ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ
Team Udayavani, Sep 6, 2024, 5:05 PM IST
■ ಉದಯವಾಣಿ ಸಮಾಚಾರ
ಗೋಕರ್ಣ: ಶಿರೂರು ಗುಡ್ಡ ಕುಸಿತ ದುರಂತದಲ್ಲಿ 8 ಜನ ಮೃತಪಟ್ಟಿದ್ದು, ಮೂವರು ಇದುವರೆಗೂ ಪತ್ತೆಯಾಗಿಲ್ಲ. ಈ ಎಲ್ಲ ಘಟನೆಗಳಿಗೆ ಕಾರಣವಾಗಿರುವ ಎನ್‌ಎಚ್‌ಎಐ ಮತ್ತು ಐಆರ್‌ಬಿ ಕಂಪನಿ ಅಧಿಕಾರಿಗಳನ್ನು ಕೂಡಲೇ ಬಂಧಿಸಿ ಎಂದು ಒತ್ತಾಯಿಸಿ ಸೆ.12 ರಂದು ಬೆಳಗ್ಗೆ 10:30 ಕ್ಕೆ ಶರವಾತಿ ವೃತ್ತದಿಂದ ಪಾದಯಾತ್ರೆ ನಡೆಸಿ ಹೊನ್ನಾವರದ ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ನಾರಾಯಣಗುರು ಶಕ್ತಿಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಜು.16 ರಂದು ಶಿರೂರಿನಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಒಂದೇ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದರು. ಗುಡ್ಡ ಗಂಗಾವಳಿ ನದಿಗೆ ಬಿದ್ದ ಪರಿಣಾಮವಾಗಿ ಇನ್ನೊಂದು ದಡದ ಉಳುವರೆಯ 6 ಮನೆಗಳನ್ನು ಸಂಪೂರ್ಣ ನಾಶಮಾಡಿ 30ಕ್ಕೂ ಅಧಿಕ ಮನೆಗಳು ಭಾಗಶಃ ಹಾನಿಗೊಂಡಿದ್ದವು. ಅಲ್ಲಿಯ ಕೃಷಿ ಭೂಮಿಯಲ್ಲಿ ಕಲ್ಲುಮಣ್ಣುಗಳು ಬಿದ್ದು ಭತ್ತದ ಸಸಿಗಳನ್ನು ನಾಶಪಡಿಸಿತ್ತು. ಇದೆಲ್ಲದಕ್ಕೂ ಚತುಷ್ಪಥ ಕಾಮಗಾರಿ ಕೈಗೊಂಡಿರುವ ಐಆರ್‌ಬಿ ಕಂಪನಿಯವರು ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿದ್ದರಿಂದಲೇ ಈ ಸ್ಥಿತಿ ಬಂದಿದೆ.
ಮೃತರ ಕುಟುಂಬಕ್ಕೆ 5 ಲಕ್ಷದಂತೆ ಹಣ ನೀಡಿ ಸರಕಾರ ಕೈತೊಳೆದುಕೊಂಡಿತು. ಇನ್ನು 6 ಮನೆಗಳು ಸಂಪೂರ್ಣ ನಾಶವಾಗಿದ್ದು, ಅವರಿಗೆ 1.20 ಲಕ್ಷ ನೀಡಿ ಈಗ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮೌನವಾಗಿದ್ದಾರೆ. ಈ ದುರ್ಘಟನೆ ನಡೆದ ನಂತರ ಪ್ರಣವಾನಂದ ಸ್ವಾಮೀಜಿಯವರು ಘಟನಾ ಸ್ಥಳಕ್ಕೆ ಮತ್ತು ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.
ನೊಂದ ಸಂತ್ರಸ್ತ ಕುಟುಂಬದವರು ಬೆಂಗಳೂರು ಸೇರಿದಂತೆ ದೆಹಲಿಗೂ ಕರೆದುಕೊಂಡು ಹೋಗಿ ಅಲ್ಲಿಯ ಸಂಸದರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಲ್ಲಿಯೂ ಕೂಡ ಸರಿಯಾದ ಸ್ಪಂದನೆ ಸಿಗದಿದ್ದರಿಂದ ಕೆಲದಿನಗಳ ಹಿಂದೆ ಕಾರವಾರ ಡಿಸಿ ಕಚೇರಿ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದರು. ಈಗ ಮತ್ತೆ ಪಾದಯಾತ್ರೆ ಹಾಗೂ ಕಚೇರಿ ಮುತ್ತಿಗೆ ಹಾಕಲು ಪ್ರಣವಾನಂದ ಸ್ವಾಮೀಜಿ ಮುಂದಾಗಿದ್ದು, ಈ ಹೋರಾಟದಲ್ಲಿ ಸಂತ್ರಸ್ತ ಕುಟುಂಬದವರು ಮತ್ತು ವಿವಿಧ ಸಂಘ ಸಂಸ್ಥೆಗಳು ಆಗಮಿಸುವಂತೆ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.