ಹಳ್ಳಿಗಳಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Team Udayavani, Dec 3, 2020, 3:35 PM IST

uk-tdy-1

ಮುಂಡಗೋಡ: ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಹಳ್ಳಿಗಳಲ್ಲಿ ರಾಜಕೀಯ ಚುಟುವಟಿಕೆಗಳು ಗರಿಗೆದರಿದ್ದು ಎಲ್ಲಿ ನೋಡಿದರಲ್ಲಿ ಚುನಾವಣೆಯದ್ದೇ ಚರ್ಚೆ ಕಂಡು ಬರುತ್ತಿದೆ.

ಎಲ್ಲ ಚುನಾವಣೆಗಳಿಗಿಂತಲು ಗ್ರಾಮ ಪಂಚಾಯತ ಚುನಾವಣೆಗೆ ತೀವ್ರ ಪೈಪೋಟಿ ನಡೆಯುತ್ತದೆ. ಪ್ರತಿಯೊಂದು ವಾರ್ಡ್‌ನಲ್ಲಿ ಅಭ್ಯರ್ಥಿಗಳು ಮತಗಳನ್ನು ಪಡೆಯಲು ನಾನಾರೀತಿಯ ಕಸರತ್ತುಗಳನ್ನು ನಡೆಸುವುದು ಕಂಡುಬರುತ್ತದೆ. ಇದೀಗ ಡಿ.22 ರಂದು ಗ್ರಾಪಂ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಗ್ರಾಪಂ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ಹೆಗಳು ಇರುವುದಿಲ್ಲ. ಆದರೆ ರಾಜಕೀಯ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಅಭ್ಯರ್ಥಿಗಳು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಅದಕ್ಕಾಗಿ ರಾಜಕೀಯ ಪಕ್ಷದ ಮುಖಂಡರು ದುಂಬಾಲು ಬಿದ್ದಿದ್ದು ಪಕ್ಷದ ಬೆಂಬಲಿತವಾಗಿ ಕಣಕ್ಕಿಳಿಯಲು ಅವಕಾಶ ಕೇಳುತ್ತಿರುವುದು ಇದೀಗ ಜೋರಾಗಿ ಆರಂಭಗೊಂಡಿದೆ.

ಹದಿನಾರು ಪಂಚಾಯತಗಳು: ತಾಲೂಕಿನಲ್ಲಿ ಹುನಗುಂದ, ಇಂದೂರ, ನಂದಿಕಟ್ಟಿ, ಬಾಚಣಕಿ, ಗುಂಜಾವತಿ, ಮೈನಳ್ಳಿ, ನಾಗನೂರ, ಚವಡಳ್ಳಿ, ಸಾಲಗಾಂವ, ಚಿಗಳ್ಳಿ, ಕಾತೂರ, ಓಣಿಕೇರಿ, ಪಾಳಾ, ಕೋಡಂಬಿ, ಮಳಗಿ, ಬೇಡಸಗಾಂವ ಹೀಗೆ ಹದಿನಾರು ಗ್ರಾಪಂಗಳಲ್ಲಿ 29888 ಪುರುಷರು. 27913 ಮಹಿಳೆಯರು ಸೇರಿದಂತೆ ಒಟ್ಟು 57801 ಮತ ದಾರರಿದ್ದಾರೆ ಇನ್ನೂ 91 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಮನೆಮನೆ ಪ್ರಚಾರ ಶುರು: ತಾಲೂಕಿನ ಕೆಲವು ಗ್ರಾಮಗಳಲ್ಲಿ ಚುನಾವಣೆಗೆ ಸ್ಪರ್ಧಿಸುವವರು ಕಳೆದ ಎರಡು ದಿನಗಳಿಂದ ಮನೆಮನೆ ಪ್ರಚಾರ ಶುರು ಮಾಡಿದ್ದಾರೆ.

ನಾನು ಪಂಚಾಯತ ಚುನಾವಣೆಗೆ ಸ್ಪರ್ಧಿಸುತ್ತೇನೆ. ನನಗೆ ಮತ ನೀಡುವಂತೆ ವಿನಂತಿಸುತ್ತಿರುವುದು ಕೆಲ ಗ್ರಾಮಗಳಲ್ಲಿ ಕಂಡು ಬಂದಿದೆ. ಅಲ್ಲದೆ ಕೆಲವು ಗ್ರಾಮಗಳಲ್ಲಿ ಯಾರನ್ನು ಕಣಕ್ಕಿಳಿಸೋಣ ಎಂಬುದರ ಕುರಿತು ಸಹ ಮುಖಂಡರು ಚರ್ಚೆ ನಡೆಸುತ್ತಿದ್ದಾರೆ. ದಿನಗಳು ಕಳೆದಂತೆ ಗ್ರಾಪಂ ಚುನಾವಣೆ ಕಾವು ಹೆಚ್ಚಾಗಲಿದ್ದು, ಈ ಬಾರಿ ಗ್ರಾಪಂ ಚುನಾವಣೆಯೂ ವಿಧಾನ ಸಭಾ ಚುನಾವಣೆ ಗಳಿಗಿಂತಲು ಹೆಚ್ಚು  ಕುತೂಹಲ ಮೂಡಿಸುತ್ತವೆ ಎಂಬ ಮಾತು ಗ್ರಾಮೀಣ ಭಾಗದ ಜನರಿಂದ ಕೇಳಿ ಬರುತ್ತಿವೆ. ಕಳೆದ ಬಾರಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳುಹೆಚ್ಚಿನ ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದರು. ಈ ಬಾರಿ ಯಾವ ಪಕ್ಷದ ಬೆಂಬಲಿತರು ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸುತ್ತಾರೆ ಎಂಬುದನ್ನು ಕಾದೂ ನೋಡಬೇಕಿದೆ.

ಗ್ರಾಮ ಪಂಚಾಯತ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ನಡೆಸುವ ಬಗ್ಗೆ ತರಬೇತಿಯನ್ನು ಸಹ ಸಿಬ್ಬಂದಿಗೆ ನೀಡಲಾಗುತ್ತಿದೆ. ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಚುನಾವಣೆ ನಡೆಸಲು ಸಿದ್ಧರಾಗಿದ್ದೇವೆ. -ಶ್ರೀಧರ ಮುಂದಲಮನೆ, ತಹಶೀಲ್ದಾರ್‌.

-ಚಂದ್ರಶೇಖರಯ್ಯ ಹಿರೇಮಠ

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.