ಭಟ್ಕಳದ ಮೇಲೆ ಹೆಚ್ಚಿನ ನಿಗಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ
Team Udayavani, Mar 27, 2020, 12:27 PM IST
Representative Image
ಕಾರವಾರ: ಕೋವಿಡ್-19 ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಟ್ಕಳದಲ್ಲಿ `ಹೆಲ್ತ್ ಎಮರ್ಜೆನ್ಸಿ’ (ಆರೋಗ್ಯ ತುರ್ತು ಪರಿಸ್ಥಿತಿ) ಘೋಷಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ತಿಳಿಸಿದರು.
ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಟ್ಕಳ ಅತೀ ಚಿಕ್ಕ ಪಟ್ಟಣವಾದರೂ ಇಲ್ಲಿ ವಿದೇಶದಿಂದ ಬಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೋವಿಡ್-19 ಸೋಂಕು ವಿದೇಶದಿಂದ ಬಂದವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಭಟ್ಕಳದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದೆ. ಈ ಸೋಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವವನ್ನು ಪರೀಕ್ಷೇಗೆ ಕಳುಹಿಸಲಾಗಿದೆ. ಪರಿಸ್ಥಿತಿ ಕೈಮೀರದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಭಟ್ಕಳ ಪುರಸಭೆ, ಜಾಲಿ ತಾಲೂಕು ಪಂಚಾಯಿತಿ, ಶಿರಾಲಿ ಗ್ರಾಮ ಪಂಚಾಯಿತಿ, ಹೆಬ್ಳೆ ಗ್ರಾಮಪಂಚಾಯಿತಿ, ಮಾವಿನಕುರ್ವೆ ಗ್ರಾಮ ಪಂಚಾಯಿತಿ, ಮುಂಡಳ್ಳಿ ಗ್ರಾಮ ಪಂಚಾಯಿತಿ, ಯಲ್ವಾಡಿಕಾವೂರು ಗ್ರಾಮ ಪಂಚಾಯಿತಿ ಮತ್ತು ಮುತ್ತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕೂಡಲೇ ಜಾರಿ ಬರುವಂತೆ ಈ ಆರೋಗ್ಯ ತುರ್ತು ಪರಿಸ್ಥಿತಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಭಟ್ಕಳದಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಮುಲ್ಲಾಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಆರೋಗ್ಯ, ಕಾನೂನು ಸುವ್ಯವಸ್ಥೆ ಹಾಗೂ ಸಮಗ್ರ ಮೇಲುಸ್ತುವಾರಿ ಎಂದು ವಿಭಾಗಿಸಿ ಅಧಿಕಾರಿಗಳಿಗೆ ಪ್ರತ್ಯೇಕ ಜವಾಬ್ದಾರಿಗಳನ್ನು ನೀಡಲಾಗಿದೆ. ತುರ್ತು ಪರಿಸ್ಥಿಯನ್ನು ನಿರ್ವಹಿಸಲು ಹಣಕಾಸಿನ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಠಪಡಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.