ರಾಜ್ಯಾದ್ಯಂತ ಭಾರೀ ಮಳೆ: ಯಾವ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ?
Team Udayavani, Oct 25, 2019, 8:21 AM IST
ಉಡುಪಿ/ದಕ್ಷಿಣ ಕನ್ನಡ: ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.
ಕ್ಯಾರ್ ಚಂಡಮಾರುತವು ಭಾರತೀಯ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಭಾರೀ ಗಾಳಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗ ರೆಡ್ ಅಲರ್ಟ್ ಘೋಷಿಸಿದೆ.
ಯಾವ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ( ಅ. 25):
ಭಾರೀ ಗಾಳೀ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ , ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ಪೂರ್ವ ತರಗತಿಯವರೆಗೆ) ಇಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ರಜೆ ಘೋಷಿಸಿದ್ದಾರೆ.
ಉಡುಪಿಯಲ್ಲೂ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಜಿಲ್ಲೆಯ ಎಲ್ಲಾ ಮಾದರಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜೆ. ಜಗದೀಶ್ ಮೌಖಿಕ ಆದೇಶ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲೂ ವರುಣದೇವನ ಅಬ್ಬರ ಮುಂದುವರೆದಿದ್ದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಲವೆಡೆ ಮಳೆ ಆಧಿಕವಾಗಿದೆ. ಈ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸೂಚನೆಯಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.