ಉ.ಕ.ದಲ್ಲಿ 10 ದಿನದಿಂದ ಭಾರೀ ಮಳೆ

ಸಿಎಂಗೆ ಜಿಲ್ಲಾಧಿಕಾರಿ ಮುಗಿಲನ್‌ ಮಾಹಿತಿ­! ಐವರ ಸಾವು-ಮೃತರ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ವಿತರಣೆ

Team Udayavani, Jul 21, 2021, 8:51 PM IST

Untitled-6

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿ ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿಯ ವಿವರ ಪಡೆದರು. ರೈತರಿಗೆ, ಬಡವರಿಗೆ ತೊಂದರೆ ಆಗದಂತೆ ಕೂಡಲೇ ಪರಿಹಾರ ವಿತರಿಸಿ ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್‌ಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಎಡೆಬಿಡದೆ ಮಳೆ ಸುರಿದಿದೆ. ಆದರೆ ಕಾಳಜಿ ಕೇಂದ್ರ ತೆರೆಯುವ ಸನ್ನಿವೇಶ ನಿರ್ಮಾಣವಾಗಿಲ್ಲ. ಆದರೂ 336 ಗಂಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. 5272 ಜನರನ್ನು ಸ್ಥಳಾಂತರಿಸುವ ಸಾಮರ್ಥ್ಯ ನಮಗಿದೆ. 168 ಗ್ರಾಮಗಳು ನೆರೆಗೆ ತುತ್ತಾಗುತ್ತವೆ. ಈ ಸಂದರ್ಭದಲ್ಲಿ 185 ದೋಣಿ ಹಾಗೂ 21 ಉರಗ ತಜ್ಞರನ್ನು ಇಟ್ಟುಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಸಿಎಂಗೆ ವಿವರಿಸಿದರು.

ಕಾರವಾರ ನಗರ ಭಾಗದ 3 ಕಡೆ, ಹೊನ್ನಾವರ, ದಾಂಡೇಲಿ ಪಟ್ಟಣದ ತಲಾ 2 ಪ್ರದೇಶ ಮಳೆ ನೀರಿಗೆ ಮುಳುಗುವ ಪ್ರದೇಶ ಎಂದು ಗುರುತಿಸಲಾಗಿದೆ. ಇಲ್ಲಿ ತುರ್ತು ಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದೂ ವಿವರಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಐವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ತಕ್ಷಣ ತಲಾ 5 ಲಕ್ಷದಂತೆ 25 ಲಕ್ಷ ರೂ. ವಿತರಿಸಲಾಗಿದೆ. ಭಟ್ಕಳ, ಕುಮಟಾ, ಮುಂಡಗೋಡ, ಶಿರಸಿ, ಯಲ್ಲಾಪುರದಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದರು. ಮಳೆಯಿಂದ 110 ಮನೆಗಳಿಗೆ 4.174 ಲಕ್ಷ ವಿತರಿಸಲಾಗಿದೆ. 7 ಮನೆಗೆ ಸಂಪೂರ್ಣ ಹಾನಿಯಾಗಿವೆ. 37 ತೀವ್ರ ಹಾನಿಯಾಗಿವೆ. 437 ಭಾಗಶಃ ಹಾನಿಯಾಗಿವೆ. 11 ದನದ ಕೊಟ್ಟಿಗೆ ನಾಶವಾಗಿವೆ. 437 ಮನೆಗಳಿಗೆ ಭಾಗಶಃ ಹಾನಿ ಪೈಕಿ 141 ಪ್ರಕರಣ ತಿರಸ್ಕರಿಸಲಾಗಿದೆ. 316 ಮನೆಗಳಿಗೆ 45.41 ಲಕ್ಷ ಪರಿಹಾರವಾಗಿ ವಿತರಿಸಲಾಗಿದೆ. 35 ಪ್ರಕರಣ ಬಾಕಿ ಇವೆ. ಮನೆಗಳಿಗೆ ನೀರು ನುಗ್ಗಿ ಬಟ್ಟೆ, ಪಾತ್ರೆ, ಆಹಾರಧಾನ್ಯ ಹಾಳಾಗಿತ್ತು. 135 ದೋಣಿಗಳಿಗೆ ಹಾನಿಯಾಗಿದ್ದು, 3.51 ಲಕ್ಷ ಪರಿಹಾರ ವಿತರಿಸಲಾಗಿದೆ.

ತೋಟಗಾರಿಕಾ ಬೆಳೆಯ ಪೈಕಿ 129.36 ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಇದಕ್ಕೆ ಪರಿಹಾರವಾಗಿ 24.76 ಲಕ್ಷ ವಿತರಿಸಲಾಗಿದೆ. ಸದಾ ಬೆಳೆಯ ಪೈಕಿ 48.40 ಹೆಕ್ಟೇರ್‌ ಹಾನಿಯಾಗಿದೆ. 6.10 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಜಿಲ್ಲೆಯಲ್ಲಿ 70041.0 ಹೆಕ್ಟೇರ್‌ ಭೂಮಿ ಬೆಳೆಯುವ ಭೂಮಿಯಾಗಿದ್ದು, ಈ ಪೈಕಿ 384720 ಹೆಕ್ಟೇರ್‌ ಭೂಮಿ ಬಿತ್ತನೆಯಾಗಿದೆ. ಶೇ.54.93 ರಷ್ಟು ಕೃಷಿ ಕಾರ್ಯ ಆಗಿದೆ. ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಪರಿಹಾರಕ್ಕೆ 51.07 ಕೋಟಿ ರೂ. ಹಣವಿದೆ ಎಂದು ಡಿಸಿ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಸಿಇಒ ಪ್ರಿಯಂಕಾ, ಎಸ್ಪಿ ಶಿವಪ್ರಕಾಶ್‌ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.