ಕದಂಬ ಸಸ್ಯ ಸಂತೆ ಉದ್ಘಾಟನೆ
Team Udayavani, Jun 11, 2020, 7:11 AM IST
ಶಿರಸಿ: ಕೃಷಿಯ ಜೀವ ವೈವಿಧ್ಯತೆ ಹೆಚ್ಚಿಸಬೇಕು. ಕೃಷಿ ಜೀವ ವೈವಿಧ್ಯ ಹೆಚ್ಚಳಕ್ಕೆ ಇಂಥ ಸಸ್ಯ ಸಂತೆ ಪೂರಕ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಹೇಳಿದರು.
ನಗರದ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಸಂಘವು ಅರಣ್ಯ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದಲ್ಲಿ ಆರಂಭಿಸಿರುವ ಸಸ್ಯ ಸಂತೆ ಉದ್ಘಾಟಿಸಿ ಅವರು ಮಾತನಾಡಿದರು. ಹಣ್ಣಿನ ಗಿಡಗಳು, ಸಾಂಬಾರ ಗಿಡಗಳನ್ನು ಬೆಳೆಸುವುದು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಕೃಷಿ ಜೀವ ವೈವಿಧ್ಯತೆ ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು. ಈಗಾಗಲೇ ಸಾವಯವ ಕೃಷಿಗೆ ಸಂಬಂಧಿಸಿ ಸಂಘ ರಚನೆಯಾಗಿದೆ. ಸಾವಯವ ಉತ್ಪನ್ನಗಳ ಮಾರಾಟ ನಡೆಯುತ್ತಿದೆ. ವಿವಿಧ ತಳಿಯ ಗಿಡಗಳನ್ನು ಬೆಳೆಸಿದ ರೈತರಿಗೆ ಆದ್ಯತೆ ಸಿಗಬೇಕು ಎಂಬ ಕಾರಣಕ್ಕೆ ಅವರನ್ನು ಗುರುತಿಸುವ ಕಾರ್ಯ ಇನ್ನಷ್ಟು ಆಗಬೇಕು ಎಂದರು.
ಕದಂಬ ಮಾರ್ಕೆಟಿಂಗ್ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ಕೋಟೆಮನೆ, ಸಸ್ಯ ಸಂತೆಯಲ್ಲಿ 80ಕ್ಕೂ ಹೆಚ್ಚು ವಿಧದ ಗಿಡಗಳಿವೆ. ಔಷಧ ಸಸ್ಯಗಳು ಲಭ್ಯವಿದೆ. ಮುಂದಿನ ದಿನಗಳಲ್ಲಿ ಹೂವಿನ ಮೇಳ ಸಂಘಟಿಸಲಾಗುತ್ತದೆ. ಕದಂಬ ಮಾರ್ಕೆಟಿಂಗ್ ಸಂಸ್ಥೆ 3ಲಕ್ಷ ಹಲಸಿನಕಾಯಿ ಹಪ್ಪಳ, 2ಟನ್ ಹಲಸಿನ ಕಾಯಿ ಚಿಪ್ಸ್ ಖರೀದಿಸಿದೆ ಎಂದರು. ಡಿಎಫ್‌ಓ ಎಸ್.ಜಿ. ಹೆಗಡೆ, ಎಸಿಎಫ್ ರಘು, ಡಾ| ಮಂಜು, ಎಂ.ವಿ. ಹೆಗಡೆ ತಟ್ಟಿಕೈ, ಗುರುಪಾದ ಹೆಗಡೆ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.