![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Dec 22, 2023, 11:44 AM IST
ಕಾರವಾರ: ನಗರದ ಮಧ್ಯಭಾಗದ ಹಬ್ಬುವಾಡ ರಸ್ತೆಯಲ್ಲಿ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬೈಕ್ ನಲ್ಲಿ ಶಾಲೆಗೆ ಹೋಗುತ್ತಿದ್ದ ಶಿಕ್ಷಕ ಉಮೇಶ್ ಗುನಗಿ (50) ಮೃತಪಟ್ಟ ದುರ್ದೈವಿ.
ಇವರು ಶುಕ್ರವಾರ ಬೆಳಿಗ್ಗೆ ತನ್ನ ತಂದೆಯನ್ನು ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ದೇವಳಮಕ್ಕಿ ಶಾಲೆ ತೆರಳುತ್ತಿದ್ದರು. ಈ ವೇಳೆ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಲಾರಿ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಮೃತರ ಕಡೆಯವರು, ಸಾರ್ವಜನಿಕರು ಅವೈಜ್ಞಾನಿಕವಾಗಿ ನಡೆಯುತ್ತಿರುವ ರಸ್ತೆ ಕಾಮಗಾರಿಯೇ ಅಪಘಾತಕ್ಕೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದರು. ಅಪಘಾತ ನಡೆದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಮಾಡುತ್ತಿದ್ದಾರೆ. ಟ್ರಾಫಿಕ್ ಪೊಲೀಸರು ಅಪಘಾತದ ವಿವರ ಪಡೆದು ಪ್ರಕರಣ ದಾಖಲಿಸುತ್ತಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.