Illegal sand mining; ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ
Team Udayavani, Oct 27, 2023, 7:38 PM IST
ಕುಮಟಾ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಇಲಾಖಾ ಅಧಿಕಾರಿಗಳ ತಂಡದೊಂದಿಗೆ ತೆರಳಿ ದಾಳಿ ನಡೆಸಿದ ಘಟನೆ ತಾಲೂಕಿನ ದೀವಗಿಯಲ್ಲಿ ನಡೆದಿದೆ.
ತಾಲೂಕಿನ ಹಲವೆಡೆ ನದಿ ತೀರ ಪ್ರದೇಶಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡಲಾಗುತ್ತಿರುವ ಕುರಿತು ದೂರುಗಳು ಹಲವು ದಿನಗಳಿಂದ ಕೇಳಿ ಬರುತ್ತಿತ್ತು.ತಾಲೂಕಿನಲ್ಲಿ ಸಿಗುವ ಮರಳು ಪಕ್ಕದ ಶಿರಸಿ, ಸಿದ್ದಾಪುರ ಭಾಗಕ್ಕೆ ಹಾಗೂ ಸ್ಥಳೀಯ ಕೆಲ ಕಟ್ಟಡ ಕಾಮಗಾರಿಗಳ ಕಾರ್ಯಕ್ಕೆ ಸಾಗಾಟ ಮಾಡಲಾಗುತ್ತಿತ್ತು.ಇನ್ನು ಅಕ್ರಮ ಮರಳುಗಾರಿಕೆ ಮಾಡುವವರು ರಾತ್ರಿ ವೇಳೆಯಲ್ಲಿ ದೋಣಿಗಳನ್ನು ಬಳಸಿ ಮರಳನ್ನು ತೆಗೆಯುತ್ತಿದ್ದು, ಬೆಳಗಾಗುವುದರೊಳಗಾಗಿ ಸಂಬಂಧಿಸಿದ ಜಾಗಕ್ಕೆ ಮರಳನ್ನು ರವಾನಿಸುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿತ್ತು.ಜೊತೆಗೆ ಕೆಲ ಪೋಲಿಸ್ ಅಧಿಕಾರಿಗಳು ಮರಳು ದಂಧೆಕೋರರ ಬಳಿ ಹಫ್ತಾ ವಸೂಲಿ ಮಾಡಿ, ಗಾಡಿಗಳನ್ನು ಬಿಟ್ಟು ಕಳುಹಿಸಿದ ಕುರಿತು ಆರೋಪ ಕೂಡ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವುಗಳ ಆಧಾರದ ಮೇಲೆ ಜಿಲ್ಲಾಧಿಕಾರಿ, ತಹಶೀಲ್ದಾರ್,ಕಂದಾಯ ನಿರೀಕ್ಷಕರು ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು ಹಠಾತ್ತನೆ ದಾಳಿ ನಡೆಸಿ ಮರಳು ದಿಬ್ಬಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.