ಅಕ್ರಮ ಚೀರೆಕಲ್ಲು ಗಣಿಗಾರಿಕೆ

ಅಧಿಕಾರಿಗಳ ಜಾಣ ಕುರುಡುತನ ಪ್ರದರ್ಶನಉಸಿರಾಟ ಸಂಬಂ ಧಿತ ಕಾಯಿಲೆ ಭೀತಿ

Team Udayavani, Mar 19, 2020, 5:05 PM IST

19-March-19

ಕುಮಟಾ: ಊರಕೇರಿ ಗ್ರಾಮದಲ್ಲಿ ಅಕ್ರಮ ಚೀರೆಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಊರಕೇರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಸೈಟ್‌ನಲ್ಲಿ ದಿನವೀಡಿ ಕಲ್ಲು ಕಟಿಂಗ್‌ ಮಾಡುವ ಮಶೀನ್‌ ನಿಂದಾಗಿ ಸುತ್ತಲಿನ ವಾತಾವರಣ ಸದಾ ಕರ್ಕಶ ಧ್ವನಿಯಿಂದ ಕೂಡಿರುತ್ತಿದ್ದು, ವ್ಯಾಪಕ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಈ ಅಕ್ರಮ ಸೈಟ್‌ ಜನವಸತಿ ಪ್ರದೇಶಕ್ಕೆ ಹೊಂದಿಕೊಂಡಿ ಇರುವುದರಿಂದ ಕಲ್ಲಿನ ಧೂಳಿನ ಕಣಗಳು ವಾತಾವರಣದಲ್ಲಿ ಸೇರಿಕೊಂಡು, ಆ ಭಾಗದ ಜನವಸತಿ ಪ್ರದೇಶವನ್ನು ಕಲುಷಿತಗೊಳಿಸಿದೆ. ಇದರಿಂದ ಆ ಪ್ರದೇಶದಲ್ಲಿ ವಾಸಿಸುವ ಜನರಿಗೆ ಉಸಿರಾಟ ಸಂಬಂಧಿತ ಕಾಯಿಲೆಗಳು ಕಂಡುಬರುವ ಸಾಧ್ಯತೆ ಅಧಿಕವಾಗಿದೆ.

ಅಲ್ಲದೇ, ಊರಕೇರಿಯ ಕಿರಿದಾದ ರಸ್ತೆಯಲ್ಲಿ ಕಲ್ಲು ಸಾಗಾಣಿಕೆ ಮಾಡುವ ಮಿನಿ ಲಾರಿಗಳು, ಟಿಪ್ಪರ್‌ಗಳು ಪ್ರತಿನಿತ್ಯ ಓಡಾಡುವುದರಿಂದ ಗ್ರಾಮಸ್ಥರ ಸಂಚಾರಕ್ಕೂ ತೊಂದರೆಯಾಗುತ್ತಿದೆ. ವಾಹನದಿಂದ ಹಾರುವ ಧೂಳಿನ ಕಣಗಳು ದ್ವಿಚಕ್ರ ವಾಹನ ಸವಾರರ ಕಣ್ಣಿಗೆ ತಗುಲಿ ಅಪಘಾತವಾದ ಉದಾಹರಣೆಗಳೂ ಸಾಕಷ್ಟಿವೆ. ಈ ಭಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ.

ಊರಕೇರಿ ಗ್ರಾಮದ ಅದೇ ಸರ್ವೆ ನಂಬರ್‌ ಪಕ್ಕದಲ್ಲಿ ಇನ್ನೆರಡು ಹೊಸ ಕಲ್ಲು ಗಣಿಗಾರಿಕೆ ಆರಂಭವಾಗಿರುವುದನ್ನು ಗಮನಿಸಿದರೆ ಈ ಅಕ್ರಮ ಗಣಿಗಾರಿಕೆಗೆ ತಾಲೂಕು ಆಡಳಿತದ ಅಧಿಕಾರಿಗಳ ಕೃಪಾಕಟಾಕ್ಷ ಇರುವ ಶಂಕೆ ವ್ಯಕ್ತವಾಗಿದೆ ಎಂಬುದು ಗ್ರಾಮಸ್ಥರಾದ ನಾಗರಾಜ ಸತ್ಯಪ್ಪ ನಾಯ್ಕ ಮತ್ತು ಇತರರ ಆರೋಪವಾಗಿದೆ. ನಡೆಯುತ್ತಿರುವ ಅಕ್ರಮ ಚೀರೆಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಿರುವ ಬಗ್ಗೆ ತಹಶೀಲ್ದಾರ್‌ ಕಚೇರಿಯಲ್ಲಿ ಮಾಹಿತಿ ಹಕ್ಕಿನಲ್ಲಿ ಕೇಳಿದಾಗ ಯಾವುದೇ ಪರವಾನಗಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಅಕ್ರಮ ಚಿರೆಕಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಮಾಹಿತಿ ಕೇಳಿದರೆ ಸಮರ್ಪಕ ಉತ್ತರ ನೀಡದೆ ಸತಾಯಿಸುತ್ತಿದ್ದಾರೆ. ಉಪವಿಭಾಗಾಧಿಕಾರಿಗೆ ದೂರು ಸಲ್ಲಿಸಿದಾಗ ಕ್ರಮ ಕೈಗೊಳ್ಳುವ ಬಗ್ಗೆ ತಹಶೀಲ್ದಾರ್‌ ಕಚೇರಿಗೆ ನಿರ್ದೇಶನ ನೀಡಿದರೂ, ಪ್ರಯೋಜನವಾಗಿಲ್ಲ. ಎಸಿ ಕಚೇರಿಯಿಂದ ಬಂದ ಪತ್ರದ ಬಗ್ಗೆ ವಿಚಾರಿಸಿದರೆ ಆ ಪತ್ರವೇ ಬಂದಿಲ್ಲ ಎಂದು ವಾದಿಸಿದ್ದಾರೆ. ಪೋಸ್ಟ್‌ ಆಫೀಸ್‌ನಲ್ಲಿ ವಿಚಾರಿಸಿದರೆ ತಹಶೀಲ್ದಾರ್‌ ಕಚೇರಿಯಲ್ಲಿ ಪತ್ರ ತಲುಪಿದ ಬಗ್ಗೆ ದಾಖಲೆ ಕೂಡ ಲಭಿಸಿದೆ. ಇದನ್ನೆಲ್ಲ ಗಮನಿಸಿದರೆ ಈ ಅಕ್ರಮ ಗಣಿಗಾರಿಕೆಯಲ್ಲಿ ತಹಶೀಲ್ದಾರ್‌ ಕಚೇರಿ ಕೆಲ ಅಧಿಕಾರಿಗಳ ಪಾತ್ರವಿರುವುದು ಕಂಡುಬರುತ್ತದೆ.
ನಾಗರಾಜ ನಾಯ್ಕ,
ಊರಕೇರಿ ಗ್ರಾಮಸ್ಥ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.