Dandeli: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ
Team Udayavani, Jan 18, 2024, 12:52 PM IST
ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು.
ನೂತನ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅನಂತಮೂರ್ತಿ ಹೆಗಡೆ, ಪ್ರತಿಯೊಬ್ಬನಿಗೂ ಕುಡಿಯುವ ನೀರು ಅತಿ ಅಗತ್ಯವಾಗಿ ಬೇಕಾಗಿದ್ದು, ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅದರಲ್ಲಿಯೂ ಬಡವರಿಗೆ ಹಣ ಕೊಟ್ಟು ಕುಡಿಯುವ ನೀರು ಖರೀದಿಸಲು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ವತಿಯಿಂದ ಇಲ್ಲಿಯ ಬಸ್ ನಿಲ್ದಾಣಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಒದಗಿಸಿಕೊಡಲಾಗಿದೆ. ಈಗಾಗಲೆ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಶಾಲಾ-ಕಾಲೇಜು ಮತ್ತು ಬಸ್ ನಿಲ್ದಾಣ, ಆಸ್ಪತ್ರೆಗಳಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಮ್ಮ ಟ್ರಸ್ಟ್ ಮೂಲಕ ನೀಡಲಾಗಿದೆ. ಸಮಾಜ ಎಲ್ಲವನ್ನು ನಮಗೆ ಕೊಟ್ಟಾಗ ಸಮಾಜಕ್ಕೆ ನಮ್ಮ ಕೊಡುಗೆ ಕೂಡ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅಳಿಲು ಸೇವೆಯ ಪ್ರಯೋಜನವನ್ನು ಸಾರ್ವಜನಿಕರು, ಪ್ರಯಾಣಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಸಾರಿಗೆ ಘಟಕದ ವ್ಯವಸ್ಥಾಪಕ ಎಲ್.ಎಚ್.ರಾಥೋಡ್ ಮಾತನಾಡಿ, ಬಸ್ ನಿಲ್ದಾಣಕ್ಕೆ ಅತಿ ಅವಶ್ಯವಾಗಿ ಬೇಕಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅನಂತಮೂರ್ತಿ ಹೆಗಡೆ ಒದಗಿಸಿ ಕೊಟ್ಟಿದ್ದಾರೆ. ಅವರ ಈ ಸೇವೆಗೆ ಸಾರಿಗೆ ಘಟಕದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಚಾರಿ ನಿರೀಕ್ಷಕ ಲಿಂಗರಾಜು, ಅನಂತಮೂರ್ತಿ ಹೆಗಡೆಯವರ ತಂದೆ ಮಹಾಬಲೇಶ್ವರ ಹೆಗಡೆ, ಟ್ರಸ್ಟಿನ ಸಂತೋಷ್ ನಾಯ್ಕ, ಸ್ಥಳೀಯ ಪ್ರಮುಖರಾದ ಇಲಿಯಾಸ ಕಾಟಿ, ರವಿ ಮಾಳಕರಿ, ಬಶೀರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.