ಡಿ.29ರಂದು ಹಿರಿಯ ಕಲಾವಿದ ಎಚ್.ಶ್ರೀಧರ ಹಂದೆಗೆ ಕರ್ಕಿ ದಿ.ಪಿವಿ ಹಾಸ್ಯಗಾರ ಪ್ರಶಸ್ತಿ ಪ್ರದಾನ
Team Udayavani, Dec 11, 2019, 6:29 PM IST
ಉತ್ತರಕನ್ನಡ: ಕರ್ಕಿ ಯಕ್ಷಗಾನ ಪರಂಪರೆಯ ಅಗ್ರಮಾನ್ಯ ಕಲಾವಿದ ಮತ್ತು ಉತ್ತರಕನ್ನಡ ಸಭಾಹಿತ ಮಟ್ಟಿನ ಸಮರ್ಥ ಪ್ರತಿನಿಧಿ ದಿ. ಪಿ. ವಿ. ಹಾಸ್ಯಗಾರ, ಕರ್ಕಿ ಇವರ ನೆನಪಿನಲ್ಲಿ ಕೊಡ ಮಾಡುವ 2019ರ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕದ್ವಯರಲ್ಲಿ ಒಬ್ಬರಾದ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಾಲಾ ಶಿಕ್ಷಕ ಎಚ್. ಶ್ರೀಧರ ಹಂದೆಯವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 50,001 ರೂಪಾಯಿ ನಗದು, ಸ್ಮರಣಿಕೆ ಗಳನ್ನುಒಳಗೊಂಡಿದೆ.
ಡಿಸೆಂಬರ್29 ರವಿವಾರದಂದು ಮಧ್ಯಾಹ್ನ 4.00 ಗಂಟೆಗೆ ಹೊನ್ನಾವರದ (ಕರ್ಕಿ) ಹವ್ಯಕ ಸಭಾಭವನದಲ್ಲಿ ನಡೆಯಲಿರುವ ಪಿ. ವಿ. ಹಾಸ್ಯಗಾರರ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನಗಳುನ ಡೆಯಲಿವೆ.
ಪ್ರತಿವರ್ಷದಂತೆ ಯಕ್ಷಗಾನ ಸಂಶೋಧನಾ ಕೇಂದ್ರ, ಕುಮಟಾ, ಕಡತೋಕ ಕೃಷ್ಣ ಭಾಗವತ, ಪಿ. ವಿ. ಹಾಸ್ಯಗಾರ ಸಂಸ್ಮರಣ ವೇದಿಕೆ, ಹೆಬ್ಳೇಕೆರಿ (ಕಡತೋಕ) ,ಯಕ್ಷರಂಗ ಪತ್ರಿಕಾ ಬಳಗ, ಹಳದೀಪುರ, ಸಿರಿ ಕಲಾಮೇಳ, ಬೆಂಗಳೂರು ಮತ್ತು ಪಿ. ವಿ. ಹಾಸ್ಯಗಾರ ಕುಟುಂಬದವರ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭವನ್ನು ಪಿವಿ. ಹಾಸ್ಯಗಾರರ ಯಕ್ಷ ಶಿಷ್ಯ ಬಳಗದವರು ಈ ವರ್ಷವೂ ಹಮ್ಮಿಕೊಂಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಅಧ್ಯಕ್ಷತೆ ವಹಿಸಲಿರುವರು. ರಾಷ್ಟ್ರಪ್ರಶಸ್ತಿ ಪುರಸ್ಕೃ ನಿವೃತ್ತ ಪ್ರಾಂಶುಪಾಲ ಸತ್ಯಾನಂದಜೆ. ಕೈರಣ್ಣ ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಶ್ರೀಹಡಿನಬಾಳ ಶ್ರೀಪಾದ ಹೆಗಡೆಯವರನ್ನುಗೌರವಿಸಲಾಗುವುದು.
ಸಭಾ ಕಾರ್ಯಕ್ರಮದ ನಂತರ ಹಂದೆ ಯಕ್ಷವೃಂದ, ಕೋಟ ಇವರಿಂದ, ಐರೋಡಿ ಗೋವಿಂದಪ್ಪ, ಮೋಹನದಾಸ ಶೆಣೈ, ಕೆ. ಪಿ. ಹೆಗಡೆ, ಸುಜಯೀಂದ್ರ ಹಂದೆ, ಲಂಬೋದರ ಹೆಗಡೆ ಮುಂತಾದ ಹಿರಿಯ ಮತ್ತು ನುರಿತ ನಡುಬಡಗಿನ ಪರಂಪರೆಯ ಕಲಾವಿದರ ಕೂಡುವಿಕೆಯಲ್ಲಿ ತಾಮ್ರಧ್ವಜ ಕಾಳಗ ಯಕ್ಷಗಾನ ಇದೆ ಎಂದು ಕುಮಟಾದ ಯಕ್ಷಗಾನ ಸಂಶೋಧನಾ ಕೇಂದ್ರದ ಪ್ರಕಟಣೆ ತಿಳಿಸಿದೆ.
ಬಡಗು (ನಡು) ತಿಟ್ಟು ಯಕ್ಷಗಾನ ಪರಂಪರೆಗೆ ನಿಷ್ಠ ಎಚ್. ಶ್ರೀಧರ ಹಂದೆಯವರಿಗೆ ಬಡಾ ಬಡಗಿನ ಯಕ್ಷಗಾನದ ತವರೂರು ಕರ್ಕಿಯಲ್ಲಿ, ಕರ್ಕಿ ಮೇಳದ ಶ್ರೇಷ್ಠ ಕಲಾವಿದ ಮತ್ತು ತಮ್ಮ ಪರಂಪರೆಗೆ ನಿಷ್ಠರಾಗಿದ್ದ ದಿ. ಪಿ. ವಿ. ಹಾಸ್ಯಗಾರರ ಹೆಸರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ವಿಶೇಷತೆಯನ್ನುಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.