Kumta ಕೊನೆಗೂ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!
ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ
Team Udayavani, Mar 23, 2024, 6:56 PM IST
ಕುಮಟಾ: ತಾಲೂಕಿನ ಚಿತ್ರಗಿಯ ಸುತ್ತಮುತ್ತ ಕಳೆದ ಕೆಲ ತಿಂಗಳುಗಳಿಂದ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಸತತ ಪ್ರಯತ್ನದಿಂದ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಚಿರತೆಯು ಚಿತ್ರಗಿ, ಹಳಕಾರ ಸುತ್ತಮುತ್ತಲಿನ ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಂಡು ಸಾರ್ವಜನಿಕರಿಗೆ ಆತಂಕವನ್ನು ಉಂಟುಮಾಡಿತ್ತು.ಇದರಿಂದಾಗಿ ಈ ಭಾಗದಲ್ಲಿ ಜನ ಓಡಾಡಲು ಭಯಪಡುವಂತಾಗಿತ್ತು.
ತಾಲೂಕಿನ ಹೊಲನಗದ್ದೆಯಲ್ಲಿ ಚಿರತೆಯೊಂದು ಮನೆಯಲ್ಲಿದ್ದ ಎರಡು ನಾಯಿಯನ್ನು ಹೊತ್ತೊಯ್ದ ಘಟನೆಯ ಬಳಿಕ ಇಲ್ಲಿನ ಸುತ್ತಮುತ್ತಲಿನ ಜನ ಇನ್ನಷ್ಟು ಭಯಭೀತರಾಗಿದ್ದರು.ಹೀಗಾಗಿ ಚಿರತೆಯನ್ನು ಹಿಡಿಯಬೇಕೆಂದು ಪಟ್ಟು ಹಿಡಿದಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಇದೊಂದು ಸವಾಲಾಗಿತ್ತು.ಶನಿವಾರ ಚಿತ್ರಗಿಯ ಅರಣ್ಯ ಸಮೀಪದಲ್ಲಿ ಬೋನಿನೊಳಗೆ ನಾಯಿಯನ್ನು ಕೂಡಿಹಾಕಿ ಇನ್ನೊಂದೆಡೆಯಿಂದ ಬಾಗಿಲು ಬಂದ್ ಮಾಡಲಾಗಿತ್ತು.ಇನ್ನೊಂದೆಡೆ ಬಾಗಿಲು ತೆಗೆದಿದ್ದು, ಈ ವೇಳೆ ನಾಯಿ ಹಿಡಿಯಲು ಪಂಜರದೊಳಗೆ ಬರುತ್ತಿದ್ದಂತೆ ಚಿರತೆಯು ಸೆರೆಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಕೆಲವು ತಿಂಗಳುಗಳ ಹಿಂದೆ ಹೆಗಡೆಯಲ್ಲಿ ಒಂದು ಚಿರತೆಯನ್ನು ಅಧಿಕಾರಿಗಳು ಸೆರೆಹಿಡಿದು ಅರಣ್ಯಪ್ರದೇಶಕ್ಕೆ ರವಾನಿಸಿದ್ದರು.ಈಗ ಮತ್ತೊಮ್ಮೆ ಚಿತ್ರಗಿಯಲ್ಲಿ ಚಿರತೆಯನ್ನು ಸೆರೆ ಹಿಡಿದು ಜನರ ಭಯವನ್ನು ಹೋಗಲಾಡಿಸಿದ್ದಾರೆ.ನಿಜಕ್ಕೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯ ಪ್ರಶಂಸನೀಯವಾದುದು ಎಂದು ಹೇಳಿದರು.
ಡಿ.ಎಫ್.ಓ. ಯೋಗೇಶ್ ಹಾಗೂ ಎ.ಸಿ.ಎಫ್. ಲೋಹಿತ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಎಸ್. ಟಿ. ಪಟಗಾರ, ಉಪವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ ನಾಯ್ಕ್, ರಾಘವೇಂದ್ರ ನಾಯ್ಕ್ ಹಾಗೂ ಹೂವಣ್ಣ ಗೌಡ, ಪ್ರಮುಖರಾದ ರಾಘವೇಂದ್ರ ನಾಯಕ, ಜಯಾ ಶೇಟ್, ಜಾಯ್ಸನ್ ಡಿಸೋಜ, ರಾಮದಾಸ ಭಂಡಾರಿ ಸೇರಿದಂತೆ ಮತ್ತಿತರರು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.