ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಇಂದು

ಚುನಾವಣೆಗೆ ಮುನ್ನ ಅಭಿವೃದ್ಧಿ ಕಾರ್ಯಗಳತ್ತ ಶಾಸಕರ ಚಿತ್ತ

Team Udayavani, Apr 22, 2022, 10:24 AM IST

5

ಕಾರವಾರ: ನಗರದಲ್ಲಿ ಏ.22 ರಂದು 19.80 ಕೋಟಿ ರೂ. ವೆಚ್ಚದ ಮೂರು ಕಾಮಗಾರಿಗಳಿಗೆ ಚಾಲನೆ ಸಿಗಲಿದೆ.

ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಅಭಿವೃದ್ಧಿ ಕಾರ್ಯಗಳತ್ತ ಶಾಸಕರ ಚಿತ್ತ ನೆಟ್ಟಿದ್ದು, ಕಾನೂನು ಬದ್ಧವಾಗಿ ಪ್ರಾರಂಭಿಸಲಾಗುತ್ತಿದೆ. ವರ್ಷದ ಹಿಂದೆಯೇ ಮೂರು ಕಾಮಗಾರಿಗಳಿಗೆ ಪ್ಯಾಕೇಜ್‌ ಮಾಡಿ, ಅನುಮೋದನೆಗೆ ಪ್ರಯತ್ನಿಸಲಾಗಿತ್ತು. ಇದನ್ನು ಸ್ಥಳೀಯ ಗುತ್ತಿಗೆದಾರರು ಪ್ರಶ್ನಿಸಿ, ಕಾಮಗಾರಿಗಳ ಪ್ರಾರಂಭಕ್ಕೆ ಅಡ್ಡಿ ಮಾಡಿದ್ದರು. ಈಗ ಪಿಡಬ್ಲುಡಿ ಇಲಾಖೆಗೆ ನೂತನ ಕಚೇರಿ, ನೂತನ ಐಬಿ ಹಾಗೂ ಮಾಲಾದೇವಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗಳನ್ನು ಒಟ್ಟಿಗೆ ಆರಂಭಿಸುವ ಮೂಲಕ ಶಾಸಕರು ಜಾಣ ನಡೆ ಇಟ್ಟಿದ್ದಾರೆ.

ಚುನಾವಣೆಗೆ ಮುನ್ನ ಈ ಕಾಮಗಾರಿಗಳನ್ನು ಉದ್ಘಾಟಿಸಿ, ಅಭಿವೃದ್ಧಿ ಪರ್ವದ ಝಲಕ್‌ನ್ನು ಜನತೆಯ ಮುಂದಿಡಲು ಶಾಸಕಿ ರೂಪಾಲಿ ನಾಯ್ಕ ಸಜ್ಜಾಗುತ್ತಿದ್ದಾರೆ.

ಕ್ರೀಡಾಪಟುಗಳಿಗೆ ಅಗತ್ಯವಾದ ಸುಸಜ್ಜಿತ ಮಾಲಾದೇವಿ ಕ್ರೀಡಾಂಗಣ, ಲೋಕೋಪಯೋಗಿ ಇಲಾಖೆಯ ನೂತನ ಕಚೇರಿ ಕಟ್ಟಡ ಹಾಗೂ ಸರ್ಕ್ಯೂಟ್ ಹೌಸ್‌ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕಿ ರೂಪಾಲಿ ನಾಯ್ಕ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ನಗರದ ಮಾಲಾದೇವಿ ಕ್ರೀಡಾಂಗಣದಲ್ಲಿ ಕ್ರೀಡೆಗೆ ಪೂರಕವಾಗಿ ಒಳಂಗಣ ಹಾಗೂ ವಿಶ್ರಾಂತಿ ಕೋಣೆ ನಿರ್ಮಾಣದ ಬೇಡಿಕೆ ಬಹುದಿನಗಳಿಂದ ಇತ್ತು. ಇದಕ್ಕಾಗಿ 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ.

