ಪಾಳು ಬಿದ್ದಿವೆ ಆರೋಗ್ಯ ಇಲಾಖೆ ವಸತಿ ಗೃಹಗಳು!

Team Udayavani, Nov 23, 2019, 3:53 PM IST

UK-TDY-1

ಶಿರಸಿ: ನಾಲ್ಕು ಜನರಿಗೆ ಅನುಕೂಲ ಆಗಬೇಕಿದ್ದ ಇಲಾಖೆ ಸಿಬ್ಬಂದಿಗೆ ನೆರವಾಗಬೇಕಿದ್ದ ಕಟ್ಟಡಗಳು ಅನಾಥವಾಗಿ ಶಿಥಿಲವಾಗುತ್ತಿವೆ. ಇಲಾಖೆ ವ್ಯವಸ್ಥೆಗೆ ಕನ್ನಡಿಯಂತಿರುವಈ ಕಟ್ಟಡಗಳ ತೆರವಿಗೆ ಇನ್ನೂ ಮುಹೂರ್ತ ಕೂಡಿಬಂದಿಲ್ಲ. ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿಗೃಹ ಕಟ್ಟಡಗಳ ಸ್ಥಿತಿ ಇದಾಗಿದೆ.

ಐದಾರು ದಶಕಗಳ ಹಿಂದೆ ಆರೋಗ್ಯ ಕೇಂದ್ರ ಸ್ಥಾಪನೆಯಸಂದರ್ಭದಲ್ಲಿಯೇ ಕಟ್ಟಲಾಗಿರುವ ಹತ್ತು ವಸತಿ ಗೃಹ ಕಟ್ಟಡಗಳು ಇದ್ದು ಇವುಗಳಲ್ಲಿ ಎರಡು ಹೊರತುಪಡಿಸಿ ಉಳಿದವು ಶಿಥಿಲವಾಗಿದೆ. ಅಪಾಯದ ಕರಗಂಟೆ ಬಾರಿಸುತ್ತಿದೆ. ಅನುದಾನ ಅಲಭ್ಯತೆ ಮತ್ತಿತರ ತಾಂತ್ರಿಕ ಕಾರಣದಿಂದ ಈ ಕೆಲಸ ನೆನಗುದಿಗೆ ಬಿದ್ದಿದೆ.

ತಾಲೂಕಿನ ಪ್ರಮುಖ ಗ್ರಾಮೀಣ ಪ್ರದೇಶದಲ್ಲಿ ಒಂದಾದ ಹೆಗಡೆಕಟ್ಟಾದ ವೈದ್ಯರ, ಸಿಬಂದಿ ವಸತಿ ಕಟ್ಟಡ ಇದಾಗಿದೆ. ವೈದ್ಯಾಧಿಕಾರಿ ಸೇರಿದಂತೆ ಮೂವರು ಸಿಬ್ಬಂದಿ ಕಾರ್ಯ ಮಾಡುತ್ತಾರೆ. ನಿತ್ಯ ಸುತ್ತಮುತ್ತಲಿನ ಹಳ್ಳಿಗಳ 50ಕ್ಕೂ ಹೆಚ್ಚು ಮಂದಿ ಚಿಕಿತ್ಸೆಗೆ ಬರುತ್ತಾರೆ. ಇಷ್ಟೊಂದು ಸಂಖ್ಯೆಯಲ್ಲಿ ರೋಗಿಗಳು ಬರುವ ಆಸ್ಪತ್ರೆ ಸಿಬ್ಬಂದಿಗೆ ವ್ಯವಸ್ಥಿತ ವಸತಿಗೃಹವಿಲ್ಲ. ಎರಡು

ಹಳೆಯ ಕಟ್ಟಡದಲ್ಲಿ ಕಷ್ಟಪಟ್ಟು ವಸತಿ ಮಾಡುತ್ತಿದ್ದಾರೆ. ಮನೆಯ ಪಕ್ಕವೇ ಪಾಳು ಬಿದ್ದಿರುವ ಎಂಟು ಕಟ್ಟಡಗಳು ಭಯ ಆವರಿಸುವಂತಿದೆ. ಕಿಟಕಿ, ಬಾಗಿಲು ಇಲ್ಲದ, ಆಗಲೋ ಈಗಲೋ ಬೀಳುವಂತಿರುವ, ಸುತ್ತಲೂ ಗಿಡಗಂಟಿಗಳು ಬೆಳೆದು ನಿಂತಿರುವ ಪಾಳು ಕಟ್ಟಡಗಳು ಕೆಲವರಿಗೆ ಮೋಜು ಮಸ್ತಿನಡೆಸುವುದಕ್ಕೆ ಕಾರಣವಾಗುವಂತಿದೆ.

ಹಾವು, ಹರಣೆಗಳ ವಾಸ ಸ್ಥಾನವಾಗುವಂತಾಗಿದೆ. ವರ್ಷದ ಹಿಂದೆ ಜಿಲ್ಲಾ ಪಂಚಾಯತ್‌ ಇಂಜಿನೀಯರಿಂಗ್‌ ವಿಭಾಗದಿಂದ ಇಲ್ಲಿನ ಪಾಳು ಬಿದ್ದ ಮೂರು ವಸತಿಗೃಹ ತೆರವಿಗೆಪ್ರಸ್ತಾವನೆ ಕಳುಹಿಸಲಾಗಿತ್ತು. ಅದಕ್ಕಾಗಿ 50ಸಾವಿರ ರೂ.ಮಂಜೂರಾಗಿದೆ. ಇನ್ನಷ್ಟೇ ಆರೋಗ್ಯ ಇಲಾಖೆಯಿಂದ ಅನುಮತಿ ದೊರೆಯಬೇಕಿದೆ. ಕೇವಲ 50 ಸಾವಿರ ರೂ. ಮಾತ್ರ ಬಿಡುಗಡೆ ಆಗಿದ್ದರಿಂದ ಒಂದೆರಡು ವಸತಿಗೃಹ ಕಟ್ಟಡ ಮಾತ್ರ ತೆರವುಗೊಳಿಸಬಹುದು. ಉಳಿದವುಗಳಿಗೆ ಏನು ಎಂಬ ಪ್ರಶ್ನೆ ಕೂಡ ಎದುರಾಗಿದೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.