ಮೂಡ್ಕಣಿಯಲ್ಲಿ ಮೊಳಗಿದ ಕನ್ನಡ ಕಹಳೆ

•ಸಂಸ್ಕೃತಿ-ಪರಂಪರೆ-ಅಸ್ಮಿತೆ ಉಳಿಸುವುದು ಕನ್ನಡ ಸಾಹಿತ್ಯದ ಜವಾಬ್ದಾರಿ: ಡಾ| ವಸುಂಧರಾ

Team Udayavani, May 6, 2019, 4:54 PM IST

uk..

ಹೊನ್ನಾವರ: ಕನ್ನಡದ ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆ ಉಳಿದರೆ ಮಾತ್ರ ಕನ್ನಡ ಉಳಿಯುತ್ತದೆ. ಇದನ್ನು ಉಳಿಸುವ ಜವಾಬ್ದಾರಿ ಸಾಹಿತಿಗಳಿಗೆ, ಸಾಹಿತ್ಯಕ್ಕೆ ಸೇರಿದ್ದಾಗಿದೆ. ಇದಕ್ಕಾಗಿ ಓದುವ ಸಂಸ್ಕೃತಿಯನ್ನು ಕನ್ನಡದಲ್ಲಿ ಬೆಳೆಸಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ| ವಸುಂಧರಾ ಭೂಪತಿ ಹೇಳಿದರು.

ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ಸಾಹಿತಿ ಪ್ರೊ| ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷತೆಯಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡಿಗರಿಗೆ ಕನ್ನಡ ನಾಡಿನಲ್ಲಿ ಉದ್ಯೋಗದಲ್ಲಿ ಆದ್ಯತೆ ಸಿಗಬೇಕು. ತಮಿಳುನಾಡಿನಲ್ಲಿ ತಮಿಳರಿಗೆ ಶೇ. 95, ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಶೇ. 85, ತೆಲಂಗಾಣ ಮತ್ತು ಕೇರಳದಲ್ಲಿ ಶೇ. 100ಕ್ಕೆ 100 ಉದ್ಯೋಗಾವಕಾಶ ಸಿಗುತ್ತಿರುವಾಗ ಕರ್ನಾಟಕದಲ್ಲಿ ಕೇವಲ 20ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗುತ್ತಿದೆ. ಇದು ಸರ್ಕಾರದ ಅಧಿಕೃತ ಅಂಖೆಸಂಖ್ಯೆ. ಕನ್ನಡಿಗರಿಗೆ ಕನ್ನಡ ನೆಲದಲ್ಲಿ ಸ್ಥಾನ ಇಲ್ಲವಾದರೆ ಹೇಗೆ ಎಂದು ಪ್ರಶ್ನಿಸಿದ ಅವರು, ಕನ್ನಡ ಭಾಷೆಯನ್ನು, ಕನ್ನಡದ ಅಭಿಮಾನ, ಪ್ರೀತಿಯನ್ನು ಬೆಳೆಸುವ ಕೆಲಸ ಸಾಹಿತ್ಯ ಇನ್ನೂ ಹೆಚ್ಚಾಗಿ ಮಾಡಬೇಕಾಗಿದೆ ಎಂದರು.

ಪುಸ್ತಕ ಪ್ರಾಧಿಕಾರ ಆನ್‌ಲೈನ್‌ ಪುಸ್ತಕ ಮಾರಾಟ ಆರಂಭಿಸಿದ್ದು, ಒಂದು ವರ್ಷದಲ್ಲಿ ಆರು ಲಕ್ಷ ಪುಸ್ತಕಗಳು ಮಾರಾಟವಾಗಿವೆ. ಭಾರತದ ಎಲ್ಲ ಭಾಷೆಗಳ ಶ್ರೇಷ್ಠ ಕೃತಿಗಳನ್ನು ಪುಸ್ತಕ ಪ್ರಾಧಿಕಾರ ಪ್ರಕಟಿಸುತ್ತಿದೆ. ಕಳೆದ ವರ್ಷ 567 ಪುಸ್ತಕ ಪ್ರಕಟವಾಗಿದೆ. ಅಂಧರಿಗೆ ಮತ್ತು ಓದಲು ಬಿಡುವಿಲ್ಲದವರಿಗೆ ಕೇಳುವ ಪುಸ್ತಕವನ್ನು ಪ್ರಕಟಿಸಲಾಗಿದೆ. ಪ್ರಕಾಶಕರಿಂದ ಪುಸ್ತಕ ಖರೀದಿಸಿ ಶಾಲೆಗಳಿಗೆ ವಿತರಿಸಲಾಗುತ್ತಿದೆ. ಇದಕ್ಕೆ ಸಾಹಿತಿಗಳು ಕೈ ಜೋಡಿಸಬೇಕು ಎಂದರು.

ಹೊನ್ನಾವರ ಹೊನ್ನಿನ ಊರು, ಇಲ್ಲಿಯವರು ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಪಂಪನಿಂದ ಆರಂಭವಾಗಿ ಇತ್ತೀಚಿನವರೆಗೆ ಉತ್ತರ ಕನ್ನಡಿಗರ ಕೊಡುಗೆ ಮಹತ್ವದ್ದಾಗಿದೆ. ತಾಲೂಕು ಸ್ಥಳದಲ್ಲಿ ಇಂತಹ ಸಮ್ಮೇಳನ ನಡೆಯುತ್ತಿರುವುದು ಕನ್ನಡದ ಬೆಳವಣಿಗೆಗೆ ಪೂರಕ ಎಂದು ಹೇಳಿದರು.

ಸಾಹಿತಿ ಸರ್ಜಾ ಶಂಕರ, ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಇದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಪಿ.ಟಿ. ನಾಯ್ಕ ರಾಷ್ಟ್ರ ಧ್ವಜಾರೋಹಣ ಮಾಡಿದರು. ಟಿ.ಟಿ. ನಾಯ್ಕ ಮೆರವಣಿಗೆಗೆ ಚಾಲನೆ ನೀಡಿದರು. ತಾಲೂಕು ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಆಶಯ ನುಡಿಗಳನ್ನಾಡಿದರು. ವಿನಾಯಕ ನಾಯ್ಕ ಸ್ವಾಗತಿಸಿದರು. ಶೋಭಿತ್‌ ಮೂಡ್ಕಣಿ ದ್ವಾರಗಳ ಮಹಾನುಭಾವರನ್ನು ಪರಿಚಯಿಸಿದರು. ಸುಧೀಶ ನಾಯ್ಕ ಮತ್ತು ಕಲ್ಪನಾ ಹೆಗಡೆ ನಿರ್ವಹಿಸಿದರು. ಭವಾನಿಶಂಕರ ವಂದಿಸಿದರು.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.