ಅಥ್ಲೆಟ್‌ಗಳಿಗೆ ಅಗತ್ಯ ಟ್ರ್ಯಾಕ್, ಗ್ಯಾಲರಿ, ಒಳಾಂಗಣ ಕ್ರೀಡಾಂಗಣ, ವಿಶ್ರಾಂತಿ ಕೊಠಡಿ, ಶೌಚಾಲಯ, ಮೈದಾನಕ್ಕೆ ಆವರಣ ಗೋಡೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಮಾಲಾದೇವಿ ಕ್ರೀಡಾಂಗಣದಲ್ಲಿ ಬರಲಿವೆ. ಈಗ ಇದ್ದ ಕ್ರೀಡಾಂಗಣದಲ್ಲಿ ಅಗತ್ಯ ಸೌಲಭ್ಯವೂ ಇಲ್ಲದೆ ಅಥ್ಲೆಟ್ಸ ಕ್ರೀಡಾಪಟುಗಳು ಅವಕಾಶದಿಂದ ವಂಚಿತರಾಗುತ್ತಿದ್ದರು. ಇದನ್ನು ಮನಗಂಡು ಶಾಸಕಿ ರೂಪಾಲಿ ನಾಯ್ಕ ಯೋಜನೆ ರೂಪಿಸಿ ಸರ್ಕಾರದಿಂದ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲೋಕೋಪಯೋಗಿ ಇಲಾಖೆ ಸರ್ಕ್ಯೂಟ್ ಹೌಸ್‌ ಕಟ್ಟಡ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಬಲಿಯಾಗಿತ್ತು. ಈಗ ನೂತನ ಕಟ್ಟಡ ಸಮುದ್ರ ತೀರದ ಎದುರಿಗಿದ್ದು, ಸೂಕ್ತ ಪರಿಸರದಲ್ಲಿ ನೂತನ ಕಟ್ಟಡ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಆಕರ್ಷಕ ರೀತಿಯಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಯೋಜನೆ ಸಹ ಸಿದ್ಧವಾಗಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆ ಆಗುವಂತೆ ನೋಡಿಕೊಂಡಿದ್ದಾರೆ. ಲೋಕೋಪಯೋಗಿ ಇಲಾಖೆ ಕಚೇರಿಯ ಕಟ್ಟಡವೂ ಸಮರ್ಪಕವಾಗಿಲ್ಲದೆ, ಉದ್ಯೋಗಿಗಳಿಗೆ ಕೆಲಸ ಮಾಡಲೂ ತೊಂದರೆ ಉಂಟಾಗುತ್ತಿತ್ತು. ಇದನ್ನು ಮನಗಂಡ ಶಾಸಕರು ಕಚೇರಿಯಲ್ಲಿ ಉತ್ತಮ ಸೌಲಭ್ಯ ಕಲ್ಪಿಸಿ, ಉದ್ಯೋಗಿಗಳಿಗೆ ನಿರಾತಂಕವಾಗಿ ಕೆಲಸ ಮಾಡುವಂತೆ ಆಗಲು ನೂತನ ಕಟ್ಟಡ ನಿರ್ಮಾಣಕ್ಕೆ 9.80 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಕಾರವಾರ ಹಾಗೂ ಅಂಕೋಲಾ ತಾಲೂಕಿನಲ್ಲಿ ವಿವಿಧ ಕಡೆ ರಸ್ತೆ ಹಾಗೂ ಸಣ್ಣ ಸೇತುವೆಗಳ ಕಾಮಗಾರಿಗಳು ಭರದಿಂದ ನಡೆಯುತ್ತಿವೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಜನರ ಬೇಡಿಕೆಗಳ ಪುಟ್ಟ ಪುಟ್ಟ ಕಾಮಗಾರಿಗಳು ನಡೆಯುತ್ತಿದ್ದು, ಜನರ ಕಣ್ಣೆದರು ಅಭಿವೃದ್ಧಿ ಕಾಮಗಾರಿ ಕಾಣುವಂತೆ ನೋಡಿಕೊಳ್ಳಲಾಗಿದೆ.

ಜಿಲ್ಲಾ ಕೇಂದ್ರದ ಕ್ರೀಡಾಪಟುಗಳು ಅವಕಾಶದಿಂದ ವಂಚಿತರಾಗದಂತೆ ಕ್ರೀಡಾಪಟುಗಳ ಉತ್ತಮ ಭವಿಷ್ಯಕ್ಕಾಗಿ ಮಾಲಾದೇವಿ ಕ್ರೀಡಾಂಗಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಲಾಗುತ್ತದೆ.ಅನುದಾನ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ.ಪಾಟೀಲ, ಸಚಿವ ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸಹಾಯ ನೆನಪಿಸಿಕೊಳ್ಳುತ್ತೇನೆ. -ರೂಪಾಲಿ ನಾಯ್ಕ, ಶಾಸಕರು, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರ.

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.