ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ
ಮೆಕ್ಕೆಜೋಳಕ್ಕೆ 400 ರಿಂದ 500 ರೂ ದರ ಹೆಚ್ಚು ದೊರೆಯಬಹುದು
Team Udayavani, Sep 25, 2024, 6:09 PM IST
ಹಳಿಯಾಳ: ವಾಣಿಜ್ಯ ಕಬ್ಬಿನ ಬೆಳೆಗೆ ಪರ್ಯಾಯವಾಗಿ ಕ್ಷೇತ್ರದಲ್ಲಿ ಬೆಳೆಯಲಾಗಿರುವ ಮೆಕ್ಕೆಜೋಳ ಕಟಾವು ಕಾರ್ಯ ಆರಂಭವಾಗಿದೆ. ಆದರೆ ಪ್ರಸ್ತುತ ಜುಲೈನಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಇಳುವರಿ ಕುಂಠಿತವಾಗಿದೆ. ಜೂನ್‌ನಲ್ಲಿ ಭೂಮಿ ಹದಗೊಳಿಸಿ ಬಿತ್ತಲಾದ ಮೆಕ್ಕೆಜೋಳ ಮೊದಲ ಹಂತದಲ್ಲಿ ಉತ್ತಮವಾಗಿ ಬೆಳೆದಿತ್ತು. ತದ ಬಳಿಕ ಜುಲೈನಲ್ಲಿ ಮೆಕ್ಕೆಜೋಳ ಹಂತ ಹಂತವಾಗಿ ತೆನೆ ಒಡೆದು ಕಾಳು ಕಟ್ಟುತ್ತದೆ. ಆದರೆ ಈ ಸಂದರ್ಭದಲ್ಲಿ ಭಾರಿ ಮಳೆಯಾದ ಪರಿಣಾಮ ಕಳೆ ನಿಯಂತ್ರಣ ಸಾಧ್ಯವಾಗಲಿಲ್ಲ. ಇದರಿಂದಾಗಿ ಇಳುವರಿ ಕುಂಠಿತವಾಗಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.
ಸದ್ಯ ಮಳೆರಾಯ ಕೊಂಚ ಬಿಡುವು ನೀಡಿರುವುದರಿಂದ ಬೆಳೆ ಕಟಾವು ಮಾಡಿ ರಾಶಿ ಮಾಡುವ ಕೆಲಸದಲ್ಲಿ ರೈತರು ನಿರತರಾಗಿದ್ದಾರೆ. ಹಳಿಯಾಳ ಹಾಗೂ ದಾಂಡೇಲಿ ಸೇರಿದಂತೆ ಪ್ರಸ್ತುತ ವರ್ಷ 3500 ಹೆಕ್ಟೇರ್ ಅಂದರೆ 8750 ಎಕ್ಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. 110 ರಿಂದ 130 ದಿನಗಳ ಒಳಗೆ ಮೆಕ್ಕೆಜೋಳ ಬೆಳೆಯಲಾಗುತ್ತದೆ. ಈ ಭಾಗದಲ್ಲಿ ಪ್ರತಿ ಎಕರೆ 12 ರಿಂದ 15 ಕ್ವಿಂಟಲ್ ಮೆಕ್ಕೆಜೋಳ ಬೆಳೆಯಲಾಗುತ್ತದೆ.
ಆದರೆ ಕಳೆ ನಿಯಂತ್ರಣದ ಕೊರತೆಯಿಂದಾಗಿ ಪ್ರಸ್ತುತ ವರ್ಷದಲ್ಲಿ ಇಳುವರಿ ಕುಂಟಿತಗೊಂಡಿದ್ದು, ಪ್ರತಿ ಎಕರೆಗೆ 10 ರಿಂದ 12 ಕ್ವಿಂಟಲ್ ಮೆಕ್ಕೆಜೋಳ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಕಟಾವು ಕಾರ್ಯ ಮಾತ್ರ ಆರಂಭಗೊಂಡಿದ್ದು,
ಖರೀದಿ ಕೇಂದ್ರಗಳು ಇನ್ನೂ ಆರಂಭವಾಗಿಲ್ಲ.
