Karwar; ತುಂಡಾದ ಬಸ್ ಕ್ಲಚ್ ಪ್ಲೇಟ್: ತಪ್ಪಿದ ಅನಾಹುತ
Team Udayavani, Jan 2, 2024, 1:07 PM IST
ಕಾರವಾರ: ಕಾರವಾರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಚಲಿಸುವಾಗಲೇ ಕ್ಲಚ್ ಪ್ಲೇಟ್ ತುಂಡಾದ ಪರಿಣಾಮ ಪ್ರಯಾಣಿಕರು ಗಾಯವಾದ ಘಟನೆ ಕಾರವಾರ ನಗರದ ಹಬ್ಬುವಾಡದ ಗೋಲ್ಡನ್ ಬೇಕರಿ ಸಮೀಪ ನಡೆದಿದೆ.
ಬಸ್ ನಗರವನ್ನು ದಾಟುವ ಮುನ್ನ ಕ್ಲಚ್ ಪ್ಲೇಟ್ ತುಂಡಾಗಿದೆ. ಬಸ್ ಉರುಳಿದ್ದರೆ ಭಾರೀ ಪ್ರಮಾಣದಲ್ಲಿ ಜನರಿಗೆ ಗಾಯಗಳಾಗುತ್ತಿದ್ದವು. ಅದೃಷ್ಟವಶಾತ್ ಬಸ್ ವೇಗ ಕಡಿಮೆ ಇದ್ದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ. ಬಸ್ ನಲ್ಲಿ 50 ಜನ ಪ್ರಯಾಣಿಕರಿದ್ದು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ಲದೇ ಬಸ್ ರಸ್ತೆ ಮಧ್ಯೆ ನಿಂತ ಪರಿಣಾಮ ಹಬ್ಬುವಾಡ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಸಂಚಾರ ಒಂದು ತಾಸು ಬಂದ್ ಆಗಿತ್ತು. ಬಸ್ ಸ್ಥಳಾಂತರ ಮಾಡಿದ ನಂತರ ಕಾರವಾರ ಹಬ್ಬುವಾಡ ರಸ್ತೆಯಲ್ಲಿ ವಾಹನ ಸಂಚಾರ ಪುನಃ ಆರಂಭವಾಗಿದೆ.
ಗುಜರಿ ಬಸ್ ಬಿಟ್ಟು ಜನರ ಪ್ರಾಣದ ಜೊತೆ ಚೆಲ್ಲಾಟ ವಾಡುವ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಡಿಪೋ ಮ್ಯಾನೇಜರ್ ಬೇಜವಾಬ್ದಾರಿ ಬಸ್ ಅಪಘಾತಕ್ಕೆ ಕಾರಣ ಎಂದು ಜನ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.