Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ
ವಾಹನ ಸಂಚಾರಕ್ಕೆ ಮುಕ್ತ ಮಾಡಲು ಆಗ್ರಹ,ಸಂಜೆ ಪ್ರತಿಭಟನಾಕಾರರು ವಶಕ್ಕೆ
Team Udayavani, Sep 29, 2023, 5:49 PM IST
ಕಾರವಾರ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಗರದ ಲಂಡನ್ ಬ್ರಿಜ್ ಹಾಗೂ ಪ್ಲೈಓರ್ ಗೆ ಹೊಂದಿಕೊಂಡಿರುವ ಟನಲ್ ನಲ್ಲಿ ವಾಹನ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದು ಬಿಟ್ಟ ಘಟನೆಯೂ ನಡೆಯಿತು.
ಹಗಲಿಡೀ ನಡೆದ ಪ್ರತಿಭಟನೆ ಕಾದಿದ್ದ ಪೊಲೀಸರು ವಿಧಾನಪರಿಷತ್ ಸದಸ್ಯ ಉಳ್ವೇಕರ್ , ನಗರಸಭೆಯ ಮಾಜಿ ಅಧ್ಯಕ್ಷ ನಿತಿನ್ ಉಳ್ವೇಕರ್ ಹಾಗೂ ಪ್ರತಿಭಟನೆಯ ನಂತರ ಧರಣಿಯಲ್ಲಿದ್ದ ನಗರಸಭೆ ಕೆಲ ಸದಸರನ್ನು ಬಂಧಿಸಿ, ಡಿ ಆರ್ ಪೊಲೀಸ್ ಕರೆದೊಯ್ದರು.
ಬೆಳಗ್ಗೆಯೇ ಆರಂಭವಾದ ಪ್ರತಿಭಟನೆ
ಕಾರವಾರದ ಹೆದ್ದಾರಿ 66 ಟನಲ್‌ನಲ್ಲಿ ಸಂಚರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಟನಲ್ ಎದುರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಎರಡು ಸುರಂಗಗಳನ್ನ ನಿರ್ಮಿಸಲಾಗಿದ್ದು ಮಳೆಗಾಲದಲ್ಲಿ ಸೋರಿಕೆಯಾಗುತ್ತಿದೆ ಎನ್ನುವ ಕಾರಣಕ್ಕೆ ಕಳೆದೆರಡು ತಿಂಗಳಿನಿಂದ ಸಂಚಾರವನ್ನ ಬಂದ್ ಮಾಡಲಾಗಿದೆ. ಟನಲ್ ಬಂದ್ ಆದ ಪರಿಣಾಮ ನಾಲ್ಕೈದು ಕಿಮೀ ಬಿಣಗಾ ಘಟ್ಟದಲ್ಲಿ ಸುತ್ತುವರೆದು ವಾಹನ ಸವಾರರು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿನಿತ್ಯ ಸಂಚರಿಸುವವರು, ವಾಹನ ಸವಾರರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಟನಲ್ ಸಂಚಾರ ಆರಂಭಿಸುವಂತೆ ಒಂದು ವಾರದ ಗಡುವು ನೀಡಿದ್ದರೂ ಜಿಲ್ಲಾಡಳಿತದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ಟನಲ್ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಮಳೆಯನ್ನೂ ಲೆಕ್ಕಿಸದೇ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಟನಲ್ ಎದುರು ಪ್ರತಿಭಟನೆ ನಡೆಸಿದ್ದು ಒತ್ತಾಯಪೂರ್ವಕವಾಗಿ ಟನಲ್ ಎದುರಿನ ಬ್ಯಾರಿಕೇಡ್ ತೆರವುಗೊಳಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದು ಪ್ರತಿಭಟನಾಕಾರರನ್ನ ಬಂಧಿಸಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಟನಲ್ ಮುಕ್ತಗೊಳಿಸಲು ಸೂಚನೆ ನೀಡುವವರೆಗೆ ಪ್ರತಿಭಟನೆ ಸ್ಥಗಿತಗೊಳಿಸಲ್ಲ ಎಂದು ಪಟ್ಟುಹಿಡಿದಿದ್ದಾರೆ. ಟನಲ್ ಸಂಚಾರ ಪುನರಾರಂಭ ವಿಚಾರವಾಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಸಭೆಗೆ ಅಧಿಕಾರಿಗಳು ಗೈರಾದ ಹಿನ್ನಲೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದ್ದು ಟನಲ್ ಸಂಚಾರ ಆರಂಭವಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾರವಾರ, ಅಂಕೋಲಾ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಟನಲ್ ವಿಚಾರ ರಾಜಕೀಯ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಸಂಚಾರ ಆರಂಭಿಸಲು ನಾ ಕೊಡೆ, ನೀ ಬಿಡೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಟನಲ್ ಸಂಚಾರ ಬಂದ್ ಮಾಡಿಸಿರುವ ಜಿಲ್ಲಾಡಳಿತ ಮುಂದಿನ ದಿನಗಳಲ್ಲಿ ಜನಸಾಮಾನ್ಯರ ಬೇಡಿಕೆಯಂತೆ ಟನಲ್ ಸಂಚಾರಕ್ಕೆ ಅನುಮತಿ ನೀಡಲಿದೆಯೇ ಕಾದುನೋಡಬೇಕು. ಪ್ರತಿಭಟನೆಯಲ್ಲಿ ನಿತಿನ್ ಪಿಕಳೆ, ಬಿಜೆಪಿಯ ನಗರಸಭೆಯ ಕೆಲ ಸದಸ್ಯರು, ಛತ್ರಪತಿ ಮಾಳ್ಸೇಕರ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.