ಸೀಬರ್ಡ್ ನಿರಾಶ್ರಿತರಿಗೆ ಉದ್ಯೋಗ ಕೊಡಿ
Team Udayavani, Sep 18, 2019, 12:05 PM IST
ಅಂಕೋಲಾ: ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರು ಮಾತನಾಡಿದರು.
ಅಂಕೋಲಾ: ನೌಕಾನೆಲೆಗೆ ಭೂಮಿ ನೀಡಿ ನಿರಾಶ್ರಿತರಾದ ಕುಟುಂಬದ ಸದಸ್ಯರಿಗೆ ಉದ್ಯೋಗದ ಭರವಸೆ ನೀಡಿದ ಸರಕಾರ ಈಗ ಯಾವುದೇ ಉದ್ಯೋಗ ನೀಡಲಿಲ್ಲ. ಕೂಡಲೇ ನಿರಾಶ್ರಿತರಿಗೆ ಉದ್ಯೋಗವನ್ನು ಕಲ್ಪಿಸಿ. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹೋರಾಟದ ಮಾರ್ಗ ಹಿಡಿಯಬೇಕಾಗುತ್ತದೆ ಎಂದು ನಿರಾಶ್ರಿತರ ಕುಟುಂಬದ ಎನ್.ವಿ. ನಾಯಕ ಎಚ್ಚರಿಸಿದರು.
ಅವರು ಮಂಗಳವಾರ ಪಟ್ಟಣದ ಹೊಟೇಲ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೇಶ ರಕ್ಷಣೆಗಾಗಿ ನಾವು 35 ವರ್ಷಗಳ ಹಿಂದೆ ಸೀಬರ್ಡ್ ನೌಕಾನೆಲೆಗೆ ನಾವು ಉಳುಮೆ ಮಾಡಿ ಜೀವನ ನಡೆಸುತ್ತಿರುವ ಫಲವತ್ತಾದ ಭೂಮಿಯನ್ನು ಬಿಟ್ಟು ಕೊಟ್ಟಿದ್ದೇವೆ. ಅಂದು ಅಲ್ಪ ಪರಿಹಾರ ನೀಡಿ ಕೈ ತೊಳೆದುಕೊಂಡ ಸರಕಾರದ ವಿರುದ್ಧ ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡಿ ಇಂದು ಸಮರ್ಪಕ ಪರಿಹಾರವನ್ನು ಕಂಡಿದ್ದೇವೆ. ಆ ಸಂದರ್ಭದಲ್ಲಿ ನಿರಾಶ್ರಿತ ಕುಟುಂಬದ ಓರ್ವ ಸದಸ್ಯರಿಗೆ ಕೆಲಸ ಕೊಡಲಾಗುವುದು ಎಂದು ತಿಳಿಸಿದ್ದರು. ಇದುವರೆಗೂ ನಿರಾಶ್ರಿತರ ಕುಟುಂಬಕ್ಕೆ ಕೆಲಸವನ್ನು ಕೊಡದೆ ಸರಕಾರ ತಾರತಮ್ಯ ಮಾಡುತ್ತಿದೆ. ಫಲವತ್ತಾದ ಭೂಮಿಯನ್ನೇ ನಂಬಿ ಬದುಕು ನಡೆಸುತ್ತಿರುವ ಕೃಷಿಕರು ನಿರುದ್ಯೋಗಿಗಳಾಗಿ ಕೂಲಿ ನಾಲಿ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.
ಇಂದು ಜಿಲ್ಲಾಡಳಿತ ಈ ಭಾಗದ ಗ್ರಾಮ ಲೆಕ್ಕಾಧಿಕಾರಿಗಳಿಂದ 18 ರಿಂದ 35 ವರ್ಷದವರ ಮಾಹಿತಿ ಪಡೆಯುತ್ತಿದ್ದಾರೆ. ನಿರಾಶ್ರಿತ ಕುಟುಂಬದ ಯುವಕರು ತಮಗೆ ಉದ್ಯೋಗ ದೊರೆಯಬಹುದೆಂಬ ಆಶಾಭಾವದಿಂದ ಇಲಾಖೆ ಕೇಳಿರುವ ಎಲ್ಲಾ ದಾಖಲೆಗಳನ್ನು ನೀಡುತ್ತಿದ್ದಾರೆ. ರಾಜ್ಯದ ಇತರೆಡೆ ನಿರಾಶ್ರಿತರಿಗೆ ನೀಡುವ ಹಾಗೆ ನಮ್ಮಲ್ಲೂ ಉದ್ಯೋಗವನ್ನು ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ರಾಮಚಂದ್ರ ನಾಯಕ, ಸಾಯಿಶ ನಾಯಕ, ಪ್ರದೀಪ ನಾಯಕ, ಹಿತೇಶ ಭಾವಿಕೇರಿ, ಅಮರ ಭಾವಿಕೇರಿ, ಮಂಜುನಾಥ ಹಟ್ಟಿಕೇರಿ, ವಿಶು ಭಾವಿಕೇರಿ, ರಾಜು ಹಟ್ಟಿಕೇರಿ, ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.