Sirsi: ವಿಹಿಂಪ ಹಿರಿಯ ಮುಖಂಡ ಕೇಶವ ಹೆಗಡೆ ಹೃದಯಾಘಾತದಿಂದ ನಿಧನ
Team Udayavani, Jul 5, 2023, 6:42 PM IST
ಶಿರಸಿ: ವಿಶ್ವ ಹಿಂದು ಪರಿಷತ್ತಿನ ಹಿರಿಯ ಮುಖಂಡ, ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ (63) ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಶಂಕರಪುರದಲ್ಲಿರುವ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿದ್ದ ಕೇಶವ ಹೆಗಡೆ ಅವರಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿತ್ತು. ಕೂಡಲೆ ಅವರನ್ನು ಸಮೀಪದಲ್ಲಿರುವ ರಂಗದೊರೈ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ ಕೊನೆಯ ಉಸಿರೆಳೆದಿದ್ದರು.
ಶರೀರವನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಶಿಲ್ಪ ಸಭಾಂಗಣದಲ್ಲಿ ಬುಧವಾರ ರಾತ್ರಿ ತನಕ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದ ಬಳಿಕ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ಕರತರಲಾಗುತ್ತಿದೆ.
ಮೂಲತಃ ಶಿರಸಿಯ ತಟ್ಟಿಸರ ಮಣ್ಣಿಮನೆಯ ಕೇಶವ ಹೆಗಡೆ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದವರು. ನಂತರ ಪೂರ್ಣಾವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡ ಕೇಶವ ಹೆಗಡೆ ಅವರನ್ನು ಬಳಿಕ ವಿಶ್ವ ಹಿಂದೂ ಪರಿಷತ್‌ಗೆ ನಿಯೋಜನೆ ಮಾಡಲಾಗಿತ್ತು. ರಾಮಮಂದಿರ ಹೋರಾಟ ಸೇರಿ ವಿಹಿಂಪದ ಎಲ್ಲ ಹೋರಾಟ, ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಪ್ರಖರ ಮಾತು ಹಾಗೂ ನೇರ ನುಡಿಯಿಂದ ಸಂಘಟನಾ ವಲಯದಲ್ಲಿ ಗುರುತಾಗಿದ್ದರು.
ಮೃತರು ಓರ್ವ ಸಹೋದರ, ಐವರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ನೆಮ್ಮದಿಯಲ್ಲಿ ಅಂತ್ಯಕ್ರಿಯೆ
ಶಿರಸಿ: ಕೇಶವ ಹೆಗಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಗರದ ಸಾಮ್ರಾಟ ಎದುರಿನ ನೆಮ್ಮದಿಯ ಸದ್ಗತಿಯಲ್ಲಿ ಅವಕಾಶ ಮಾಡಲಾಗಿದೆ.
ಗುರುವಾರ ಬೆಳಿಗ್ಗೆ ೬ ರಿಂದ11ರ ತನಕ ಸಾರ್ವಜನಿಕ ದರ್ಶನ, ಬಳಿಕ ಶ್ರದ್ದಾಂಜಲಿ ಸಭೆ, ನಂತರ ಅಂತ್ಯಕ್ರಿಯೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ರಾಷ್ಟ್ರ ಪ್ರಮುಖರು, ಆರ್ ಎಸ್ ಎಸ್ ಪ್ರಮುಖರೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾಗಿದ್ದ ಮರಿಯ ಕ್ರಿಸ್ತರಾಜ್ ಧಾರವಾಡಕ್ಕೆ ವರ್ಗಾವಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.