ಕಟಾವು ಮುಗಿದ ನಂತರ ಕನಿಷ್ಠ ಎಂಟು ದಿನ ಮೆಕ್ಕೆಜೋಳವನ್ನು ಬಿಸಿಲಿನಲ್ಲಿ ಒಣಗಿಸಿ ತದನಂತರ ಮಾರುಕಟ್ಟೆಗೆ ಸಾಗಿಸಲಾಗುತ್ತದೆ. ಪ್ರಸ್ತುತ ವರ್ಷದಲ್ಲಿ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2500 ರಿಂದ 2600 ದರ ನಿಗದಿ ಆಗಬಹುದು ಎಂದು ವ್ಯಾಪಾರಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದ ಬೆಲೆಗೆ ಹೋಲಿಸಿದರೆ ಪ್ರಸ್ತುತ ವರ್ಷದಲ್ಲಿ ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ 400 ರಿಂದ 500 ರೂ ದರ ಹೆಚ್ಚು ದೊರೆಯಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಐ
ಮಾನೆ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ ಮೂರನೇ ವಾರದ ನಂತರ ಆರಂಭ ವಾಗುವ ಮೆಕ್ಕೆಜೋಳ ಕಟಾವು ಕಾರ್ಯ ಅಕ್ಟೋಬರ್ ಅಂತ್ಯದವರೆಗೆ ಜರುಗುತ್ತದೆ. ಒಂದು ವೇಳೆ ಮಳೆ ಸುರಿದರೆ ಬಿಸಿಲಿನ ಕೊರತೆಯಿಂದಾಗಿ ಮೆಕ್ಕೆಜೋಳ ಒಣಗಿಸಲು ಸಾಧ್ಯವಾಗುವುದಿಲ್ಲ. ಇದರಿಂದ ನವೆಂಬರ್‌ವರೆಗೂ ಕೆಲ ಸಂದರ್ಭ ಮೆಕ್ಕೆಜೋಳ ಕಟಾವು ಕಾರ್ಯವನ್ನು ರೈತರು ಮುಂದುವರಿಸುತ್ತಾರೆ.
ಒಣಗಿಸಲು ರಸ್ತೆಯೇ ಗತಿ
ಬೆಳೆ ಕಟಾವು ಮಾಡಿದ ನಂತರ ಸುಮಾರು ಒಂದು ವಾರ ಸಂಪೂರ್ಣ ಬಿಸಿಲಿನಲ್ಲಿ ಒಣಗಿಸಬೇಕಾಗುತ್ತದೆ. ಆದರೆ ಬಹುತೇಕ
ಗ್ರಾಮಗಳಲ್ಲಿ ಮೆಕ್ಕೆಜೋಳ ಒಣಗಿಸಲು ಸೂಕ್ತ ಪ್ರಾಂಗಣವಿಲ್ಲದ ಕಾರಣ ರಸ್ತೆ ಮೇಲೆ ಒಣಗಿಸಿ ತದನಂತರ ಮಾರುಕಟ್ಟೆಗೆ ಸಾಗಿಸಬೇಕಾದ ಅನಿವಾರ್ಯತೆ ರೈತ ವರ್ಗಕ್ಕಿದೆ.
ತೂಕದಲ್ಲಿ ಮೋಸ!
ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ದಲ್ಲಾಳಿಗಳು ಖರೀದಿಸಿ ವಿವಿಧ ಸೀಡ್ಸ್ ತಯಾರಿಕಾ ಕಂಪೆನಿಗಳಿಗೆ ಮಾರಾಟ ಮಾಡುತ್ತಾರೆ. ಆದರೆ ದಲ್ಲಾಳಿಗಳು ರೈತರ ಕಣ್ಣಿಗೆ ಮಣ್ಣೆರಚಿ ತೂಕದಲ್ಲಿ ಮೋಸ ಮಾಡುತ್ತಾರೆ. ಇದರಿಂದಾಗಿ ರೈತರಿಗೆ ನಷ್ಟ
ಉಂಟಾಗುತ್ತದೆ ಎಂದು ಪ್ರಗತಿಪರ ಕೃಷಿಕ ಪುಂಡಲಿಕ ಗೋಡಿಮನಿ ಬೇಸರ ವ್ಯಕ್ತಪಡಿಸಿದ್ದಾರೆ.
■ ವಿನಾಯಕ ಮೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.