ಹಳಿಯಾಳ ಪೊಲೀಸ್ ಠಾಣೆ ಸೀಲ್‌ಡೌನ್
Team Udayavani, Jul 24, 2020, 9:54 AM IST
ಹಳಿಯಾಳ: ಕಳೆದ ನಾಲ್ಕೂ ದಿನಗಳ ಹಿಂದೆಯಷ್ಟೇ ಸಿಪಿಐ ಠಾಣೆಯ ಒಬ್ಬ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿ ಠಾಣೆ ಸೀಲ್‌ಡೌನ್ ಆಗಿತ್ತು. ಗುರುವಾರ ಹಳಿಯಾಳದ ಪಿಎಸ್‌ಐ ಕಚೇರಿಯ ಎಎಸ್‌ಐ ಒಬ್ಬರಿಗೆ ಸೋಂಕು ದೃಢಪಟ್ಟಿದ್ದರಿಂದ ಈ ಠಾಣೆಯನ್ನೂ ಸೀಲ್‌ಡೌನ್ ಮಾಡಲಾಗಿದ್ದು, ಕೋವಿಡ್ ಹೊಡೆತಕ್ಕೆ ಸದ್ಯಕ್ಕೆ ಎರಡೂ ಠಾಣೆ ಸಿಲ್‌ಡೌನ್ ಮಾಡಲಾಗಿದೆ.
ಈವರೆಗೆ ಹಳಿಯಾಳದ ಇಬ್ಬರು ಪೊಲೀಸರಿಗೆ ಸೋಂಕು ದೃಢಪಟ್ಟಿದ್ದರಿಂದ ಸಿಪಿಐ ಕಚೇರಿ ಹಾಗೂ ಪಿಎಸ್‌ಐ ಕಚೇರಿ ಎರಡೂ ಠಾಣೆ ಸಂಪೂರ್ಣ ಸ್ಯಾನಿಟೈಸರ್ ಮಾಡಲಾಗಿದೆ. ಎರಡೂ ಠಾಣೆಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಭಂದಿಸಿದ್ದು, ಅವಶ್ಯಕ ಪ್ರಕರಣಗಳಿಗೆ ಮಾತ್ರ ಹೊರಗೆ ಭೇಟಿಯಾಗಲು ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಮಾತನಾಡಿರುವ ಪಿಎಸ್‌ಐ ಯಲ್ಲಾಲಿಂಗ್ ಕುನ್ನೂರ, ಹಳಿಯಾಳ ಪೊಲೀಸ್ ಠಾಣೆ ಒಬ್ಬ ಸಿಬ್ಬಂದಿಗೆ ಗುರುವಾರ ಕೋವಿಡ್ ದೃಢಪಟ್ಟಿದ್ದರಿಂದ ಹಾಗೂ ಉಳಿದ ಸಿಬ್ಬಂದಿ ಸೋಂಕಿತನ ನೇರ ಸಂಪರ್ಕಕ್ಕೆ ಬಂದಿದ್ದರಿಂದ ಠಾಣೆಯನ್ನು ಕೆಲ ದಿನಗಳ ಮಟ್ಟಿಗೆ ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತನ ನೇರ ಸಂಪರ್ಕಕ್ಕೆ ಬರದ ಸಿಬ್ಬಂದಿ ಠಾಣೆ ಹೊರಗಿನಿಂದಲೇ ತಮ್ಮ ಕರ್ತವ್ಯ ನಿರ್ವಹಿಸಲಿದ್ದು, ತಾಲೂಕಿನ ಜನತೆ ಸಹಕರಿಸುವಂತೆ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.