ಸ್ವರ್ಣವಲ್ಲೀ ಶ್ರೀಗಳಿಂದ ಶಿಷ್ಯರಿಗೆ ‘ಹಸುರು’ ಮಂತ್ರಾಕ್ಷತೆ

ವೃಕ್ಷ ಪ್ರೀತಿ ಬಿತ್ತುವ ಶ್ರೀಗಳು; ಅರಣ್ಯ ಇಲಾಖೆಯ ಸಹಭಾಗಿತ್ವ

Team Udayavani, Jul 27, 2023, 3:21 PM IST

1-asdddsad

ಶಿರಸಿ: ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣೆಗೆ ಕಂಕಣ ಕಟ್ಟಿಕೊಂಡ ಪರಿಸರ ಪ್ರಿಯ ಸ್ವಾಮೀಜಿಗಳು ಎಂದೇ ಜನ ಮಾನಸದಲ್ಲಿ ನೆಲೆ ನಿಂತ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರು ಚಾತುರ್ಮಾಸ್ಯದ ಅವಧಿಯಲ್ಲಿ ಗುರುವಿನ ದರ್ಶನಕ್ಕೆ ಮಠಕ್ಕೆ ಬರುವ ಶಿಷ್ಯರಿಗೆ ಪ್ರೀತಿಯಿಂದ ಹಸುರು ಮಂತ್ರಾಕ್ಷತೆ ನೀಡುತ್ತಿದ್ದಾರೆ. ಸದ್ದಿಲ್ಲದೇ ಶಿಷ್ಯರಲ್ಲಿ ಪರಿಸರ ಪ್ರೀತಿಯನ್ನೂ ಬಿತ್ತುವ ಕಾರ್ಯ ಮಾಡುತ್ತಿರುವುದು ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.

ಪ್ರವಚನಗಳಲ್ಲಿ, ಅಣೇಕಟ್ಟು ವಿರೋಧಿ ಹೋರಾಟದಲ್ಲಿ ಮಾತ್ರ ಕಾಣಿಸಿಕೊಳ್ಳದೇ, ಸಮಷ್ಟಿ ಪರಿಸರದ ಉಳಿಸಿಗೆ ಸ್ವತಃ ಗಿಡಗಳನ್ನೂ ಈ ಪವಿತ್ರ ಚಾತುರ್ಮಾಸ್ಯದ ಅವಧಿಯಲ್ಲಿ ಶ್ರೀಗಳು ಶಿಷ್ಯರಿಗೆ ನೀಡುತ್ತಿರುವದು ಹಾಗೂ ವರ್ಷದಿಂದ ವರ್ಷಕ್ಕೆ ಪರಿಸರ ಸಂರಕ್ಷಣೆಯ ಈ ಯಜ್ಞದ ವಿಸ್ತಾರ ನಡೆಸುತ್ತಿರುವದು ಮಾದರಿಯ ಕೈಂಕರ್ಯವಾಗಿದೆ.

ಇದು ವಿಶೇಷ ಇಲ್ಲಿ!
ಚಾತುರ್ಮಾಸ್ಯ ಸಂಕಲ್ಪದ ಬಳಿಕ ಶ್ರೀಮಠಕ್ಕೆ ಶಿಷ್ಯರು ಅವರವರ ಸೀಮಾ, ಭಾಗಿಯ ಆಧಾರದಲ್ಲಿ ಬಂದು ಪಾದಪೂಜೆ, ಕುಂಕುಮಾರ್ಚನೆ ಹಾಗೂ ಇತರ ಸೇವೆ ಸಲ್ಲಿಸುತ್ತಾರೆ. ಇದು ಯಾವತ್ತಿನ ಕ್ರಮ, ಸಂಪ್ರದಾಯ. ಹೀಗೆ ಸೇವೆ ಸಲ್ಲಿಸಿದ ಶಿಷ್ಯರಿಗೆ ಗುರುಗಳು ಪವಿತ್ರ ಆಶೀರ್ವಚನದ ಸಂದೇಶ ಕೂಡ ನೀಡುತ್ತಾರೆ. ಸಂದೇಶ ಸ್ವೀಕರಿಸಿದ ಶಿಷ್ಯರು ಮಂತ್ರಾಕ್ಷತೆ ಪಡೆಯುವಾಗ ಶ್ರೀಗಳು ವೃಕ್ಷ ಮಂತ್ರಾಕ್ಷತೆ ಕೂಡ ನೀಡುತ್ತಾರೆ. ಶಿಷ್ಯರಿಗೆ ಮಂತ್ರಾಕ್ಷತೆಯ ರೂಪದಲ್ಲಿ ನೀಡಲಾದ ಗಿಡವನ್ನು ಬೆಳಸಿ ರಕ್ಷಿಸಲೂ ಶ್ರೀಗಳು ಸೂಚಿಸುತ್ತಾರೆ.

