ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ ವಿಧಿವಶ
Team Udayavani, Jul 17, 2023, 8:38 PM IST
ಹೊನ್ನಾವರ: ತಾಲೂಕಿನ ಬೈಲುಗದ್ದೆಯ ನಿವಾಸಿ ಬಡಗುತಿಟ್ಟು ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ (39) ಭಾನುವಾರ, ಜುಲೈ16 ರಂದು ನಿಧನ ಹೊಂದಿದರು. ಅವಿವಾಹಿತರಾಗಿದ್ದ ಇವರು ತಂದೆ, ತಾಯಿ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ.
ಗುಣವಂತೆಯ ಶ್ರೀಮಯ ಯಕ್ಷಗಾನ ಕಲಾಕೇಂದ್ರದಲ್ಲಿ ಕೆರೆಮನೆ ಶಂಭು ಹೆಗಡೆ ಹಾಗೂ ಹೆರಂಜಾಲು ಗೋಪಾಲ ಗಾಣಿಗರ ಶಿಷ್ಯರಾಗಿ ಅಭ್ಯಾಸ ಮಾಡಿದ ಬಳಿಕ ಬಯಲಾಟ ಮೇಳಗಳಾದ ಗುಂಡುಬಾಳ, ಮಡಾಮಕ್ಕಿ,ಸಿಗಂದೂರು ಮತ್ತು ಪ್ರಸಿದ್ಧ ಡೇರೆಮೇಳಗಳಾದ ಸಾಲಿಗ್ರಾಮ ಹಾಗೂ ಪೆರ್ಡೂರು ಮೇಳಗಳಲ್ಲಿ ಎರಡು ದಶಕಗಳ ಕಾಲ ವಿವಿಧ ಪೋಷಕ ಪಾತ್ರಗಳ ನಿರ್ವಹಣೆಯಿಂದ ಕಲಾಭಿಮಾನಿಗಳ ಗಮನ ಸೆಳೆದಿದ್ದರು.
ತೀವ್ರ ಅನಾರೋಗ್ಯದ ಕಾರಣದಿಂದ ಕಳೆದ ವರ್ಷ ಯಕ್ಷಗಾನ ತಿರುಗಾಟ ಮಾಡಿರಲಿಲ್ಲ. ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗ, ಕಲಾವಿದರು, ಕಲಾಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.