ವೈಟ್ ವಾಟರ್ ರ್ಯಾಪ್ಟಿಂಗ್‌ಗೆ ಉತ್ತಮ ಪ್ರತಿಕ್ರಿಯೆ
Team Udayavani, Nov 10, 2017, 2:15 PM IST
ಪಣಜಿ: ಪ್ರಸಕ್ತ ವರ್ಷ ಮಳೆಗಾಲದಲ್ಲಿ ಗೋವಾದಲ್ಲಿ ನಡೆದ ಮಹಾದಾಯಿ ವೈಟ್ ವಾಟರ್ ರ್ಯಾಪ್ಟಿಂಗ್‌ಗೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ರ್ಯಾಪ್ಟಿಂಗ್‌ನಲ್ಲಿ 1700 ಸಾಹಸಿ ಪ್ರವಾಸಿಗರು ಪಾಲ್ಗೊಂಡಿದ್ದರು ಎಂದು ಗೋವಾ ಪ್ರವಾಸೋದ್ಯಮ ವಿಕಾಸ ಮಹಾಮಂಡಳದ ರ್‍ಯಾಂಪ್ಟಿಂಗ್ ಆಯೋಜಕ ಜೋನ್ ಪ್ಯಾಲಾರ್ಡ್ ಮಾಹಿತಿ ನೀಡಿದ್ದಾರೆ.
ಗೋವಾ ಪ್ರವಾಸಿಗರ ಆಕರ್ಷಣೀಯ ಸ್ಥಳವಾಗಿದೆ. ಇದರಿಂದಾಗಿಯೇ ಗೋವಾ ರಾಜ್ಯದಲ್ಲಿ ವರ್ಷದ 365 ದಿನವೂ ದೇಶ-ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ. ವಿಶೇಷವಾಗಿ ಸಾಹಸಿ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು 2012ರಿಂದ ಗೋವಾ ಪ್ರವಾಸೋದ್ಯಮ ವಿಕಾಸ ಮಹಾಮಂಡಳವು ಮಹಾದಾಯಿ ನದಿಯಲ್ಲಿ ವೈಟ್ ವಾಟರ್ ರ್ಯಾಪ್ಟಿಂಗ್ ಆಯೋಜಿಸುತ್ತಿದೆ. ಪ್ರತಿವರ್ಷ ಜೂನ್‌ನಿಂದ ಸೆಪ್ಟೆಂಬರ್ ವರೆಗೆ ಈ ರ್ಯಾಪ್ಟಿಂಗ್ ಆಯೋಜಿಸಲಾಗುತ್ತದೆ. ರ್ಯಾಪ್ಟಿಂಗ್‌ಗೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2015ರಲ್ಲಿ 1200, 2016 ರಲ್ಲಿ 1700 ಪ್ರವಾಸಿಗರು ಪಾಲ್ಗೊಂಡಿದ್ದರು.
ಕಳೆದ ಸುಮಾರು ಮೂರು ವರ್ಷಗಳಿಂದ ಗೋವಾದಲ್ಲಿ ಮಳೆಯ ಸರಾಸರಿ ಪ್ರಮಾಣ ಕಡಿಮೆಯಾಗುತ್ತಿದೆ. ಮಹಾದಾಯಿ ರ್ಯಾಪ್ಟಿಂಗ್‌ಗೆ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಇರುವುದು ಆವಶ್ಯವಾಗಿದೆ. ಹೀಗಿದ್ದರೂ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2016ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ರ್ಯಾಪ್ಟಿಂಗ್‌ನಲ್ಲಿ ಪಾಲ್ಗೊಂಡ ಪ್ರವಾಸಿಗರ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ ಎಂದು ಜೋನ್ ಪ್ಯಾಲಾರ್ಡ್ ಮಾಹಿತಿ ನೀಡಿದರು.
ಮುಂದಿನ ವರ್ಷ ಗೋವಾದಲ್ಲಿ ಉತ್ತಮ ಮಳೆಯಾದರೆ ವಾಟರ್ ರ್ಯಾಪ್ಟಿಂಗ್‌ಗೆ ಇನ್ನೂ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.