85 ಸಾವಿರಕ್ಕೂ ಹೆಚ್ಚು!
ಸ್ವರ್ಣವಲ್ಲೀ ಪೀಠವೇ ಪರಿಸರ ಸಂರಕ್ಷಣಾ ಪೀಠ. ಹಿಂದಿನ ಯತಿಗಳಾದ ಶ್ರೀಸರ್ವಜ್ಞೇಂದ್ರ ಸರಸ್ವತೀ ಶ್ರೀಗಳೂ ಪರಿಸರ ಕಾಳಜಿ ಹೊಂದಿದ್ದರು. 33 ವರ್ಷಗಳ ಹಿಂದೆ ಪೀಠಾರೋಹರಾದ ಈಗಿನ ಶ್ರೀಗಂಗಾಧರೇಂದ್ರ ಸರಸ್ವತೀ ಶ್ರೀಗಳಿಗೆ ಹಸಿರು ಎಂದರೆ ತುಂಬಾ ಕಾಳಜಿ.
ವೃಕ್ಷಾರೋಪಣ, ಸಸ್ಯ ಲೋಕ ಸೃಷ್ಟಿಯ ಜೊತೆಗೆ 2006ರಿಂದ ಶ್ರೀಗಳು ವೃಕ್ಷ ಮಂತ್ರಾಕ್ಷತೆಯನ್ನೂ ನೀಡುತ್ತಿದ್ದಾರೆ. ಪ್ರತೀ ವರ್ಷ ಚಾತುರ್ಮಾಸ್ಯದಲ್ಲಿ ಶಿಷ್ಯರಿಗೆ ಬಿಡದೇ ವನಸ್ಪತಿ ವೃಕ್ಷ ಕೊಟ್ಟು ಹರಸುತ್ತಿದ್ದಾರೆ. ಈ ಬಾರಿ ಮಠದ ಈ ಕೈಂಕರ್ಯಕ್ಕೆ ಅರಣ್ಯ ಇಲಾಖೆ ಅಪರೂಪದ ವನಸ್ಪತಿ ಗಿಡಗಳನ್ನೂ ನೀಡಿದೆ. ಸ್ವರ್ಣವಲ್ಲೀ ಶ್ರೀಗಳ ಈ ಸಮಾಜಮುಖಿ ಆಶಯಕ್ಕೆ ಇಲಾಖೆ ಕೂಡ ಹೆಗಲು ನೀಡಿದೆ.

ಸ್ವರ್ಣವಲ್ಲೀ ಶ್ರೀಗಳು ಚಾತುರ್ಮಾಸ್ಯ ಅವಧಿಯಲ್ಲಿ ಹಾಗೂ ಪೀಠಾರೋಹಣದ 25, 30 ವರ್ಷದ ಕಾಲಘಟ್ಟದಲ್ಲೂ ವೃಕ್ಷಾರೋಪಣವನ್ನು ಅಭಿಯಾನದ ಮಾದರಿಯಲ್ಲಿ ನಡೆಸಲಾಗಿತ್ತು. ಪ್ರತೀ ವರ್ಷದ ಚಾತುರ್ಮಾಸ್ಯದಲ್ಲೂ ಕನಿಷ್ಠ 5 ಸಾವಿರ ವನಸ್ಪತಿ ಹಾಗೂ ಇತರ ಜಾತುವಾರು ಗಿಡಗಳನ್ನು ನೀಡಲಾಗುತ್ತಿದೆ. ಬಸವನಪಾದ, ಅಶೋಕ, ಹಲಸು, ಮಾವು, ರಕ್ತ ಚಂದನ ಜೊತೆ ಪೇರಲ, ಗೇರು, ಹಲಸು ಸೇರಿದಂತೆ ಒಳ್ಳೊಳ್ಳೆ ಜಾತಿಯ ಸಸಿಗಳನ್ನು ನೀಡಲಾಗಿದೆ. ನಮ್ಮ ಕೊರತೆ ನೀಗಿಸಲು ಇಲಾಖೆ ಸಹಕಾರ ನೀಡಿದೆ ಎನ್ನುತ್ತಾರೆ ಸಸ್ಯ ಲೋಕದ ಉಸ್ತುವಾರಿ ಮಹಾಬಲೇಶ್ವರ ಗುಮ್ಮಾನಿ.

ಶಿಷ್ಯರಲ್ಲಿ ಪರಿಸರ ಪ್ರೀತಿಯನ್ನು ಬಿತ್ತಿ, ಪ್ರಕೃತಿಯ ಸಂರಕ್ಷಣೆಗೆ ಆಯ್ದುಕೊಂಡ ಮಾರ್ಗ. ಗಿಡಗಳನ್ನು ವಿತರಿಸುವಾಗ ನಮಗೆ ಖುಷಿ ಇದೆ. ಶಿಷ್ಯರೂ ಗಿಡ ನೆಟ್ಟು ಬೆಳೆಸುತ್ತಿರುವದು ಗಮನಕ್ಕಿದೆ– ಸ್ವರ್ಣವಲ್ಲೀ ಶ್ರೀ

ಸ್ವರ್ಣವಲ್ಲೀ ಪೀಠದಿಂದ ಶಿಷ್ಯರಲ್ಲಿ ಇಂತಹ ವೃಕ್ಷ ಮಂತ್ರಾಕ್ಷತೆ ಅಭಿಯಾನ ನಡೆಸಿ ವೃಕ್ಷ ಪ್ರೀತಿ ಬೆಳಸುವದು ಇಡೀ ರಾಜ್ಯಕ್ಕೆ ಮಾದರಿ. ಪರಿಸರ ಸಂರಕ್ಷಣೆಗೆ ಇಂಥ ಸಹಭಾಗಿತ್ವದ ಕೊಡುಗೆಗಳು ಕೂಡ ದೊಡ್ಡವು– ಡಾ. ಅಜ್ಜಯ್ಯ, ಡಿಎಫ್‌ಒ , ಶಿರಸಿ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.