Karwar; ಮಾರುತಿ ನಾಯಕ್ ಆತ್ಮಹತ್ಯೆ ಪ್ರಕರಣ: ಮೂವರ ಬಂಧನ
ಮೂವರು ಪೊಲೀಸರು ಅಮಾನತು... ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆ...
Team Udayavani, Oct 26, 2023, 6:26 PM IST
ಕಾರವಾರ : ಶಿರವಾಡದ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಮಾರುತಿ ನಾಯಕ್ ಪ್ರಕರಣಕ್ಕೆ ಸಂಬಂಧಿಸಿದಂತೆ , ಆತ ಬರೆದಿದ್ದಾನೆ ಎನ್ನಲಾದ ಡೆತ್ ನೋಟ್ ನಲ್ಲಿದ್ದ ಆರು ಹೆಸರುಗಳ ಪೈಕಿ ಮೂವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ . ಹಾಗೂ ಡೆತ್ ನೋಟ್ ನಲ್ಲಿ ಹೆಸರಿಸಲಾಗಿದ್ದ ಮೂವರು ಪೊಲೀಸ್ ಸಿಬಂದಿಗಳನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತು ಮಾಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಮಾರುತಿ ಡೆತ್ ನೋಟ್ ನಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬಂದಿಗಳನ್ನ ಎಸ್ಪಿ ವಿಷ್ಣುವರ್ಧನ್ ಅವರು ಸಸ್ಪೆಂಡ್ ಮಾಡಿದ್ದಾರೆ.
ಅಮಾನತ್ ಗೊಂಡ ಸಿಪಿಐ ಕುಸುಮಾಧರ, ಪಿಎಸ್ ಐ ಶಾಂತಿನಾಥ, ಕಾನಸ್ಟೆಬಲ್ ದೇವರಾಜ್ ಸಸ್ಪೆಂಡ್ ಆಗಿದ್ದಾರೆ. ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸುಸೈಡ್ ನೋಟ್ ಬರೆದು, ವಿಡಿಯೋ ರೆಕಾರ್ಡ್ (video record,)ಮಾಡಿದ್ದ ಎನ್ನಲಾಗಿದೆ. ಆತ ಆತ್ಮಹತ್ಯೆಗೆ ಮುನ್ನ ಮಾಡಿಕೊಂಡಿದ್ದ ಎನ್ನಲಾದ ವಿಡಿಯೋ ಕಾರವಾರದ ಕೆಲ ಸೋಶಿಯಲ್ ಮೀಡಿಯಾ ಗ್ರೂಪ್ ನಲ್ಲಿ ಹರಿದಾಡಿತ್ತು.
ಮೂವರ ಬಂಧನ
ಡೆತ್ ನೋಟ್ ನಲ್ಲಿ ಮಾರುತಿ ಹೆಸರಿಸಿದ್ದ ಎಲಿಷಾ ಎಲಕಪಾಟಿ, ಬಸವರಾಜ, ಸುರೇಶ್ ಎಂಬುವವರನ್ನು ಕಾರವಾರ ಪೊಲೀಸರು ನಿನ್ನೆಯೇ ಬಂಧಿಸಿದ್ದಾರೆ. ದಲಿತ ಮುಖಂಡ ಎಲಿಷಾ ಎಲಕಪಾಟಿ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನ ಮಾರುತಿ ನಾಯಕ್ ರೆಕಾರ್ಡ್ ಮಾಡಿದ್ದ. ಅಲ್ಲದೇ ಆ ವಿಡಿಯೋ ರಿಲೀಸ್ ಮಾಡಿದ್ದ. ಕಳೆದ ತಿಂಗಳು ನಡೆದಿದ್ದ ಈ ಘಟನೆಯ ನಂತರ ಎಲಿಷಾನನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಆತ ಬಿಡುಗಡೆಯಾಗಿದ್ದ.
ಬಳಿಕ ಎಲಿಷ ಎಲಕಪಾಟಿ ಕುಟುಂಬಸ್ಥರು ಮಾರುತಿ ನಾಯಕ್ ಮೇಲೆ ಹಲ್ಲೆ ನಡೆಸಿದ ಘಟನೆ ಸಹ ನಡೆದು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಲಿಷಾ ಕುಟುಂಬಕ್ಕೆ ಪೊಲೀಸರು ಬೆಂಬಲವಾಗಿ ನಿಲ್ಲುವ ಮೂಲಕ ತನಗೆ ಕಿರುಕುಳ ನೀಡುತ್ತಿರುವುದಾಗಿ ಮಾರುತಿ ನಾಯಕ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು , ಅದನ್ನು ಕುಟುಂಬದವರು ಆತ್ಮಹತ್ಯೆಯ ಮರುದಿನ ಪೊಲೀಸರಿಗೆ ನೀಡಿದ್ದರು.
ಅಕ್ಟೋಬರ್ 20ರಂದು ಮಾರುತಿ ನಾಯಕ್ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.
ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ
ಪ್ರಕರಣವು ಇದೀಗ ರಾಜಕೀಯ ತಿರುವು ಪಡೆಯುವ ಸಾಧ್ಯತೆ ಕಂಡು ಬಂದ ಕಾರಣ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಮಾರುತಿ ನಾಯಕ್ ನ ಮನಸ್ಥಿತಿ ಹಾಗೂ ಹಿಂದೆ 2019ರಲ್ಲಿ ತನ್ನ ಮನೆಗೆ ತಾನೇ ಬೆಂಕಿ ಹಚ್ಚಿಕೊಂಡು , ಎದುರಾಳಿಯ ಮೇಲೆ ಆರೋಪ ಹೊರಿಸಿದ ಪ್ರಕರಣದಲ್ಲಿ ‘ ಬಿ’ ರಿಪೋರ್ಟ್ ಆಗಿರುವುದನ್ನು ಪೋಲೀಸರು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ.
ಇನ್ನೊಂದೆಡೆ ಬಿಜೆಪಿ ಮಾರುತಿ ನಾಯಕ್ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಸ್ಥಿತಿಯ ಲಾಭ ಪಡೆಯಬಹುದು ಎಂಬ ಸುಳಿವು ಸಿಗುತ್ತಿದ್ದಂತೆ ಈ ಪ್ರಕರಣವನ್ನು ಸಿಐಡಿಗೆ ವಹಿಸಲು ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.