ಅಸಂಘಟಿತ ವಲಯದ ಕಾರ್ಮಿಕರಿಗೂ ಸರಕಾರದ ನೆರವು

Team Udayavani, Jun 24, 2020, 5:20 PM IST

ಅಸಂಘಟಿತ ವಲಯದ ಕಾರ್ಮಿಕರಿಗೂ ಸರಕಾರದ ನೆರವು

ಕಾರವಾರ: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೊಳಗಾದ ಅಗಸರುಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯ ಕಾರ್ಮಿಕರಿಗೆ ಒಂದು ಬಾರಿ ಪರಿಹಾರಧನವಾಗಿ 5 ಸಾವಿರ ರೂ.ಗಳ ನೆರವು ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಅರ್ಹ ಫಲಾನುಭವಿಗಳು ಪಡೆದು ಕೊಳ್ಳುವಂತಾಗಬೇಕೆಂದು ಜಿಲ್ಲಾಧಿಕಾರಿ ಡಾ| ಕೆ. ಹರೀಶ ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಅಗಸ ಮತ್ತು ಕ್ಷೌರಿಕರ ಸಂಘಗಳ ಪ್ರತಿನಿಧಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಾದ ಅಗಸರು ಮತ್ತು ಕ್ಷೌರಿಕರಿಗೆ ಸಹಾಯಧನ ನೀಡಲು ಮುಂದಾಗಿದ್ದು, ಈ ಸಹಾಯಧನ ಪಡೆಯಲು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಜೂ. 30ರೊಳಗಾಗಿ ಅರ್ಜಿ ಸಲ್ಲಿಸಬೇಕು. 18ರಿಂದ 65ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು, ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ನೆರವು ದೊರೆಯಲಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ ಬಿ.ಆರ್‌. ಸಭೆಗೆ ಮಾಹಿತಿ ನೀಡಿ, ಯೋಜನೆಯು ಜಾತಿ ಆಧಾರಿತವಾಗಿರದೆ ವೃತ್ತಿ ಆಧಾರಿತವಾಗಿದ್ದು, ಕರ್ನಾಟಕದಲ್ಲಿ ಈ ವೃತ್ತಿಗಳಲ್ಲಿ ತೊಡಗಿರುವರು ಹೊರ ರಾಜ್ಯದ ಕಾರ್ಮಿಕರು, ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆಧಾರ್‌ ಸಂಖ್ಯೆ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ವೃತ್ತಿ ನಿರ್ವಹಿಸುತ್ತಿರುವ ಕುರಿತು ಜಿಲ್ಲಾ ಮಟ್ಟದಲ್ಲಿ ನಗರಸಭೆ, ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್‌, ಉಪ ತಹಶೀಲ್ದಾರ್‌, ಕಂದಾಯ ನಿರೀಕ್ಷಕರಲ್ಲಿ, ಗ್ರಾಮ ಮಟ್ಟದಲ್ಲಿ ಗ್ರಾಂಪಂ ಅಭಿವೃದ್ಧಿ ಅಧಿಕಾರಿ ಕಾರ್ಯದರ್ಶಿಯವರಿಂದ ಪಡೆಯಬಹುದಾಗಿದೆ ಎಂದರು. ಅರ್ಜಿ ಸಲ್ಲಿಸಿದ ಪ್ರತಿ ಅರ್ಜಿದಾರರಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಅರ್ಜಿದಾರರ ಮೊಬೈಲ್‌ ಸಂಖ್ಯೆಗೆ ಸಂದೇಶ ಕಳುಹಿಸಲಾಗುತ್ತಿದೆ. ನೋಂದಾಯಿತ ಅರ್ಜಿದಾರರು ವಿಶಿಷ್ಟ ಗುರುತಿನ ಸಂಖ್ಯೆ ಬಳಸಿ ಸಲ್ಲಿಸಿದ ಅರ್ಜಿಯ ಸ್ಥಿತಿಯ ಕುರಿತು ಮಾಹಿತಿ ಪಡೆದು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದರು.

ಸಭೆಯಲ್ಲಿ ಪೌರಾಯುಕ್ತರಾದ ಪ್ರಿಯಾಂಗಾ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್‌.ಪುರುಷೋತ್ತಮ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.