Karwar To Banavasiಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿ ಸರಳತೆ ಮೆರೆದ ಜಿಲ್ಲಾಧಿಕಾರಿ ಗಂಗೂಬಾಯಿ
Team Udayavani, Oct 10, 2023, 9:53 PM IST
ಕಾರವಾರ : ಬನವಾಸಿಯಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿ ಅವರ ಜನತಾದರ್ಶನ ಕಾರ್ಯಕ್ರಮಕ್ಕೆ ತಮ್ಮ ಅಧಿಕೃತ ಸರ್ಕಾರಿ ವಾಹನ ಬಿಟ್ಟು, ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್‌ನಲ್ಲಿ ಕಾರವಾರದಿಂದ ಬನಬಾಸಿತನಕ
ತೆರಳಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸರಳತೆ ಮೆರೆದರು.
ಜಿಲ್ಲಾಧಿಕಾರಿ ಅವರೊಂದಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರವಾರ ದಿಂದ ಸರ್ಕಾರಿ ಬಸ್ ಮೂಲಕ ತೆರಳಿದ್ದು, ಜಿಲ್ಲಾಧಿಕಾರಿ ಮತ್ತು ಪುರುಷ ಅಧಿಕಾರಿಗಳು ಬಸ್ ಟಿಕೆಟ್ ದರ ಪಾವತಿಸಿದರೆ , ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯ ಸೌಲಭ್ಯ ಪಡೆದುಕೊಂಡರು.
ಸರ್ಕಾರಕ್ಕೆ ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಪರಿಸರ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ಎಲ್ಲಾ ಅಧಿಕಾರಿಗಳು ತಮ್ಮ ಸರಕಾರಿ ವಾಹನವನ್ನು ಉಪಯೋಗಿಸದೇ, ಸರ್ಕಾರಿ ಬಸ್ ಮೂಲಕವೇ ಪ್ರಯಾಣಿಸಿದರು.
ಬಸ್‌ನಲ್ಲಿ ಸಂಚರಿಸುವ ಮೂಲಕ ಪ್ರತಿದಿನ ಬಸ್ ಮೂಲಕ ಕಚೇರಿಗಳಿಗೆ ಅಗಮಿಸಿ ವಿವಿಧ ಸಮಸ್ಯೆಗೆ ಪರಿಹಾರ ಕೋರುವ ನಾಗರಿಕರ ಕಷ್ಟ ಅಧಿಕಾರಿಗಳಿಗೆ ತಿಳಿಯಲಿದೆ. ಅಲ್ಲದೆ ಎಲ್ಲಾ ಅಧಿಕಾರಿಗಳು ಒಂದೇ ವಾಹನದಲ್ಲಿ ಪ್ರಯಾಣಿಸುವ ಮೂಲಕ ಪರಸ್ಪರ ವಿವಿಧ ಇಲಾಖಾ ಸಮಸ್ಯೆಗಳನ್ನು ಸಮನ್ವಯದ ಮೂಲಕ ಬಗೆಹರಿಸಿಕೊಳ್ಳಲೂ ಕೂಡಾ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.