Karwar; ಶಿಲ್ಪಿ ಅರುಣ್ ಯೋಗಿರಾಜ್ ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ
Team Udayavani, Mar 5, 2024, 11:05 AM IST
ಕಾರವಾರ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಬಾಲ ರಾಮನ ವಿಗ್ರಹವನ್ನು ಕೆತ್ತಿರುವ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಡಾ. ಹಿರೇಮಠ ಫೌಂಡೇಷನ್ ವತಿಯಿಂದ ಸೋಮವಾರ ಪ್ರತಿಷ್ಠಿತ “ಅಭಿನವ ಅಮರಶಿಲ್ಪಿ” ಬಿರುದು ನೀಡಿ ಗೌರವಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಗರ್ ದರ್ಶನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರನ್ನು ಪುರಸ್ಕರಿಸಲಾಯಿತು.
ದಾಂಡೇಲಿಯ ಮ್ಯಾಕ್ಸಿಲೋಫೇಷಿಯಲ್ ಸರ್ಜನ್ ಡಾ.ವಿಶ್ವನಾಥ ಹಿರೇಮಠ ಅವರು ಈ ಪ್ರತಿಷ್ಠಾನದ ನೇತೃತ್ವ ವಹಿಸಿಕೊಂಡಿದ್ದಾರೆ. ಇದು ರಾಜ್ಯದಾದ್ಯಂತ ಆಸ್ಪತ್ರೆಗಳ ಜಾಲವನ್ನು ಹೊಂದಿದೆ.
ಮೈಸೂರು ಜಿಲ್ಲೆಯಿಂದ ತೆಗೆದುಕೊಂಡು ಹೋಗಿರುವ ಕೃಷ್ಣ ಶಿಲೆಯಿಂದ ಕೆತ್ತಿದ 51 ಇಂಚಿನ ರಾಮಲಲ್ಲಾನ ಮೂರ್ತಿಗೆ ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಅರುಣ್ ಯೋಗಿರಾಜ್ ಅವರು ಈ ಮೂರ್ತಿ ನಿರ್ಮಿಸಿದ್ದು ಜನವರಿ 22ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾಣಪ್ರತಿಷ್ಠಾಪನೆ ಮಾಡಿದ್ದಾರೆ.
ಸೋಮವಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅರುಣ್ ಯೋಗಿರಾಜ್ ಅವರು, “ಅಯೋಧ್ಯೆಯಲ್ಲಿ ಇಡೀ ದೇಶವೇ ಬೆರಗಾಗುವಂತಹ ಅದ್ಭುತ ಶ್ರೀ ರಾಮ ಮಂದಿರ ನಿರ್ಮಿಸಿ ಉದ್ಘಾಟಿಸಿದ ಕೀರ್ತಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಮೋದಿಯವರಲ್ಲದೇ ಮತ್ಯಾರಿಂದಲೂ ಈ ಕೆಲಸ ಕೈಗೂಡುವುದು ಅಸಾಧ್ಯದ ಮಾತಾಗಿತ್ತು. ದೇಶದ ಜನತೆ ಶ್ರೀರಾಮನ ಮೇಲಿಟ್ಟಿರುವ ಶೃದ್ಧಾಭಕ್ತಿಗೆ ಬೆರಗಾಗಿದ್ದೇನೆ. ತಿಂಗಳೊಪ್ಪತ್ತಿನಲ್ಲಿ 65 ಲಕ್ಷ ಜನರು ಈಗಾಗಲೇ ಅಯೋಧ್ಯೆಯ ನೂತನ ರಾಮಮಂದಿರಕ್ಕೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ. ಈ ಪ್ರಶಸ್ತಿ ದೊರಕಿರುವುದು ನನಗೆ ಅತೀವ ಸಂತೋಷ ತಂದಿದೆ. ಇದಕ್ಕೆ ಕಾರಣೀಕರ್ತರಾದ ನನ್ನ ಸಹ ಕಲಾವಿದರು, ತಂತ್ರಜ್ಞರು ಹಾಗೂ ತಂಡದ ಪ್ರತಿ ಸದಸ್ಯರಿಗೂ ಈ ಐತಿಹಾಸಿಕ ಕ್ಷಣದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ. ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ನನ್ನಲ್ಲಿರುವ ಕಲೆ ಹಾಗೂ ಜ್ಞಾನವನ್ನು ಮುಂದಿನ ಪೀಳಿಗೆಗೆ ಕಲಿಸಿಕೊಟ್ಟು, ಅದನ್ನು ಉಳಿಸಲು ಪಣ ತೊಡಲಿದ್ದೇನೆ ಎಂದರು.
ಬೇಲೂರು ಮತ್ತು ಹಳೆಬೀಡಿನ ಐತಿಹಾಸಿಕ ದೇವಸ್ಥಾನಗಳಲ್ಲಿ ಸುಂದರ ಶಿಲ್ಪಗಳನ್ನು ಕೆತ್ತಿರುವ ಶಿಲ್ಪಿ ಜಕಣಾಚಾರಿಗೆ ಅಮರಶಿಲ್ಪಿ ಎಂಬ ಬಿರುದು ಹೊಂದಿದ್ದಾರೆ. ಅದಕ್ಕೆ ಸಮಾನಾರ್ಥವಾಗಿ ಅಯೋಧ್ಯೆಯ ರಾಮಮಂದಿರದ ಬಾಲಕ ರಾಮನ ಸುಂದರ ಮೂರ್ತಿಯನ್ನು ಕೆತ್ತಿರುವ ಮೈಸೂರು ಮೂಲದ ಅರುಣ್ ಯೋಗಿರಾಜ್ ಗೆ ಡಾ. ಹಿರೇಮಠ ಫೌಂಡೇಷನ್ ಅಭಿನವ ಅಮರಶಿಲ್ಪಿ ಬಿರುದು ನೀಡಿ ಗೌರವಿಸಿತು.
ಇದೇ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ 200ಕ್ಕೂ ಅಧಿಕ ಧಾರ್ಮಿಕ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಮಾತನಾಡಿದರು. ಡಾ. ಹಿರೇಮಠ ಫೌಂಡೇಷನ್ನ ಡಾ. ವಿಶ್ವನಾಥ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.