ಶಿರಸಿ: ಹಣ ಪಾವತಿಸದೇ ಇದ್ದರೆ Election ಬಹಿಷ್ಕಾರಕ್ಕೆ ಗುತ್ತಿಗೆದಾರರ ಸಂಘ ಚಿಂತನೆ
Team Udayavani, Apr 17, 2023, 5:38 PM IST
ಶಿರಸಿ: ಕಳೆದ ಮಾರ್ಚ ಕೊನೆಗೆ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ನಡೆದ ಸರಕಾರಿ ಕಾಮಗಾರಿಗೆ ಹಣ ಬಂದರೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಕಳೆದ ಅನುದಾನದ ಹಣ ಬಂದೇ ಇಲ್ಲ. ಈ ತಿಂಗಳ ಕೊನೆಯೊಳಗೆ ಗುತ್ತಿಗೆದಾರರಿಗೆ ನ್ಯಾಯ ಕೊಡದೇ ಹೋದರೆ ಬರಲಿರುವ ವಿಧಾನ ಚುನಾವಣೆ ಬಹಿಷ್ಕಾರ ಮಾಡಲಾಗುತ್ತದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಧೀರು ಶಾನಭಾಗ ಹೇಳಿದರು.
ಅವರು ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ, ಚಿಕ್ಕ ನೀರಾವರಿ, ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಸೇರಿದಂತೆ ಜಿಲ್ಲೆಗೆ 250 ಕೋಟಿ ರೂ. ಗೂ ಅಧಿಕ ಹಣ ಸರಕಾರದಿಂದ ಬಾಕಿ ಇದೆ. ಕೆಲವರಿಗೆ ಬ್ಯಾಂಕ್ ಬಡ್ಡಿ ಕಟ್ಟಲೂ ಆಗಿಲ್ಲ. ನೆರೆ ಹಾನಿಯ ಕಾಮಗಾರಿಗೂ ಹಣ ಬರಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಈ ವಿಷಯದಲ್ಲಿ ನಿಷ್ಕ್ರಿಯ ಆಗಿದ್ದಾರೆ ಎಂದೇ ಅರ್ಥ ಎಂದರು.
೪೦೦ ಕೋ.ರೂ. ಮೊತ್ತದ ಕಾಮಗಾರಿಗೆ ಟೆಂಡರ್ ಸರಕಾರ ಕರೆದಿದ್ದಿದೆ. ಆದರೆ, ಅದರಲ್ಲೂ ಪಾಲ್ಗೊಳ್ಳಬೇಕೋ, ಬೇಡವೋ ಆಲೋಚಿಸಬೇಕಾಗಿದೆ ಎಂದರು. ಜಿಎಸ್ಟಿ 12 ರಿಂದ18 ಆಗಿದೆ. ಶೇ.6 ಗುತ್ತಿಗೆದಾರರು ತುಂಬುವಂತೆ ಆಗಿದೆ. ಮರಳು ಲಾಬಿ ಆಗಿದೆ. ಇನ್ನು ಮಳೆಗಾಲ ಕೂಡ ಬರಲಿದೆ. ಮರಳಿನ ಸಮಸ್ಯೆ ಇತ್ಯರ್ಥ ಆಗುವಂತೆ ಇಲ್ಲವಾಗಿದೆ ಎಂದೂ ಅಸಮಧಾನ ವ್ಯಕ್ತಪಡಿಸಿದ ಅವರು ಮೊದಲಿದ್ದ ಸಮಸ್ಯೆ ಕಳೆದ ಐದು ವರ್ಷಗಳಿಂದ ಹೆಚ್ಚಳ ಆಗಿದೆ ಎಂದರು.
ಈ ವೇಳೆ ಶ್ಯಾಂಸುಂದರ ಭಟ್ಟ, ರಮೇಶ ದುಭಾಶಿ, ಜಿ.ಎಸ್ ಹಿರೇಮಠ, ಗಣೇಶ ದಾವಣಗೆರೆ, ವಿ.ಎಂ.ಹೆಗಡೆ, ಸತೀಶ ಗೌಡ ಸಿದ್ದಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.