪ ಪ್ರದರ್ಶನದಲ್ಲಿ ಕಲಾ ಕೃತಿಗಳ ತಯಾರಿಕೆಗೆ ಪಿಗೊನಿಯಾ, ಮೆರಿಗೊಲ್ಡ್‌, ಪಿಂಕ್ಸ್‌, ಪುಷ ಪೆಂಟಾಸ್‌, ಸಾಲ್ವಿಯಾ ಹಾಗೂ ಎಲ್ಲ ಜಾತಿಯ ಸೇವಂತಿಗೆಗಳು ನಳಿಸಲಿವೆ. ಸರ್ವಧರ್ಮ ಸಮನ್ವಯತೆ ಸಾರುವ ಕಮಲ್‌ ಮಹಲ್‌ ಮಾದರಿಯನ್ನು ಸುಮಾರು 1ಲಕ್ಷ ರೂ.ಗೂ ಅಧಿ ಕ ಮೊತ್ತದ ಹೂವುಗಳಿಂದ, ಅಡಕೆ, ಅನಾನಸ್‌ ಮಂಟಪ, ಜಿಲ್ಲೆಯಲ್ಲಿರುವ ಪಕ್ಷಿ ಸಂಕುಲಗಳು, ಚಂದ್ರಯಾನ 3 ರಾಕೆಟ್‌ ಹೂವಿನಿಂದ ಸಿದ್ಧಪಡಿಸಲಾಗಿದೆ.

ವರ್ಟಿಕಲ್‌ ಗಾರ್ಡನ್‌ ಮಾದರಿಗಳು, ತರಕಾರಿ ಕೆತ್ತನೆ, ಮಾದರಿ ತರಕಾರಿ ಪ್ರಾತ್ಯಕ್ಷಿಕೆಗಳು, ವಿವಿಧ ಉದ್ಯಾನವನ ಮಾದರಿ, ವಿವಿಧ ಜಾತಿಯ ಹೂವುಗಳ ಜೋಡಣೆ ವಿಶೇಷತೆ ಫಲಪುಷ್ಪ ಪ್ರದರ್ಶನ ಒಳಗೊಂಡಿದೆ. 20 ಅಡಿ ಉದ್ದ ಹಾಗೂ 20 ಅಡಿ ಅಗಲದ ಪುಷ್ಪ ರಂಗೋಲಿ ಅನಾವರಣಗೊಳ್ಳಲಿದೆ. ರಂಗೋಲಿಯಲ್ಲಿ ಅರಳಿಸುವ ಮೂಲಕ ಪೇಜಾವರ ಮಠದ ದಿ. ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಗೌರವಾರ್ಪಣೆ ಕೂಡ ನಡೆಯಲಿದೆ. ವಿವಿಧ ಜಾತಿಯ ಹೂವುಗಳು ಪಾಟ್‌ಗಳಲ್ಲಿ, ಮಡಿಗಳಲ್ಲಿ ಅರಳಿನಿಂತಿವೆ. ಹಾಗೇ ತರಕಾರಿ ಗಿಡಗಳು ಫಲ ನೀಡಿ ನಳನಳಿಸಿ ಪುಷ್ಪ ಪ್ರೇಮಿಗಳ ಗಮನ ಸೆಳೆಯಲಿದೆ.

ಇಲಾಖೆ ಆವಾರದಲ್ಲಿ 70ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದ್ದು ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ಉಪಯೋಗವಾಗುವ ಯಂತ್ರೋಪಕರಣಗಳ ಪ್ರದರ್ಶನ, ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಸಾವಯವ ಉತ್ಪನ್ನಗಳ ಬಳಕೆ, ಸಸ್ಯಾಗಾರಗಳ ಮಳಿಗೆ, ಸಂಸ್ಕರಿಸಿದ ಪದಾರ್ಥಗಳ ಮಳಿಗೆ, ಕೃಷಿ ಸಂಬಂಧಿತ ಇಲಾಖೆಗಳ ಪ್ರದರ್ಶನ ಮಳಿಗೆಗಳಲ್ಲಿ ಪ್ರದರ್ಶಿಕೆಗಳನ್ನು ಪ್ರದರ್ಶಿಸಿ ರೈತರಿಗೆ ಸೂಕ್ತ ಮಾಹಿತಿ ನೀಡಲು ಸಿದ್ಧತೆಗಳು ನಡೆದಿವೆ.

ಫೆ.1ರ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ್‌ ಹೆಬ್ಟಾರ್‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಪುಷ್ಪ ಸಂಭ್ರಮ ಅನೇಕ ಸಸ್ಯ ಪ್ರಿಯರಿಗೆ ಇನ್ನಷ್ಟು ಪ್ರೇರಣೆ ಉಂಟಾಗಲಿದೆ.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.