ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್
ದೇಶ ವಿರೋಧಿ ಕೆಲಸ ಮಾಡಿದರೆ ಡಿಶುಂ ಮಾಡ್ತೀನಿ
Team Udayavani, Apr 12, 2024, 8:20 PM IST
ಕಾರವಾರ: ನಾನು ಮುಖ್ಯಮಂತ್ರಿ ಆದರೆ ಯುಪಿ ಬುಲ್ಡೊಜರ್ ಮಾದರಿ ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನ ಜಿಂದಾಬಾದ್ ಅಂದವರ ಎನ್‌ಕೌಂಟರ್ ಆಗಲಿದೆ.
ಯುಪಿಯಲ್ಲಿ ಯೋಗೀಜಿ 7000 ದೇಶ ವಿರೋಧಿಗಳಿಗೆ ಜನ್ನತ್ ತೋರಿಸಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿ ಆದರೆ ಹಿಂದುತ್ವ, ಹಿಂದೂಗಳ ವಿರುದ್ಧ ಯಾರಾದರೂ ಮಾತಾಡಿದರೆ, ದೇಶ ವಿರೋಧಿ ಕೆಲಸ ಮಾಡಿದರೆ ಅವರನ್ನು ಡಿಶುಂ ಮಾಡ್ತೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಷಯಗಳ ಬಗ್ಗೆ ಖಾದರ್‌ವರೆಗೂ ಮಾತಾಡ್ತಿನಿ ಅಂದೆ. ಅದಕ್ಕೆ ಅವರು ನಾನು ಸೆಕ್ಯುಲರ್. ನನ್ನ ಏಕೆ ಸೇರಿಸಿಕೊಳ್ಳುತೀ¤ರಿ. ಪಾಕಿಸ್ತಾನ ಜಿಂದಾಬಾದ್ ಅನ್ನುವವರಿಗೆ ಎಷ್ಟಾದರೂ ಬೈಯಿರಿ ಎಂದರು. ಅದನ್ನೇ ನಾನು ಮಾಡಿದೆ. ನಾನು ಮಾತನಾಡಿದ ಎಲ್ಲ ಅಂಶಗಳು ವಿಧಾನಸಭಾ ಕಡತದಲ್ಲಿದೆ. ಆದರೆ ಈ ಕಾಂಗ್ರೆಸ್ ಸರಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿತು ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಮನೆಗೆ ನುಗ್ಗಿ ಹೊಡೀತಾರೆ. ಅವರು ನಮ್ಮನ್ನು ಹೊಡೆದರೂ ಅವರನ್ನು ಪೊಲೀಸರು ಅರೆಸ್ಟ್ ಮಾಡದಂತ ಕಾನೂನನ್ನು ಕಾಂಗ್ರೆಸ್ ತರಲಿದೆ. ನಾನು ಕಟ್ಟಾ ಹಿಂದೂ ಲಿಂಗಾಯತನಾಗಿದ್ದು ನನ್ನ ಟಚ್ ಮಾಡೋಕೆ ಯಾರಿಂದಲೂ ಸಾಧ್ಯವಿಲ್ಲ. ಹೀಗೆ ಪ್ರತಿಯೊಬ್ಬರು ಹಿಂದುತ್ವದ ವಿಚಾರದಲ್ಲಿ ಗಟ್ಟಿಯಾಗಿ ನಿಂತು ದೇಶದ್ರೋಹಿಗಳ ವಿರುದ್ಧ ಸಮರ ಸಾರಬೇಕು. ಬಿಜೆಪಿ ಅಧಿ ಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎಂದು ಕಾಂಗ್ರೆಸ್‌ನವರು ಗುಲ್ಲೆಬ್ಬಿಸುತ್ತಿದ್ದಾರೆ. ಇದನ್ನು ಯಾರೂ ನಂಬಬೇಡಿ. ಬಿಜೆಪಿ ಸಂವಿಧಾನ ಬದಲಿಸೋದಿಲ್ಲ. ಕಾಂಗ್ರೆಸ್‌ನವರಿಗೆ ಅಂಬೇಡ್ಕರ್, ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.