ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕಗೆ ಐಟಿ ಶಾಕ್ !
Team Udayavani, May 2, 2018, 8:26 AM IST
ಶಿರಸಿ: ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಅಯ್ಯಪ್ಪನಗರದಲ್ಲಿರುವ ನಿವಾಸಕ್ಕೆ ದಾಳಿ ನಡೆಸಿರುವ 8 ಕ್ಕೂ ಹೆಚ್ಚು ಅಧಿಕಾರಿಗಳು ಭೀಮಣ್ಣ ನಾಯ್ಕ ಸಮಕ್ಷಮದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆಯೂ ಪರಿಶೀಲನೆ ಮುಂದುವರಿದಿರುವುದಾಗಿ ವರದಿಯಾಗಿದೆ.
ಐಟಿ ದಾಳಿ ವಿರುದ್ದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಾಮಾಜಿಕ ತಾಣಗಳಲ್ಲಿ ಕಿಡಿ ಕಾರಿದ್ದು , ಶಿರಸಿ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಬಿಜೆಪಿ ಈ ಕೆಲಸ ಮಾಡಿದೆ ಎಂದಿದ್ದಾರೆ.
ಶಿರಸಿಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ನ ಶಶಿಭೂಷಣ ಹೆಗಡೆ ಮತ್ತು ಭೀಮಣ್ಣ ನಾಯ್ಕ ಅವರ ನಡೆವೆ ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.