ಆರ್.ಎನ್ ಶೆಟ್ಟಿ ಇನ್ನಿಲ್ಲ: ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಇವರ ಕೊಡುಗೆ ಅಪಾರ !
Team Udayavani, Dec 17, 2020, 9:06 AM IST
ಬೆಂಗಳೂರು: ಕರ್ಮಯೋಗಿ, ನವಮುರುಡೇಶ್ವರದ ನಿರ್ಮಾಪಕ, ಆರ್.ಎನ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಆರ್.ಎನ್ ಶೆಟ್ಟಿ ಇಂದು ನಿಧನರಾಗಿದ್ದಾರೆ.
1928ರಲ್ಲಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಜನಿಸಿದ ಇವರ ಪೂರ್ಣ ಹೆಸರು ರಾಮ ನಾಗಪ್ಪ ಶೆಟ್ಟಿ. ಕೃಷಿ ಕುಟುಂಬದಲ್ಲಿ ಜನಿಸಿದ ಇವರ ತಂದೆ ಮುರುಡೇಶ್ವರ ದೇವಾಲಯದ ಅನುವಂಶೀಯ ನಿರ್ವಾಹಕರಾಗಿ, ಆಡಳಿತಾಧಿಕಾರಿಯಾಗಿ ಶಿವನಿಗೆ ಸೇವೆ ಸಮರ್ಪಿಸುತ್ತಿದ್ದರು. ಪ್ರೌಢಶಿಕ್ಷಣ ಮುಗಿಸಿದ ನಂತರ, ಶೆಟ್ಟಿರವರು ಶಿರಸಿಯ ನಾಗರಿಕ ಗುತ್ತಿಗೆದಾರರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು.
ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಕಾಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಆರ್.ಎನ್ ಶೆಟ್ಟಿಯವರದು. ಮಾತ್ರವಲ್ಲದೆ ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು. ಇದಲ್ಲದೆ ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ವಸತಿ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲ ಸೌಕರ್ಯ, ವಿದ್ಯುತ್, ನೀರಾವರಿ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದರು.
ಇದನ್ನೂ ಓದಿ: ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಆರ್.ಎನ್ ಶೆಟ್ಟಿ ನಿಧನ; ಮುಖ್ಯಮಂತ್ರಿ ಬಿಎಸ್ ವೈ ಸಂತಾಪ
ಆರ್ ಎನ್ ಶೆಟ್ಟಿ ಅವರು ಉದ್ಯಮಿಯಾಗಿ ದೇಶವಿದೇಶಗಳಲ್ಲಿ ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್ ಎನ್ ಶೆಟ್ಟಿ ಆಂಡ್ ಕಂಪೆನಿ ಆರಂಭಿಸಿದ್ದರು. ಕಂಪೆನಿ ಮೂಲಕ ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟು, ವಾರಾಹಿ ಜಲ ವಿದ್ಯುತ್ ಯೋಜನೆ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮೊದಲಾದ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಮೋಟಾರ್ಸ್ ಕಂಪೆನಿ, ಫೈನಾನ್ಸ್ ಕಂಪೆನಿ, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳನ್ನು ಅವರು ಸ್ಥಾಪಿಸಿದ್ದರು. ಅವರ ಆರ್.ಎನ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಕರ್ನಾಟಕದ ಅತಿ ದೊಡ್ಡ ಕ್ಯಾಂಪಸ್ ಎನಿಸಿಕೊಂಡಿದೆ. ಬೆಂಗಳೂರು ವಿಶ್ವವಿದ್ಯಾಲಯ 2009-10ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು. 2004 ರಲ್ಲಿ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿಯನ್ನು ವಾಣಿಜ್ಯ ಮತ್ತು ಕರ್ನಾಟಕ ಕೈಗಾರಿಕಾ ಚೇಂಬರ್ಸ್ ಒಕ್ಕೂಟದವರು ಶೆಟ್ಟಿಯವರಿಗೆ ನೀಡಿ ಸನ್ಮಾನಿಸಿದ್ದಾರೆ.
ಆರ್. ಎನ್. ಶೆಟ್ಟಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಇಂದು (ಡಿ.17)ಮಧ್ಯಾಹ್ನ 2 ಗಂಟೆಯ ಬಳಿಕ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೂವರು ಗಂಡು, ನಾಲ್ವರು ಹೆಣ್ಣು ಹಾಗೂ ಪತ್ನಿಯನ್ನು ಅಗಲಿದ ಶೆಟ್ಟಿ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.