ಇನ್ಸ್ಪಾಯರ್ ಅವಾರ್ಡ್ ಸ್ಪರ್ಧೆ: ಶಿರಸಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Team Udayavani, Sep 21, 2022, 10:07 PM IST
ಶಿರಸಿ: ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 2020-21 ನೇ ಸಾಲಿನ ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಸ್ಪರ್ಧೆಯಲ್ಲಿ ನಗರದ ಗಣೇಶನಗರ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಧನ್ಯಾ ಆಚಾರಿ, ಸಾಯಿನಾಥ ಮಾಲದಕರ ಪ್ರಶಸ್ತಿ ಪಡೆದಿದ್ದಾರೆ.
ಧನ್ಯಾ ಆಚಾರಿ ಪ್ರದರ್ಶಿಸಿದ ವಿವಿಧ ತೆರನ ಬೀಜ ಒಡೆಯುವ ಯಂತ್ರ ಮತ್ತು ಸಾಯಿನಾಥ ತಯಾರಿಸಿದ ಮಣ್ಣನ್ನು ತೆಗೆದು ಗಿಡ ನೆಡುವ ಸಾಧನಕ್ಕೆ ಪ್ರಶಸ್ತಿ ಲಭಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ಸಚಿವ ಜೀತೇಂದ್ರಪ್ರಸಾದ್ ಪ್ರಶಸ್ತಿ ವಿತರಿಸಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳ ಪಾಲಕರು ಬಡವರಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಮುಂದಿನ ತಿಂಗಳು ದೆಹಲಿಯಲ್ಲಿ ಇನ್ನೋವೇಷನ್ ಆಂಡ್ ಇಂಟರ್‌ಪ್ರೆನ್ಯುರ್‌ಶಿಪ್ ಕಾರ್ಯಕ್ರಮದಲ್ಲಿ ನಡೆಯಲಿದೆ. ಆ ಬಳಿಕ ಈ ವಿದ್ಯಾರ್ಥಿಗಳು ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಶಾಲೆಯ ಇನ್ನೋರ್ವ ವಿದ್ಯಾರ್ಥಿನಿ ಸುಮನಾ ಗೋಸಾವಿ ಸಹ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದರು. ವಿಜ್ಞಾನ ಶಿಕ್ಷಕ ಕೆ.ಎಲ್.ಭಟ್ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ವಿದ್ಯಾರ್ಥಿಗಳ ಸಾಧನೆ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಡಿಡಿಪಿಐ ಪಿ.ಬಸವರಾಜ ಮತ್ತು ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ ಪ್ರಶಂಸಿಸಿ ಸನ್ಮಾನಿಸಿ ಗೌರವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.