ಮಹಾ ಗಾಳಿ-ಮಳೆಗೆ ಉಕ್ಕಿದ ಗಂಗಾವಳಿ
Team Udayavani, Jul 12, 2019, 10:21 AM IST
ಅಂಕೋಲಾ: ತಾಲೂಕಿನ ಬಿಳಿಹೊಯ್ಗಿ ಗ್ರಾಮದ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಅಂಕೋಲಾ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಹಾ ಗಾಳಿ ಮಳೆಗೆ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದ್ದು ನದಿ ಪಾತ್ರದ ಪ್ರದೇಶಗಳಲ್ಲಿ ನೀರು ನುಗ್ಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಗಂಗಾವಳಿ ನದಿ ಪಾತ್ರದ ಬಿಳಿಹೊಯ್ಗಿ, ಹಿಚ್ಕಡದ ಕೂರ್ವೆ, ದಂಡೇಭಾಗ, ಮೊಟನಕುರ್ವೆ, ಸಗಡಗೇರಿ, ಗಂಗಾವಳಿ, ಮಂಜಗುಣಿ, ಅಗ್ರಗೋಣದ ಶೆಡಿಕಟ್ಟಾದ ಭಾಗಗಳ ಮನೆಗಳಿಗೆ ನೀರು ನುಗ್ಗಿದೆ. ಈ ಪ್ರದೇಶದಲ್ಲಿನ ಜನರನ್ನು ಸುರಕ್ಷಿತ ಪ್ರದೇಶದತ್ತ ಸಾಗಿಸಲು ತಾಲೂಕಾಡಳಿತ ದೋಣಿ ವ್ಯವಸ್ಥೆ ಕಲ್ಪಿಸಿದೆ.
ಜತೆಯಲ್ಲಿ ಪೊಲೀಸ್ ಇಲಾಖೆ ಈ ಭಾಗಗಳಿಗೆ ತೆರಳಿ ಮುನ್ನೆಚ್ಚರಿಕೆ ನೀಡುತ್ತಿದೆ. ನೆರೆ ಎದುರಾಗುವ ಸಂದರ್ಭ ಇರುವುದರಿಂದ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯ ಹೆಗ್ಗಾರ ಭಾಗದಲ್ಲಿ ಗಂಗಾವಳಿ ನದಿ ನೀರಿನ ಸೆಳೆತದಿಂದ ಕಾಲು ಸಂಕ ಕೊಚ್ಚಿ ಹೋದ ಪರಿಣಾಮ ವೈದ್ಯಹೆಗ್ಗಾರ – ಹಳವಳ್ಳಿ ರಸ್ತೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ. ಕುಂಟಕಣಿ ಭಾಗದಲ್ಲಿಯು ಕೃಷಿ ಜಮೀನು ಮತ್ತು ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಕೃಷಿ ಜಮೀನಿನಲ್ಲಿ ಹಾಕಿದ ಭತ್ತದ ಬೀಜ ನೀರಿಗೆ ಕೊಚ್ಚಿಹೋಗಿ ಅನ್ನದಾತನನ್ನು ಕಂಗೆಡಿಸಿದೆ. ತಾಲೂಕಿನಲ್ಲಿ ಕಂಡು ಬಂದ ನೆರೆ ಪೀಡಿತ ಪ್ರದೇಶಗಳಿಗೆ ತಹಶೀಲ್ದಾರ್ ವಿವೇಕ್ ಶೇಣ್ವಿ ಭೇಟಿ ನೀಡಿ ಪರಿಶಿಲನೆ ನಡೆಸಿದರು.
ಬಾರಿ ಗಾಳಿ ಮಳೆಗೆ ತಾಲೂಕಿನಾದ್ಯಂತ ಮರಗಳು ಧರೆಗೆ ಉರುಳು ತ್ತಿದ್ದು ಇದರ ಪರಿಣಾಮ ಹೆಸ್ಕಾಂ ಇಲಾಖೆಯ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕಚ್ಚಿವೆ. ಒಟ್ಟೂ ಹೆಸ್ಕಾಂ ಇಲಾಖೆಗೆ ರೂ. ಹತ್ತು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿದೆ.
ತೆರವು ಕಾರ್ಯಾಚರಣೆ: ಗುಡ್ಡದ ಮಣ್ಣು ರಸ್ತೆ ಮೇಲೆ ಭಾರಿ ಪ್ರಮಾಣದಲ್ಲಿ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆಗೆ ವಿಳಂಬವಾಯಿತು. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಅಡ್ಡಿ ಆಗುತ್ತಿತ್ತು. ಅಂಕೋಲಾ ಮತ್ತು ಯಲ್ಲಾಪುರ ಪೊಲೀಸ್, ಅಗ್ನಿಶಾಮಕ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸ್ಥಳೀಯರ ನೆರವಿನಿಂದ ಮೂರು ಜೆಸಿಬಿಗಳ ಮೂಲಕ ಮಣ್ಣನ್ನು ತೆರವು ಮಾಡಿ ಸಂಚಾರ ಆರಂಭಿಸಲಾಯಿತು. ರಸ್ತೆಯ ಇಕ್ಕೆಲಗಳಲ್ಲಿ ಸುಮಾರು 20 ಕಿಮೀ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ತಹಶೀಲ್ದಾರ್ ವಿವೇಕ್ ಶೇಣ್ವಿ, ಸಿಪಿಐ ಪ್ರಮೋದ್ ಕುಮಾರ್, ಪಿಎಸೈ ಶ್ರೀಧರ್ ಅವರ ತಂಡ ಸ್ಥಳದಲ್ಲಿದ್ದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.