ನೀರಜ್ ಚೋಪ್ರಾ ತರಬೇತುದಾರ ಕಾಶೀನಾಥ್‍ಗೆ ಶಿರಸಿಯಲ್ಲಿ ಸನ್ಮಾನ
Team Udayavani, Aug 29, 2021, 2:46 PM IST
ಶಿರಸಿ : ಟೋಕಿಯೋ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರ ತರಬೇತುದಾರ ಶಿರಸಿಯ ಕಾಶೀನಾಥ್ ನಾಯಕ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ರಾಷ್ಟ್ರೀಯ ಕ್ರೀಡಾ ದಿನವಾದ ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಕಾಶೀನಾಥ್ ನಾಯಕ್ ಅವರಿಗೆ ಸನ್ಮಾನ ಮಾಡಲಾಯಿತು.
ಈ ವೇಳೆ ಮಾತನಾಡಿದ ಕಾಶೀನಾಥ್ ಅವರು, ಭಾರತೀಯ ಕೋಚ್ ಗಳಿಗೆ ಸರಿಯಾದ ಪ್ರೋತ್ಸಾಹ ಸಿಗಲಿಲ್ಲ. ಆದರೂ ಕೂಡ ನಾವು ನಮ್ಮ ದೇಶಕ್ಕಾಗಿ ಕೆಲಸ ಮಾಡಿದೆವು.ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಖುಷಿ ನೀಡಿದೆ.
ಇನ್ನು ಈ ಭಾಗದಲ್ಲಿ ಆಕಾಡೆಮಿ ತೆರೆಯುವ ಕನಸು ಹಂಚಿಕೊಂಡ ಕಾಶೀನಾಥ್, ನಮ್ಮ ಕಡೆಯ ಜನರು ಒಲಿಂಪಿಕ್ ನಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಒಂದು ಆಕಾಡೆಮಿ ತೆರೆಯುವ ಕನಸು ನನ್ನಲ್ಲಿದೆ. ಇದಕ್ಕೆ ಸರ್ಕಾರದಿಂದ ಸಹಕಾರ ಕೂಡ ದೊರೆಯುವ ಭವವಸೆ ಇದೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಡಿವೈಎಸ್ಪಿ ರವಿ ನಾಯ್ಕ, ತಹಸೀಲ್ದಾರ ಕುಲಕರ್ಣಿ ಎಂ.ಆರ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.