![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 28, 2019, 4:04 PM IST
ಕಾರವಾರ: ರಾಜ್ಯಪಾಲರು ಮೃದುಲಾ ಸಿನ್ಹಾರಿಗೆ ಸೀಬರ್ಡ ನೌಕಾ ನೆಲೆ ವತಿಯಿಂದ ನೆನಪಿನ ಕಾಣಿಕೆ ಅರ್ಪಿಸಲಾಯಿತು.
ಕಾರವಾರ: ಗೋವಾ ರಾಜ್ಯದ ರಾಜ್ಯಪಾಲೆ ಮೃದುಲಾ ಸಿನ್ಹಾ ಕಾರವಾರ ಬಳಿಯ ಸೀಬರ್ಡ್ ಐಎನ್‌ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಿ ಅಲ್ಲಿನ ಎರಡನೇ ಹಂತದ ಕಾಮಗಾರಿಗಳನ್ನು ವೀಕ್ಷಿಸಿದರು.
ಕದಂಬ ನೌಕಾನೆಲೆಯನ್ನು ಕಂಡು ತೃಪ್ತಿ ವ್ಯಕ್ತಪಡಿಸಿದ ಅವರು, ಶಿಫ್ ಲಿಫ್ಟ್ ವ್ಯವಸ್ಥೆ ಸೇರಿದಂತೆ ನೌಕಾನೆಲೆಯ ಅಗಾಧತೆಯನ್ನು ಕಣ್ತುಂಬಿಕೊಂಡರು. ಯುದ್ಧ ನೌಕೆಗಳ ನೆಲೆ ಹಾಗೂ ವಿಶಾಲ ಕಡಲು ಹಾಗೂ ಯುದ್ಧನೌಕೆಗಳ ನಿಲುಗಡೆಗೆ ಸಂಬಂಧಿಸಿದಂತೆ ನಿರ್ಮಿತವಾಗಿರುವ ಬಂದರನ್ನು ವೀಕ್ಷಿಸಿದರು.
ಹೆಚ್ಚಿನ ಯುದ್ಧನೌಕೆಗಳು ಹಾಗೂ ಸಬ್ ಮರೀನ್ ನೌಕೆಗಳ ತಾಣದ ಬಗ್ಗೆ ನೌಕಾ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಿಬ್ಬಂದಿಗಳ ಕಾರ್ಯಕ್ಷಮತೆ ಮತ್ತು ನೌಕಾನೆಲೆ ನಿರ್ಮಾಣದಲ್ಲಿ ವಿಸ್ತಾರವಾಗಿ ನಡೆದಿರುವ ಕಾಮಗಾರಿಗಳ ವಿವರ ಕೇಳಿ ಸಂತೃಪ್ತಿ ವ್ಯಕ್ತಪಡಿಸಿದರು.
ದೇಶದ ರಕ್ಷಣೆಯಲ್ಲಿ ನೇವಿಯ ಮಹತ್ವ ಕಂಡು ನೇವಿ ಸಿಬ್ಬಂದಿಯನ್ನು ಅಭಿನಂದಿಸಿದರು. ಅಲ್ಲದೇ ತಲವಾರ್ ನೌಕೆಯಲ್ಲಿ ಕುಳಿತು ಸ್ವಲ್ಪ ದೂರ ಸಮುದ್ರಯಾನ ಸಹ ಮಾಡಿದರು. ರಾಜ್ಯಪಾಲೆ ಮೃದುಲಾ ಸಿನ್ಹಾರಿಗೆ ನೌಕಾ ಸೇನೆ ವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು. ಕರ್ನಾಟಕ ನೇವಿ ವಿಭಾಗದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.