ಜೋಯಿಡಾ: ತಾಲೂಕಿನ ಹಲವೆಡೆ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ
ಹೆಸ್ಕಾಂ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
Team Udayavani, May 23, 2023, 9:15 PM IST
ಜೋಯಿಡಾ : ತಾಲ್ಲೂಕಿನ ಗಣೇಶಗುಡಿ ಉಪ ಕೇಂದ್ರ ಹಾಗೂ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವು ಮಂಗಳವಾರ ಬೆಳಿಗ್ಗೆ ಸಂಜೆಯವರೆಗೆ ಯಶಸ್ವಿಯಾಗಿ ನಡೆಯಿತು.
ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದ ಪುರುಷೋತ್ತಮ ಮಲ್ಯ ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಅವರ ಮಾರ್ಗದರ್ಶನದಲ್ಲಿ ತಾಲ್ಲೂಕಿನ ಜೋಯಿಡಾ, ಕುಂಬಾರವಾಡ, ಉಳವಿ, ನಂದಿಗದ್ದೆ, ಅಣಶಿ, ನಾಗೋಡಾ, ಗಾಂಗೋಡಾ, ಪ್ರಧಾನಿ, ಅವೇಡಾ, ಸಿಂಗರಗಾವ್ ಮತ್ತು ಜಗಲ್ಬೇಟ್ ಗ್ರಾ.ಪಂ ವ್ಯಾಪ್ತಿಯಲ್ಲಿ ಹೆಸ್ಕಾಂ ಶಾಖಾಧಿಕಾರಿ ಜೋಸೆಫ್ ಫೆರ್ನಾಂಡೀಸ್ ಅವರ ನೇತೃತ್ವದಡಿ ಹೆಸ್ಕಾಂ ಪವರ್ ಮ್ಯಾನ್ ಗಳಾದ ಸುಭಾಷ್, ಬಾಳೇಶ್, ಶಿವಾಜಿ, ಮಾರುತಿ, ಮಹಾಂತಯ್ಯ, ಮೌಲನಾ, ಜಗದೀಶ್, ಸಾಗರ್, ಶಾನೂರು, ಗೋವಿಂದ ಗೌಡ, ಗೋಕುಲ್, ದಿನೇಶ್, ಮಹಾಂತೇಶ್, ಚೇತನ್ ಹಾಗೂ ಹೆಸ್ಕಾಂ ಗುತ್ತಿಗೆ ಸಿಬ್ಬಂದಿಗಳಾದ ಅರವಿಂದ್, ಸಂತೋಷ್, ಮಹೇಶ್, ರಾಜನ್, ಸುಭಾನಿ, ವೀರೇಂದ್ರ, ಮೋಹನ, ಸಂತಾನ್ ಮೊದಲಾದವರ ತಂಡ ಬೆಳಿಗ್ಗೆಯಿಂದ ಸಂಜೆಯವರೆಗೆ ಶ್ರಮವಹಿಸಿ ದುಡಿದು ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ, ಹಳೆ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಹೊಸ ಕಂಬಗಳ ಅಳವಡಿಕೆ ಹೀಗೆ ಮೊದಲಾದ ಅವಶ್ಯ ದುರಸ್ತಿ ಕಾರ್ಯದಲ್ಲಿ ಸಮರ್ಪಣಾಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡು ತಾಲ್ಲೂಕಿನ ಜನತೆಯ ಮೆಚ್ಚುಗೆ ಮತ್ತು ಅಭಿಮಾನಕ್ಕೆ ಪಾತ್ರರಾದರು.
ಇದನ್ನೂ ಓದಿ: Ankola; ಬೆಳಂಬಾರ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ, ಅಪಾರ ನಷ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.