ಯಾವುದೇ ಹುದ್ದೆಗೆ ಅಂಟಿ ಕುಳಿತವನಲ್ಲ

ಪಕ್ಷಕ್ಕಾಗಿ ದುಡಿದವರನ್ನು ಜವಾಬ್ದಾರಿಯುತ ಹುದ್ದೆಯಲ್ಲಿ ನೋಡಲು ಬಯಸುವೆ: ಭೀಮಣ್ಣ ನಾಯ್ಕ

Team Udayavani, Apr 15, 2022, 3:31 PM IST

16

ಶಿರಸಿ: ನಾನು ಯಾವುದೇ ಹುದ್ದೆಗೆ ಅಂಟಿಕೊಂಡವನಲ್ಲ. ಪಕ್ಷದಲ್ಲಿ ಪ್ರಾಮಾಣಿಕರಾಗಿ ಕೆಲಸ ಮಾಡಿದವರನ್ನು ಜವಾಬ್ದಾರಿಯುತ ಹುದ್ದೆಗಳಲ್ಲಿ ನೋಡುವ ಮನಸ್ಥಿತಿಯವನು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ನಾಯ್ಕ ಪ್ರತಿಪಾದಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬದಲಾವಣೆ ಆಗಲಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಅವರು ಗುರುವಾರ ‘ಉದಯವಾಣಿ’ ಜೊತೆ ತಮ್ಮ ಮನದಾಳದ ಮಾತು ಹಂಚಿಕೊಂಡರು.

ಪಕ್ಷದಲ್ಲಿ ಸಾಮಾಜಿಕ ನ್ಯಾಯ ನೋಡಿ ಹುದ್ದೆ ಕೊಡಬೇಕು. ಜಿಲ್ಲಾ ವರಿಷ್ಠರ, ಹಿರಿಯರ, ಪದಾಧಿ ಕಾರಿಗಳ ಜೊತೆ ಸಮಾಲೋಚಿಸಿ ಎಲ್ಲ ವರ್ಗದವರ ವಿಶ್ವಾಸ ಪಡೆದು ಕೆಲಸ ಮಾಡಬೇಕು. ಪಕ್ಷದಲ್ಲಿ ಕೆಲಸ ಮಾಡಿದ ಹಿರಿಯರಿಗೆ, ಸಕ್ರೀಯರಿಗೆ ಹುದ್ದೆ ನೀಡಬೇಕು ಎಂದೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಪತ್ರ ಬರೆಯುವುದಾಗಿ ಹೇಳಿದರು.

ನನ್ನನ್ನೂ ಕೇಳದೇ ನನಗೆ ಕೆಪಿಸಿಸಿ ಕಾರ್ಯದರ್ಶಿ ಹುದ್ದೆ ನೀಡಿದ್ದಾರೆ. ಇದರ ಬಗ್ಗೆ ಅಸಮಧಾನ ಇಲ್ಲ. ಆದರೆ, ಕೆಲಸ ಮಾಡಿದ ಬ್ರಾಹ್ಮಣ, ಮರಾಠ ವರ್ಗಕ್ಕೂ ನ್ಯಾಯ ಕೊಡಬೇಕಿತ್ತು. ಕೇವಲ ಒಂದೇ ಕಡೆ ನೀಡುವುದು ಸರಿಯಲ್ಲ ಎಂದರು.

ಭೀಮಣ್ಣ ಜನ ಸಾಮಾನ್ಯರ ಜೊತೆ ಬೆಳೆದವ. ಜಿಲ್ಲಾ ಪಂಚಾಯತದಲ್ಲೂ ಕೆಲಸ ಮಾಡಿದ್ದೇನೆ. ಪಕ್ಷದ ಹುದ್ದೆ ಇರಲಿ, ಬಿಡಲಿ ಸದಾ ಜನರ ಜೊತೆ ಕೆಲಸ ಮಾಡುವೆ. ನಾನು ಅಂಥ ಜಾಗದಲ್ಲಿ ಕುಳಿತು ಕೊಳ್ಳುವದಕ್ಕಿಂತ ಇನ್ನೊಬ್ಬನನ್ನು ಆ ಹುದ್ದೆಯಲ್ಲಿ ನೋಡುವ ಆಸೆ ಪಡುವೆ. ಸ್ವಾರ್ಥದ ರಾಜಕಾರಣಿ ನಾನಲ್ಲ ಎಂದರು.

ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರ ಪ್ರಶ್ನೆಗೆ ಉತ್ತರ ಕೊಡುವಂತಿದ್ದರೆ ಎಲ್ಲರೂ ಕೈ ಜೋಡಿಸುತ್ತಾರೆ. ಜಿಲ್ಲೆಯಲ್ಲಿ ಮಾಜಿ ಶಾಸಕರು, ವಿಧಾನ ಪರಿಷತ್‌ ಸದಸ್ಯರಾಗಿದ್ದವರು, ವಿವಿಧ ಹಂತದ ಜನಪ್ರತಿನಿ ಧಿಗಳೂ ಇದ್ದಾರೆ. ಎಲ್ಲರ ವಿಶ್ವಾಸ ಪಡೆದು ನೇಮಕಾತಿ ಆದರೆ ಪಕ್ಷದ ಬಲವರ್ಧನೆ ಹೆಚ್ಚು ಆಗುತ್ತದೆ ಎಂದರು.

ನನಗೆ ಹುದ್ದೆ ಕೊಡದಿದ್ದರೂ ಕೆಲಸ ಮಾಡುವೆ. ಪಕ್ಷಕ್ಕಾಗಿ ದುಡಿದು ಅವಕಾಶ ಸಿಗದೇ ಇರುವವರಿಗೆ ಆದ್ಯತೆ ಮೇಲೆ ಹುದ್ದೆ ಕೊಡಬೇಕು. -ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ

ಬದಲಾವಣೆ ಅಥವಾ ಮುಂದುವರಿಕೆ!

ಜಿಲ್ಲಾ ಕಾಂಗ್ರೆಸ್‌ನ್ನು ಕಳೆದ ಮೂರು ಅವಧಿಗೂ ಹೆಚ್ಚುಕಾಲ ಸಕ್ರಿಯವಾಗಿ ಮುನ್ನಡೆಸಿಕೊಂಡು ಬಂದ ಜಿಲ್ಲಾ ಅಧ್ಯಕ್ಷ ಭೀಮಣ್ಣ ಅವರ ಬದಲಿಸಿ ಆ ಸ್ಥಾನಕ್ಕೆ ವೆಂಕಟೇಶ ಹೆಗಡೆ ಹೊಸಬಾಳೆ, ಸಾಯಿ ಗಾಂವಕರ್‌, ಶಿವಾನಂದ ಕಡತೋಕ, ರವೀಂದ್ರ ನಾಯ್ಕ ಹೆಸರು ಪ್ರಸ್ತಾಪ ಇದೆ. ಇನ್ನೊಂದು ಮೂಲದ ಪ್ರಕಾರ ಬರಲಿರುವದು ತಾ.ಪಂ., ಜಿ.ಪಂ, ವಿಧಾನಸಭೆ ಚುನಾವಣೆ ಆಗಿರುವದರಿಂದ ಅನುಭವಿ ಭೀಮಣ್ಣ ಅವರನ್ನೇ ಮುಂದುವರಿಸುತ್ತಾರೆ ಎಂಬ ಮಾಹಿತಿ ಕೂಡ ಇದೆ. ಆದರೆ, ರಾಜ್ಯ ಕಾರ್ಯದರ್ಶಿ ನೀಡಿದ್ದೇ ಬದಲಾಯಿಸಲು ಎಂಬ ಮಾತೂ ಕೇಳಿ ಬಂದಿದೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.