ಡಿಕೆಶಿ ಸಮರ್ಥ ಮುಂದಾಳು
Team Udayavani, Jul 3, 2020, 5:19 PM IST
ಹೊನ್ನಾವರ: ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ಶಿವಾನಂದ ಹೆಗಡೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ವೀಕ್ಷಿಸಿದರು.
ಕಡತೊಕಾದ ಪ್ರಸಿದ್ಧ ಸ್ವಯಂ ಭೂ ದೇವಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಸಂವಿಧಾನದ ಪೀಠಿಕೆಯನ್ನು ಓದುವಿದರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದಾಗಿ ಪ್ರತಿಜ್ಞೆಗೈದರು.
ಥರ್ಮಲ್ ಸ್ಕ್ರೀನಿಂಗ್ ಮಾಡಿ ಸೆನಿಟೈಸರ್ ನೀಡಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕಾರ್ಯಕ್ರಮ ನಡೆಸಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾಗಿ ಸಲೀಮ ಅಹ್ಮದ್, ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಅಧಿಕಾರ ಸ್ವೀಕರಿಸುವ ವಿನೂತನ ಪ್ರತಿಜ್ಞಾ ಕಾರ್ಯಕ್ರಮ ಕೆಪಿಸಿಸಿ ಕಾರ್ಯಾಲಯದಲ್ಲಿ ನಡೆದಿದ್ದು ವಿವಿಧ ಮಾಧ್ಯಮಗಳ ಮುಖಾಂತರ ರಾಜ್ಯಾದ್ಯಂತ ಪ್ರಸಾರಗೊಂಡಿದೆ. ಪ್ರತಿ ಪಂಚಾಯತ ಮಟ್ಟದಲ್ಲಿ ಲಕ್ಷಾಂತರ ಜನ ಪಾಲ್ಗೊಂಡು ವೀಕ್ಷಿಸಿದ್ದು ದಾಖಲೆಯಾಗಿದೆ.
ಪ್ರತಿಜ್ಞಾ ಕಾರ್ಯಕ್ರಮದ ನಂತರ ಸ್ವಯಂಭೂ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಗೊಂಡು ಅಧಿಕಾರ ಹಿಡಿಯಲೆಂದು ಪ್ರಾರ್ಥಿಸಲಾಯಿತು. ತಾಪಂ ಸದಸ್ಯೆ ರೂಪಾ ಗೌಡ, ಗ್ರಾಪಂ ಉಪಾಧ್ಯಕ್ಷ ಎಂ.ಎಸ್. ಹೆಗಡೆ, ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಪಟಗಾರ್ ಮತ್ತು ನಾರಣಪ್ಪ ಗೌಡ, ವಿಎಸ್‌ಎಸ್ ಉಪಾಧ್ಯಕ್ಷ
ರಾಮಚಂದ್ರ ನಾಯ್ಕ್, ಗ್ರಾಪಂ ಸದಸ್ಯರಾದ ಗೌರಿ ನಾಯದಕ್, ಕಲಾವತಿ ಗೌಡ, ಉದಯ ಮುಕ್ರಿ, ಕಾಂಗ್ರೆಸ್ ಪ್ರಮುಖರಾದ ಕುಪ್ಪು ಗೌಡ, ಎಲ್.ಎನ್. ಭಟ್, ಶ್ರೀನಾಥ್ ಶೆಟ್ಟಿ , ಬಾಲು ಭಂಡಾರಿ, ಕಿರಣ ಭಂಡಾರಿ, ಶ್ರೀಪತಿ ಶೆಟ್ಟಿ, ಸುಬ್ರಮಣ್ಯ ಹೆಗಡೆ, ಸುಬ್ರಾಯ್ ಗೌಡ, ಮಂಜುನಾಥ್ ಗೌಡ, ಪುಟ್ಟ ಗೌಡ, ಅನಂತ ಪಟರ್ಗಾ, ಕೃಷ್ಣ ಸಿದ್ದನ್, ರಾಜೇಶ್ ಗುನಗ, ಪಿ.ಕೆ ಭಟ್, ರಾಜು ನಾಯ್ಕ್, ಮಹೇಶ್ ಶಿರೂರು, ಗ್ರಾಪಂ ಸದಸ್ಯರು, ಸೊಸೈಟಿ ನಿರ್ದೇಶಕರು, ಪದಾಧಿಕಾರಿಗಳು ಮತ್ತು ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.