Heavy Rain; ಕದ್ರಾ ಜಲಾಶಯದಿಂದ 51000 ಕ್ಯೂಸೆಕ್ಸ್ ನೀರು ಹೊರಗೆ
ದಾಂಡೇಲಿ ,ಕದ್ರಾ,ಕೊಡಸಳ್ಳಿಯಲ್ಲಿ ಸತತ ಮಳೆ
Team Udayavani, Jul 22, 2023, 8:12 PM IST
ಕಾರವಾರ : ಕದ್ರಾ, ಕೊಡಸಳ್ಳಿ ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕದ್ರಾ ಜಲಾಶಯದ ಆರು ಕ್ರಸ್ಟ್ ಗೇಟ್ ತೆರೆದು ನದಿಗೆ ನೀರು ಹೊರ ಬಿಡಲಾಗಿದೆ.
ಶನಿವಾರ ಬೆಳಿಗ್ಗೆ ನೀರು ಹೊರ ಬಿಡುವ ಪ್ರಮಾಣ 50 ಸಾವಿರ ಕ್ಯೂಸೆಕ್ಸ್ ತಲುಪಿತ್ತು. ಮಳೆ ಸ್ವಲ್ಪ ತಗ್ಗಿದ ಕಾರಣ ಈಗ ಅಪರಾಹ್ನದ ವೇಳೆಗೆ 51000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯಕ್ಕೆ 33115.0 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.ಕೊಡಸಳ್ಳಿ ಡ್ಯಾಂಗೆ 14490.0 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕೊಡಸಳ್ಳಿಯಲ್ಲಿ 154.2 ಮಿಲಿ ಮೀಟರ್ ಮಳೆಯಾಗಿದೆ. ಕದ್ರಾದಲ್ಲಿ ಇಂದು 103.7 ಮಿಲಿ ಮೀಟರ್ ಮಳೆಯಾಗಿದೆ. ಮಳೆ ಸತತವಾಗಿ ಬೀಳುತ್ತಿದೆ. ಸುಫಾ ಜಲಾಶಯಕ್ಕೆ 42911.304 ಕ್ಯೂಸೆಕ್ಸ್ ನೀರು ಒಳ ಹರಿವು ಇದೆ. ಜಲಾಶಯ 534 ಅಡಿ ಭರ್ತಿಯಾಗಿದೆ. ಜಲಾಶಯ ತುಂಬಲು 30 ಅಡಿ ಬಾಕಿ ಇದೆ. ದಾಂಡೇಲಿ ,ಜೊಯಿಡಾ , ಯಲ್ಲಾಪುರ ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಕನ್ನಡ ಜಿಲ್ಲೆಯ ಕದ್ರಾ ಜಲಾಶಯ ಭರ್ತಿಯಾಗಿದೆ. ಜಿಲ್ಲಾಡಳಿತ ನಿಗದಿ ಮಾಡಿರುವ ಗಡಿ ತಲುಪಿದ ಕಾರಣ ಜಲಾಶಯದಿಂದ ನಿನ್ನೆ ರಾತ್ರಿ ಯಿಂದಲೇ ನೀರನ್ನು ನದಿಗೆ ಬಿಡಲಾಗಿದೆ .ನದಿ ದಂಡೆಯ ಜನರಿಗೆ ಸುರಕ್ಷತೆಗೆ ಕಾಳಜಿ ವಹಿಸಲಾಗುತ್ತಿದೆ.
ಇನ್ನೂ ಜಲಾಶಯದಿಂದ ನೀರನ್ನ ಹೊರ ಬಿಟ್ಟ ಕಾರಣ ಕದ್ರಾ ಜಲಾಶಯ ವ್ಯಾಪ್ತಿಯ ನಿವಾಸಿಗಳು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮಳೆ ಪ್ರಮಾಣ ಇನ್ನೂ ಹೆಚ್ಚುತ್ತಾ ಹೋದಲ್ಲಿ ಇನ್ನಷ್ಟು ಗೇಟ್ ಗಳ ಮೂಲಕ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಘಟ್ಟದ ತಾಲೂಕಿನಲ್ಲಿ ಮಳೆ ಬೀಳುತ್ತಲೇ ಇದೆ. ಜಿಲ್ಲೆಯ ನದಿಗಳು ತುಂಬಿ ಹರಿದಿವೆ. ಆದರೆ ಗ್ರಾಮಗಳನ್ನು ಸ್ಥಳಾಂತರಿಸುವ ಸನ್ನಿವೇಶ ಸೃಷ್ಟಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.