
Instagram ಗೆಳೆಯನ ಕಿರುಕುಳ: ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Team Udayavani, Oct 25, 2023, 7:29 PM IST

ಭಟ್ಕಳ: ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಮಕ್ಕಿ, ಹಾಡವಳ್ಳಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ಗೋವಾಳಿ ಎಂದು ಗುರುತಿಸಲಾಗಿದೆ. ಈಕೆ ಭಟ್ಕಳ ನಗರದಲ್ಲಿ ಖಾಸಗಿ ಕಚೇರಿಯೊಂದರಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕೆಲಸ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ.
ಈಕೆಗೆ ಕಿರುಕುಳವನ್ನು ನೀಡಿದ ಆರೋಪಿಯಾದ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ನಂತರ ಗೆಳೆತನ ಮಾಡಿಕೊಂಡವನು ತಾನು ಖರ್ಚು ಮಾಡಿದ ಹಣ ಕೊಡುವಂತೆ ಹೇಳಿ ಕರೆ ಮಾಡಿ ಹೆದರಿಸಿ ಚಿತ್ರಹಿಂಸೆ ನೀಡಿ, ನಿನ್ನ ಅಶ್ಲೀಲ ಫೋಟೋಗಳನ್ನು ತಾನು ಫೇಸ್ ಬುಕ್ ನಲ್ಲಿ ಹಾಕಿ ನಿನ್ನ ಮಾನ ಮರ್ಯಾದೆ ತೆಗೆದು ನಿನಗೆ ಸಾಯಿಸುತ್ತೇನೆ ಇಲ್ಲಾದರೆ ಮರ್ಯಾದೆಗೆ ನೀನೆ ಸಾಯಬೇಕು ಎಂದು ಹೇಳಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಯುವತಿ ಮನನೊಂದು ತನ್ನ ಹಳೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ತನ್ನ ಮಗಳ ಸಾವಿಗೆ ಗೋವರ್ಧನ ಮೊಗೇರ ಈತನ ಕಿರುಕುಳವೇ ಕಾರಣ ಎಂದು ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ಯುವತಿಯ ತಂದೆ ಮುತ್ತಯ್ಯ ಗೋವಾಳಿ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿ.ಎಸ್.ಐ. ಶ್ರೀಧರ ನಾಯ್ಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ವಿದ್ಯಾವಂತಳಾದ ಯುವತಿ ಆತ್ಮಹತ್ಯೆಗೆ ಮುಂದಾಗಿರುವುದು ಕುಟುಂಬದ ಆಕ್ರಂದನಕ್ಕೆ ಕಾರಣವಾಗಿದ್ದು ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.